ದೂದ್ ಪೇಡಾ ದಿಗಂತ್ ನಟನೆಯ ‘ಪೌಡರ್’ ಸಿನಿಮಾದ ಮುಹೂರ್ತ ಸಮಾರಂಭವು ನಿನ್ನೆ ವರಮಹಾಲಕ್ಷ್ಮಿ ಹಬ್ಬದಂದು ನೆರವೇರಿತು.
ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಕಥೆಯ ಚಿತ್ರಗಳ ಮೂಲಕ ಪ್ರೇಕ್ಷಕರ ಮನಸ್ಸು ಗೆದ್ದಿರುವ ನಟ ದೂದ್ ಪೇಡಾ ದಿಗಂತ್. ಫಿಟ್ನೆಸ್ ಹೀರೋ ಅಂತಲೇ ಕರೆಸಿಕೊಂಡಿರುವ ಈ ಹ್ಯಾಂಡ್ಸಮ್ ಹಂಕ್ ಹೊಸ ಸಿನಿಮಾದೊಂದಿಗೆ ತೆರೆ ಮೇಲೆ ಬರಲು ಸಜ್ಜಾಗಿದ್ದಾರೆ.
ಚಿತ್ರಕ್ಕೆ ‘ಪೌಡರ್’ ಎಂದು ವಿಭಿನ್ನವಾಗಿ ಟೈಟಲ್ ಇಡಲಾಗಿದೆ. ಈ ಸಿನಿಮಾದ ಮುಹೂರ್ತ ಸಮಾರಂಭವು ನಿನ್ನೆ ವರಮಹಾಲಕ್ಷ್ಮಿ ಹಬ್ಬದಂದು ನೆರವೇರಿತು.
‘ಪೌಡರ್’ ಚಿತ್ರತಂಡಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡುವ ಮೂಲಕ ಚಾಲನೆ ನೀಡಿದರು. ನಿರ್ಮಾಪಕ ಕಾರ್ತಿಕ್ ಗೌಡ ಅವರ ತಂದೆ ರಾಮಕೃಷ್ಣೇಗೌಡ ಕ್ಯಾಮರಾ ಸ್ವಿಚ್ಡ್ ಆನ್ ಮಾಡಿದರು. ಈ ಶುಭ ಸಂದರ್ಭದಲ್ಲಿ ದಿಗಂತ್, ಧನಂಜಯ್, ಸಂತೋಷ್ ಆನಂದರಾಮ್, ರೋಹಿತ್ ಪದಕಿ, ಧೀರೇನ್ ರಾಮಕುಮಾರ್, ನವೀನ್ ಶಂಕರ್, ಕೆ.ಮಂಜು, ಭೂಮಿ ಶೆಟ್ಟಿ, ನಾಗಭೂಷಣ್, ಟಿವಿಎಫ್ ಸಂಸ್ಥಾಪಕರಾದ ಅರುಣಭ್ ಕುಮಾರ್, ವಿಜಯ್ ಕೋಶಿ, ಚೈತನ್ಯ ಕುಂಬಕೋಣಂ ಮುಂತಾದವರು ಹಾಜರಿದ್ದರು.