ಬೆಳಗಾವಿಯಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಮೃಣಾಲ್ ಹೆಬ್ಬಾಳ್ಕರ್ , ಮೃಣಾಲ್ ಬೆಳಗಾವಿ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಾರೆ ಎಂಬ ಚರ್ಚೆಗೆ ಸಂಬಂಧಿಸಿದಂತೆ, ಕಾರ್ಯಕರ್ತರು ನಮ್ಮ ತಾಯಿ,ಮಾಡಿರುವ ಅಭಿವೃದ್ಧಿ ಕಾರ್ಯಗಳನ್ನು ಗಮನಿಸಿ ಚರ್ಚೆಗೆ ಮಾಡುತ್ತಿದ್ದಾರೆ ಇದು ಸ್ವಾಗತಾರ್ಹ.
ಆದರೆ ಪಕ್ಷದ ಮುಖಂಡರು, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಆಪ್ತ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಪಕ್ಷದ ಹಿರಿಯ ನಾಯಕರು ತೀರ್ಮಾನ ಕೈಗೊಳ್ಳಲಿದ್ದಾರೆ. ಕ್ಷೇತ್ರದ ಜನತೆ ವಿಶ್ವಾಸದಿಂದ ಲಕ್ಷ್ಮೀ ಹೆಬಾಳ್ಕರ್ ಅವರನ್ನು ಎರಡನೇ ಬಾರಿಗೆ ಭಾರಿ ಮತಗಳ ಮೂಲಕ ಆಯ್ಕೆ ಮಾಡಿದ್ದಾರೆ.
ಪಕ್ಷ ಟಿಕೆಟ್ ನೀಡಿದರೆ ಲೋಕಸಭೆಗೆ ಸ್ಪರ್ಧಿಸುತ್ತೀರಾ ಈ ಪ್ರಶ್ನೆಗೆ ಉತ್ತರಿಸಿದ ಅವರು ಪ್ರಸ್ತುತ, ನಮಗೆ ಅಂತಹ ಯಾವುದೇ ಆಲೋಚನೆಗಳಿಲ್ಲ. ನನ್ನ ತಾಯಿ ಸಚಿವರಾದ ನಂತರ ಹಾಗು ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೊಳಿ ಪರಿಷತ ಸದಸ್ಯರಾದ ನಂತರ ನನ್ನ ಮೇಲೆ ಕಳೆದ ಬಾರಿಗಿಂತ ಜವಾಬ್ದಾರಿ ಹೆಚ್ಚಿದೆ.ಗ್ರಾಮೀಣ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಹೆಚ್ಚು ಗಮನ ಹರಿಸುತ್ತೇವೆ. ಕಾಂಗ್ರೆಸ್ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷ ನೀಡಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುತ್ತೇನೆ ಎಂದು ಮೃಣಾಲ್ ಹೇಳಿದರು.
Laxmi News 24×7