Breaking News

ಸಿಎಂ ಸಿದ್ದರಾಮಯ್ಯ ಅವರು ಆಗಸ್ಟ್ 27 ರಿಂದ 30 ರ ವರೆಗೆ ತವರು ಜಿಲ್ಲೆ ಮೈಸೂರಿನಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

Spread the love

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್ 27 ರಿಂದ 30 ರ ವರೆಗೆ ಜಿಲ್ಲೆಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಆಗಸ್ಟ್ 27ರ ಬೆಳಗ್ಗೆ 8 ಗಂಟೆಗೆ ಸ್ಥಳೀಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲಿದ್ದಾರೆ. ಆಗಸ್ಟ್ 28ರ ಬೆಳಗ್ಗೆ 11ಕ್ಕೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿರುವ ಕೆಡಿಪಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5 ಗಂಟೆಗೆ ಸಿದ್ದಾರ್ಥ ನಗರದ ಕಣ್ಣಿನ ಆಸ್ಪತ್ರೆ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು, ರಾತ್ರಿ 7 ಗಂಟೆಗೆ ಹೋಟೆಲ್ ಜೆಪಿ ಪ್ಯಾಲೇಸ್​ನಲ್ಲಿ ಗಂಗೋತ್ರಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಆಗಸ್ಟ್ 29 ರಂದು ಬೆಳಗ್ಗೆ 10:30ಕ್ಕೆ ಸುತ್ತೂರು ಮಠದ ಕಾರ್ಯಕ್ರಮದಲ್ಲಿ, ಮಧ್ಯಾಹ್ನ 1 ಗಂಟೆಗೆ ಕಡಕೋಳ ಕೈಗಾರಿಕಾ ಪ್ರದೇಶದ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಮಧ್ಯಾಹ್ನ 1:45ಕ್ಕೆ ಕೆಆರ್​ ಆಸ್ಪತ್ರೆಯ ಸುಟ್ಟ ಗಾಯಗಳ ನವೀಕರಣ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಭಾಗವಹಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಮೈಸೂರು ಚಾಮರಾಜನಗರ ಶಾಸಕರುಗಳನ್ನು ಭೇಟಿ ಮಾಡಿ, ಸಂಜೆ 6 ಗಂಟೆಗೆ ವಕೀಲರ ಸಂಘದ ಕಚೇರಿಗೆ ಭೇಟಿ ನೀಡಲಿದ್ದಾರೆ.

ಆಗಸ್ಟ್ 30 ಬುಧವಾರ ಬೆಳಗ್ಗೆ 11 ಗಂಟೆಗೆ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಗೃಹ ಲಕ್ಷ್ಮಿ ಯೋಜನೆಯ ಕಾರ್ಯಕ್ರಮದಲ್ಲಿ ಹಾಗೂ ಮಧ್ಯಾಹ್ನ 3:50 ಕ್ಕೆ ಸಿದ್ದಲಿಂಗಪುರದ ಕನಕ ಭವನ ಉಧ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಜೆ 5 ಗಂಟೆಗೆ ಬೆಂಗಳೂರಿಗೆ ಮರಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!

Spread the loveಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ