Breaking News

ದೇವಸ್ಥಾನದ ಹುಂಡಿಗೆ 100 ಕೋಟಿ ರೂಪಾಯಿ ಮೊತ್ತದ ಚೆಕ್!ಖಾತೆಯಲ್ಲಿದ್ದಿದ್ದು?

Spread the love

ವಿಶಾಖಪಟ್ಟಣಂ (ಆಂಧ್ರಪ್ರದೇಶ): ವಿಶಾಖಪಟ್ಟಣದ ಸುಪ್ರಸಿದ್ಧ ಸಿಂಹಾಚಲಂನ ವರಮಹಾಲಕ್ಷ್ಮೀ ನರಸಿಂಹ ದೇವಸ್ಥಾನದ ಹುಂಡಿಯಲ್ಲಿ ಭಕ್ತರೊಬ್ಬರು ಹಾಕಿರುವ 100 ಕೋಟಿ ರೂ.

ಮೊತ್ತದ ಚೆಕ್ ಸಿಕ್ಕಿದೆ. ತಿಂಗಳಲ್ಲಿ ಎರಡು ಬಾರಿ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ನಡೆಯುತ್ತದೆ. ನಿನ್ನೆಯೂ (ಗುರುವಾರ) ಹುಂಡಿ ಎಣಿಕೆ ಕಾರ್ಯ ನಡೆದಿದೆ. ಈ ವೇಳೆ ಚೆಕ್ ಸಿಕ್ಕಿದ್ದು ಹುಬ್ಬೇರಿಸಿತ್ತು. ಇಷ್ಟು ದೊಡ್ಡ ಮೊತ್ತದ ಚೆಕ್​ ನೋಡಿ ದೇವಸ್ಥಾನದ ಸಿಬ್ಬಂದಿ ಅರೆಕ್ಷಣ ಹೌಹಾರಿದ್ದಾರೆ.

ಚೆಕ್​ ಅನ್ನು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗೆ (ಇಒ) ನೀಡಲಾಗಿದೆ. ಗಮನಿಸಿದ ಇಒ, ಚೆಕ್​ ಬರೆಯುವ ವೇಳೆ ಏನಾದರೂ ತಪ್ಪಾಗಿರಬಹುದು. ಇದು ನಿಜವಾಗಿಯೂ 100 ಕೋಟಿ ರೂಪಾಯಿಗಳ ಚೆಕ್ ಆಗಿದೆಯೇ? ಎಂದು ಪರಿಶೀಲಿಸಲು ಸಂಬಂಧಿಸಿದ ಬ್ಯಾಂಕ್ ಶಾಖೆಯ ಅಧಿಕಾರಿಗೆ ಸೂಚಿಸಿದ್ದಾರೆ. ಬ್ಯಾಂಕ್​ ಅಧಿಕಾರಿ ಪರಿಶೀಲಿಸಿ, ಚೆಕ್ ನೀಡಿದವರ ಖಾತೆಯಲ್ಲಿ ಕೇವಲ 17 ರೂಪಾಯಿ ಮಾತ್ರ ಇದೆ ಎಂದು ತಿಳಿಸಿದ್ದಾರೆ!.

ಆ ವ್ಯಕ್ತಿಯನ್ನು ಗುರುತಿಸಲು ಇಒ ಬ್ಯಾಂಕ್​ ಅಧಿಕಾರಿಗೆ ತಿಳಿಸಿದ್ದಾರೆ. ದಾನಿಯು ದೇವಾಲಯದ ಅಧಿಕಾರಿಗಳಿಗೆ ಮೋಸ ಮಾಡುವ ಉದ್ದೇಶ ಹೊಂದಿದ್ದರೆ, ಆತನ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ದಾಖಲಿಸಲಾಗುತ್ತದೆ ಎಂದು ಸಿಬ್ಬಂದಿ ಮಾಹಿತಿ ನೀಡಿದರು. ಚೆಕ್‌ನ ಫೋಟೋ ಗುರುವಾರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್​ ಆಗಿದೆ. ಇದು ಖಾಸಗಿ ಬ್ಯಾಂಕ್‌ಗೆ ಸೇರಿದ ಚೆಕ್‌ ಆಗಿದ್ದು, ಬೊಡ್ಡೆಪಲ್ಲಿ ರಾಧಾಕೃಷ್ಣ ಎಂಬವರು ಸಹಿ ಹಾಕಿದ್ದಾರೆ. ಅಲ್ಲದೇ ದಿನಾಂಕದ ಜಾಗವನ್ನು ಖಾಲಿ ಬಿಡಲಾಗಿದೆ. ವಿಶಾಖಪಟ್ಟಣದ ಶಾಖೆಯಲ್ಲಿ ಈ ವ್ಯಕ್ತಿ ಖಾತೆದಾರರು ಎಂದು ಚೆಕ್ ತೋರಿಸುತ್ತದೆ.

ಕಳೆದ ವರ್ಷವೂ ನಡೆದಿತ್ತು ಇಂಥದ್ದೇ ಘಟನೆ: ತೆಲಂಗಾಣ ರಾಜ್ಯದ ಜೋಗುಳಾಂಬ ಜಿಲ್ಲೆಯ ಆಲಂಪುರ ಶಿವನ ದೇವಸ್ಥಾನದ ಹುಂಡಿ ಎಣಿಕೆ ವೇಳೆ 100 ಕೋಟಿ ರೂ ಮೊತ್ತದ ಚೆಕ್​ ಪತ್ತೆಯಾಗಿತ್ತು. ಈ ಬಗ್ಗೆ ದೇವಸ್ಥಾನದ ಅಧಿಕಾರಿಗಳು ಬ್ಯಾಂಕ್​ನಲ್ಲಿ ವಿಚಾರಿಸಿದಾಗ ಅಸಲಿ ವಿಷಯ ಬೆಳಕಿಗೆ ಬಂದಿದೆ. ಚೆಕ್ ಎಪಿಜಿವಿಬಿ ಬ್ಯಾಂಕ್​ ವಾರಂಗಲ್ ಜಿಲ್ಲೆ ಶಾಖೆಗೆ ಸೇರಿದ್ದಾಗಿತ್ತು. ಆ ಖಾತೆಯಲ್ಲಿ ಕೇವಲ 23 ಸಾವಿರ ರೂ. ಮಾತ್ರ ಇರುವುದು ತಿಳಿದು ಬಂದಿತ್ತು. ಬಳಿಕ ಚೆಕ್​ ಬೌನ್ಸ್​ ಪ್ರಕರಣ ದಾಖಲಿಸಲಾಗಿತ್ತು. ನಂತರ ಪರಿಶೀಲಿಸಿದಾಗ ಹುಂಡಿಗೆ ಚೆಕ್​ ಹಾಕಿದ್ದ ವ್ಯಕ್ತಿ ಮಾನಸಿಕ ಅಸ್ವಸ್ಥರೆಂದು ತಿಳಿದು ಬಂದಿತ್ತು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ