Breaking News

ಸೂರ್ಯನನ್ನು ಅಧ್ಯಯನ ಮಾಡುವ ಆದಿತ್ಯ ಎಲ್ 1 ಗಗನನೌಕೆಯನ್ನು ಸೆಪ್ಟೆಂಬರ್ ಮೊದಲ ವಾರದಲ್ಲಿ ಉಡಾವಣೆ

Spread the love

ತಿರುವನಂತಪುರಂ (ಕೇರಳ) : ಚಂದ್ರಯಾನ-3 ಬಾಹ್ಯಾಕಾಶ ಯೋಜನೆಯ ಲ್ಯಾಂಡರ್ ‘ವಿಕ್ರಮ್’ ಈಗಾಗಲೇ ಚಂದ್ರನ ದಕ್ಷಿಣ ಧ್ರುವ ಪ್ರದೇಶದಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್​ ಆಗಿದ್ದು, ವೈಜ್ಞಾನಿಕ ಸಂಶೋಧನೆಗಳ ಕೆಲಸ ಪ್ರಾರಂಭಿಸಿದೆ.

ಇದರ ಬೆನ್ನಲ್ಲೇ ಇಸ್ರೋ ವಿಜ್ಞಾನಿಗಳು ತಮ್ಮ ಮುಂದಿನ ಗಮನವನ್ನು ಸೂರ್ಯನತ್ತ ಕೇಂದ್ರೀಕರಿಸಿದ್ದು, ದೇಶದ ಮೊದಲ ಸೌರ ಮಿಷನ್ ಆದಿತ್ಯ ಎಲ್ 1 ಉಡಾವಣೆಗೆ ಸಿದ್ಧವಾಗಿದೆ. ಈ ನೌಕೆಯನ್ನು ಸೆಪ್ಟೆಂಬರ್ ಮೊದಲ ವಾರದಲ್ಲಿ ಉಡಾವಣೆ ಮಾಡಲಾಗುವುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಮುಖ್ಯಸ್ಥ ಎಸ್‌. ಸೋಮನಾಥ್ ಶನಿವಾರ ತಿಳಿಸಿದರು.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಇಸ್ರೋ ಮುಖ್ಯಸ್ಥರು, “ಆದಿತ್ಯ ಎಲ್ 1 ಉಪಗ್ರಹ ಸಿದ್ಧವಾಗಿದೆ. ಈಗಾಗಲೇ ಶ್ರೀಹರಿಕೋಟಾವನ್ನು ತಲುಪಿದ್ದು, ಪಿಎಸ್‌ಎಲ್‌ವಿಗೆ ಸಂಪರ್ಕ ಹೊಂದಿದೆ. ಇಸ್ರೋದ ಮುಂದಿನ ಗುರಿ ಆದಿತ್ಯ ಎಲ್ 1ರ ಯಶಸ್ವಿ ಉಡಾವಣೆ. ಈ ಕಾರ್ಯ ಸೆಪ್ಟೆಂಬರ್ ಮೊದಲ ವಾರದಲ್ಲೇ ನಡೆಯಲಿದೆ. ಮುಂದಿನ ಎರಡು ದಿನಗಳಲ್ಲಿ ದಿನಾಂಕ ಪ್ರಕಟಿಸಲಾಗುವುದು” ಎಂದು ಹೇಳಿದರು.

ಆದಿತ್ಯ-L1 ಸೂರ್ಯನನ್ನು ಅಧ್ಯಯನ ಮಾಡುವ ಮೊದಲ ಬಾಹ್ಯಾಕಾಶ ಆಧಾರಿತ ಭಾರತೀಯ ವೀಕ್ಷಣಾಲಯ. ಇದು ಭೂಮಿಯಿಂದ ಸರಿಸುಮಾರು 1.5 ಮಿಲಿಯನ್ ಕಿಲೋಮೀಟರ್ ದೂರದಲ್ಲಿರುವ ಸೂರ್ಯನ ಲ್ಯಾಗ್ರೇಂಜ್ ಪಾಯಿಂಟ್ 1 (L1) ಸುತ್ತ ಹಾಲೋ ಕಕ್ಷೆಯಲ್ಲಿ ನೆಲೆಗೊಳ್ಳಲಿದೆ. ಉಡಾವಣೆಯ ಬಳಿಕ L1 ಪಾಯಿಂಟ್‌ಗೆ ಪ್ರಯಾಣಿಸಲು ಸುಮಾರು 120 ದಿನಗಳನ್ನು ತೆಗೆದುಕೊಳ್ಳುತ್ತದೆ. ಆ ಬಳಿಕ ಸೂರ್ಯನ ಕುರಿತು ಅಭೂತಪೂರ್ವ ಒಳನೋಟಗಳನ್ನು ಒದಗಿಸುವ ಗುರಿ ಹೊಂದಿದೆ.


Spread the love

About Laxminews 24x7

Check Also

ವರದಕ್ಷಿಣೆ ಕಿರುಕುಳ ಆರೋಪ, ಐಎಸ್‌ಡಿ ಡಿವೈಎಸ್‌ಪಿ ವಿರುದ್ಧ ಎಫ್ಐಆರ್

Spread the love ಬೆಂಗಳೂರು : ಡಿವೈಎಸ್‌ಪಿಯೊಬ್ಬರ ವಿರುದ್ಧ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. 41 ವರ್ಷದ ಮಹಿಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ