Breaking News

ಬಿಜೆಪಿ 2024ರ ಜೂನ್ ತಿಂಗಳಲ್ಲಿ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಗೆ ಉಸ್ತುವಾರಿಗಳನ್ನು ನೇಮಕ ಮಾಡಿದೆ.

Spread the love

ಬೆಂಗಳೂರು: ಲೋಕಸಭಾ ಚುನಾವಣೆ ಬಳಿಕ ನಡೆಯುವ ವಿಧಾನ ಪರಿಷತ್​ನ 7 ಸ್ಥಾನಗಳ ಚುನಾವಣೆಗೆ ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿ ಬಿಜೆಪಿ ಚುನಾವಣಾ ಸಿದ್ಧತಾ ಕಾರ್ಯವನ್ನು ಆರಂಭಿಸಿದೆ.

ವಿಧಾನಸಭಾ ಚುನಾವಣೆಯಲ್ಲಿ ಸೋತವರಿಗೂ ಜವಾಬ್ದಾರಿ ನೀಡಲಾಗಿದ್ದು, ಸಂಘಟನೆಗೆ ಬಳಸಿಕೊಳ್ಳಲು ಪಕ್ಷ ಮುಂದಾಗಿದೆ. ಈ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿ, 2024ರ ಜೂನ್ ತಿಂಗಳಲ್ಲಿ ನಡೆಯಲಿರುವ ರಾಜ್ಯ ವಿಧಾನ ಪರಿಷತ್ ಪದವೀಧರ ಕ್ಷೇತ್ರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯದ ಪ್ರಮುಖರನ್ನು ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಮಾಜಿ ಸಚಿವ ಬಿ ಶ್ರೀರಾಮುಲು, ನೈರುತ್ಯ ಪದವೀಧರ ಕ್ಷೇತ್ರಕ್ಕೆ ಸಿ ಟಿ ರವಿ, ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಆರ್ ಅಶೋಕ್, ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಮಾಜಿ ಸಿಎಂ ಡಿ ವಿ ಸದಾನಂದಗೌಡ, ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಸಿ ಟಿ ರವಿ, ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಮಾಜಿ ಡಿಸಿಎಂ ಡಾ. ಸಿ ಎನ್ ಅಶ್ವತ್ಥನಾರಾಯಣ ಅವರನ್ನು ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆ.

ವಿಧಾನಸಭಾ ಚುನಾವಣೆಯಲ್ಲಿ ಸೋತಿರುವ ಬಿ ಶ್ರೀರಾಮುಲು, ಸಿ ಟಿ ರವಿಗೆ ಅವಕಾಶ ನೀಡುವ ಜೊತೆಗೆ ಚುನಾವಣೆಗೆ ನಿಲ್ಲದೆ ಪಕ್ಷ ಸೂಚಿಸಿದ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬಂದಿರುವ ಈಶ್ವರಪ್ಪ ಅವರಿಗೆ ಮತ್ತೊಮ್ಮೆ ಹೆಚ್ಚಿನ ಜವಾಬ್ದಾರಿ ನೀಡಿ ಆಯನೂರು ಮಂಜುನಾಥ್ ರಾಜೀನಾಮೆಯಿಂದ ತೆರವಾದ ಕ್ಷೇತ್ರವನ್ನು ಪಕ್ಷದಲ್ಲೇ ಉಳಿಸಿಕೊಳ್ಳುವ ಹೊಣೆ ನೀಡಲಾಗಿದೆ.


Spread the love

About Laxminews 24x7

Check Also

ಕನ್ನಡಪರ ಹೋರಾಟಗಾರರು ತಮ್ಮ ಸುಪುತ್ರನ ವಿವಾಹ ಸಮಾರಂಭದ ಆಮಂತ್ರಣ ಪತ್ರವನ್ನು ನೀಡಿದರು.

Spread the loveಹಿರಿಯ ಕನ್ನಡಪರ ಹೋರಾಟಗಾರರು, ಮಾಜಿ ಶಾಸಕ ವಾಟಾಳ್ ನಾಗರಾಜ್ ಅವರು ಇಂದು ಬೆಂಗಳೂರಿನ ಗೃಹಕಚೇರಿಯಲ್ಲಿ ಸಚಿವ ಸತೀಶ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ