Breaking News

ಮಹಿಳಾ ಅಂಧರ ಕ್ರಿಕೆಟ್ ತಂಡಕ್ಕೆ ಚಿನ್ನ; ಪ್ರಧಾನಿ ಮೋದಿ ಅಭಿನಂದನೆ

Spread the love

ನವದೆಹಲಿ : ಅಂತಾರಾಷ್ಟ್ರೀಯ ಅಂಧರ ಕ್ರೀಡಾ ಒಕ್ಕೂಟದ ವರ್ಲ್ಡ್ ಗೇಮ್ಸ್ 2023 ರ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು 9 ವಿಕೆಟ್‌ಗ​ಳಿಂದ ಮಣಿಸಿದ ಭಾರತೀಯ ಮಹಿಳಾ ಅಂಧರ ಕ್ರಿಕೆಟ್ ತಂಡ ಚಿನ್ನದ ಪದಕ ಗೆಲ್ಲುವ ಮೂಲಕ ನಿನ್ನೆ (ಶನಿವಾರ) ಹೊಸ ಇತಿಹಾಸ ನಿರ್ಮಿಸಿದೆ.

ಐತಿಹಾಸಿಕ ಪದಕ ವಿಜೇತ ಮಹಿಳಾ ಕ್ರಿಕೆಟ್ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದು, “ನಿಮ್ಮ ಯಶಸ್ಸಿನಿಂದ ಇಡೀ ದೇಶವೇ ಹೆಮ್ಮೆಯಿಂದ ಬೀಗುತ್ತಿದೆ” ಎಂದು ಹೇಳಿದ್ದಾರೆ.

 

 

ಈ ಕುರಿತು ಎಕ್ಸ್​ ಆಯಪ್​ನಲ್ಲಿ ಸಂತಸ ಹಂಚಿಕೊಂಡಿರುವ ಮೋದಿ, “ಇಂಟರ್‌ನ್ಯಾಶನಲ್ ಬ್ಲೈಂಡ್ ಸ್ಪೋರ್ಟ್ಸ್ ಫೆಡರೇಶನ್ ವರ್ಲ್ಡ್ ಗೇಮ್ಸ್‌ನಲ್ಲಿ (IBSA) ಚಿನ್ನ ಗೆದ್ದ ಭಾರತೀಯ ಮಹಿಳಾ ಅಂಧರ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳು. ನಮ್ಮ ಕ್ರೀಡಾಪಟುಗಳು ಅದ್ಭುತ ಸಾಧನೆ ಮಾಡಿದ್ದಾರೆ. ಈ ಸಾಧನೆ ದೇಶಕ್ಕೆ ಹೆಮ್ಮೆ ತಂದಿದೆ” ಎಂದು ಕೊಂಡಾಡಿದ್ದಾರೆ.

 

ಬರ್ಮಿಂಗ್​ಹ್ಯಾಮ್​ನಲ್ಲಿ ನಡೆದ ಫೈನಲ್​ ಪಂದ್ಯದಲ್ಲಿ ಆಸೀಸ್‌​ ತಂಡವನ್ನು ಮಣಿಸಿದ ಭಾರತದ ನಾರಿಯರು ದಾಖಲೆ ಬರೆದರು. ಆಸೀಸ್ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್​ ನಷ್ಟಕ್ಕೆ 114 ರನ್ ​ಕಲೆಹಾಕಿತ್ತು. ಎರಡನೇ ಇನ್ನಿಂಗ್ಸ್​ ವೇಳೆ ಮಳೆ ಸುರಿದಿದ್ದು, ಆಟವನ್ನು ಡಿಎಲ್​ಎಸ್​ ನಿಯಮದಂತೆ 9 ಓವರ್‌ಗಿಳಿಸಿ ಭಾರತಕ್ಕೆ 43 ರನ್​ಗಳ ಗುರಿ ನೀಡಲಾಯಿತು. ಈ ಗುರಿ ಬೆನ್ನತ್ತಿದ ಭಾರತ, ಕೇವಲ 3.3 ಓವರ್​ಗಳಲ್ಲಿ 1 ವಿಕೆಟ್​ ನಷ್ಟಕ್ಕೆ 43 ರನ್ ​ಬಾರಿಸುವ ಮೂಲಕ ಗೆಲುವು ಸಾಧಿಸಿತು. ಇದೇ ಮೊದಲ ಬಾರಿಗೆ ಐಬಿಎಸ್‌ಎ ವಿಶ್ವ ಕ್ರೀಡಾಕೂಟದಲ್ಲಿ ಭಾರತದ ಮಹಿಳೆಯರು ಚಿನ್ನದ ಸಾಧನೆ ತೋರಿದ್ದಾರೆ.


Spread the love

About Laxminews 24x7

Check Also

ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ

Spread the loveಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ ಇಂದು ಬೆಳಗಾವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ