ರಾಜ್ಯ ಉಚ್ಚನ್ಯಾಯಲಯ ನೀಡಿರುವ ಆದೇಶದಲ್ಲಿ ಮಂಡಳಿ ಹೊರಡಿಸಿರುವ ಅಧಿಸೂಚನೆಯನ್ನು ಕ್ರಮಬದ್ಧಗೊಳಿಸಿದೆ ಉಲ್ಲಂಘನೆ ಮಾಡುವವರಿಗೆ ಐಪಿಸಿ ಹದಿನೆಂಟನೂರಾಅರವತ್ತು ರ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಜಲ ಮಾಲಿನ್ಯ ನಿವಾರಣೆ ಮತ್ತು ನಿಯಂತ್ರಣಕಾಯ್ದೆ ಹತ್ತೊಂಬತ್ತನೂರಾಎಪ್ಪತ್ತನಾಲ್ಕರ ಪ್ರಕಾರ ಕಲಂ ಮವತ್ತಮೂರು (ಆ) ರಲ್ಲಿ ಪ್ರದತ್ತ ಅಧಿಕಾರವನ್ನು ಚಲಾಯಿಸಿ ರಾಜ್ಯದ ಕೆರೆ ನದಿ ಕಾಲುವೆ, ಬಾವಿ ಹಾಗೂ ಇತರೆ ಜಲ ಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ಮಾಡಿರುವ ಹಾಗೂ ಬಣ್ಣ ಲೇಪಿತವಾದಂತಹ ವಿಗ್ರಹಗಳನ್ನು ವಿಸರ್ಜಿಸುವುದನ್ನು ನಿಷೇಧಿಸಿ ಅಧಿಸೂಚನೆ ಹೊರಡಿಸಿರುತ್ತದೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಜಿಲ್ಲೆಯ ಕೆಲವು ಪ್ರದೇಶಗಳಲ್ಲಿರುವ ಗಣಪತಿ ವಿಗ್ರಹಗಳ ತಯಾರಿಕಾ ಘಟಕ ಹಾಗೂ ಮಾರಾಟ ಮಾಡುವ ಮಳಿಗೆಗಳನ್ನು ಪರಿವೀಕ್ಷಿಸಿದಾಗ ನಿಷೇಧಿತ ಪದಾರ್ಥ ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ವಿಗ್ರಹಗಳನ್ನು ತಯಾರಿಸುತ್ತಿರುವುದು,ಅವುಗಳನ್ನು ಹಾಗೂ ಬಣ್ಣಲೇಪಿತವಾದ ವಿಗ್ರಹಗಳನ್ನು ಮಾರಾಟಕ್ಕೆ ಇಟ್ಟಿರುವುದನ್ನು ಗಮನಿಸಿರುತ್ತಾರೆ. ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಉಪಯೋಗಿಸಿ ತಯಾರಿಸುತ್ತಿರುವ ವಿಗ್ರಹಗಳು ಬಣ್ಣಲೇಪಿತವಾದ ವಿಗ್ರಹಗಳು ಹಾಗೂ ಈಗಾಗಲೇ ತಯಾರಿಸಿ ಅಥವಾ ಇತರೆ ರಾಜ್ಯಗಳಿಂದ ಆಮದು ಮಾಡಿಕೊಂಡು ಮಾರಾಟಕ್ಕೆ ಇಟ್ಟಿರುವ ನಿಷೇಧಿತ ವಿಗ್ರಹಗಳನ್ನು ಮಾರಾಟ ಮಾಡುವ ವ್ಯಕ್ತಿ, ಸಂಸ್ಥೆಗಳ ಮೇಲೆ ಕ್ರಮ ಕೈಕೊಳ್ಳುವಂತೆ ಪುರಸಭೆಯ ಪೌರಾಯುಕ್ತರು ಮತ್ತು ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿಗಳಿಗೆ ನಿರ್ದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.