Breaking News
Home / ಜಿಲ್ಲೆ / ಬೆಳಗಾವಿ / ಚಿಕ್ಕೋಡಿ / ತೀವ್ರಗೊಳ್ಳುತ್ತಿರುವ ಬೆಳಗಾವಿ ಜಿಲ್ಲೆ ವಿಭಜನೆ ಕಿಚ್ಚು: ಅಥಣಿ ಜಿಲ್ಲೆ ಮಾಡುವಂತೆ ಹೋರಾಟ

ತೀವ್ರಗೊಳ್ಳುತ್ತಿರುವ ಬೆಳಗಾವಿ ಜಿಲ್ಲೆ ವಿಭಜನೆ ಕಿಚ್ಚು: ಅಥಣಿ ಜಿಲ್ಲೆ ಮಾಡುವಂತೆ ಹೋರಾಟ

Spread the love

ಚಿಕ್ಕೋಡಿ: ಬೆಳಗಾವಿ (Belagavi) ಜಿಲ್ಲೆ ವಿಭಜನೆ ಕಿಚ್ಚು ದಿನೇದಿನೆ ತೀವ್ರಗೊಳ್ಳುತ್ತಿದೆ. ಅಥಣಿಯನ್ನು (Athani) ಜಿಲ್ಲೆ ಮಾಡುವಂತೆ ಹೋರಾಟ ಮಾಡವ ಕುರಿತು ಮೂವರು ಮಠಾಧೀಶರ ನೇತೃತ್ವದಲ್ಲಿ ಸಭೆ ನಡೆದಿದೆ. ಅಥಣಿ ಪಟ್ಟಣದಲ್ಲಿರುವ ಮೋಟಗಿ ಮಠದ (Motagi Math) ಪ್ರಭುಚನ್ನಬಸವ ಸ್ವಾಮೀಜಿ, ಗಚ್ಚಿನಮಠದ ಶಿವಬಸವಶ್ರೀ, ಶೆಟ್ಟರಮಠದ ಮರುಳಸಿದ್ದ ಸ್ವಾಮೀಜಿ ನೇತೃತ್ವದಲ್ಲಿ ಅಥಣಿಯ ಶಿವಣಗಿ ಸಾಂಸ್ಕೃತಿಕ ಸಭಾಭವನದಲ್ಲಿ ರೈತ ಮುಖಂಡರು, ಸಾಹಿತಿಗಳು, ಮಾಜಿ ಯೋಧರು ಸೇರಿ ಹಲವರು ಸಭೆಯಲ್ಲಿ ಭಾಗಿಯಾಗಿದ್ದರು.

ಸಚಿವ ಸತೀಶ್ ಜಾರಕಿಹೊಳಿ ಗೋಕಾಕ್, ಚಿಕ್ಕೋಡಿ ಜಿಲ್ಲೆ ಮಾಡಲು ಸರ್ಕಾರಕ್ಕೆ ಆಗ್ರಹಿಸುವುದಾಗಿ ಹೇಳಿದ ಬೆನ್ನಲ್ಲೇ ಅಥಣಿಯನ್ನೂ ಜಿಲ್ಲೆ ಮಾಡಬೇಕೆಂದು ಕೂಗು ಕೇಳಿಬಂದಿದೆ. ಅಥಣಿ ಜಿಲ್ಲೆ ನಮ್ಮ ಹಕ್ಕು ಘೋಷವಾಕ್ಯದಡಿ ನಡೆದ ಪೂರ್ವಭಾವಿ ಸಭೆ ನಡೆಸಲಾಗಿದೆ. ಸಭೆಯಲ್ಲಿ ಅಥಣಿ ಜಿಲ್ಲಾ ಹೋರಾಟದ ಸ್ವರೂಪ ಮತ್ತು ರೂಪರೇಷೆ ಕುರಿತು ಚರ್ಚೆ ನಡೆದಿದೆ. ಅಥಣಿ ಜಿಲ್ಲೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲು ನಿರ್ಧರಿಸಲಾಗಿದೆ.

ಕೆಲ ದಿನಗಳ ಹಿಂದೆ ಅಥಣಿಯನ್ನು ಜಿಲ್ಲೆ ಮಾಡಲು ಸರ್ಕಾರದ ಮೇಲೆ ಒತ್ತಡ ಹೇರುವಂತೆ ಅಥಣಿ ಜಿಲ್ಲಾ ಹೋರಾಟ ಸಮಿತಿ ಕಾಂಗ್ರೆಸ್​ ಶಾಸಕ ರಾಜು ಕಾಗೆ ಅವರಿಗೆ ಮನವಿ ಮಾಡಿತ್ತು. ಅಲ್ಲದೇ ಗೋಕಾಕ್, ಚಿಕ್ಕೋಡಿ, ಬೈಲಹೊಂಗಲ ಜನ ಜಿಲ್ಲೆಗೆ ಬೇಡಿಕೆ ಇಡುತ್ತಿದ್ದಾರೆ. ಅದೇರೀತಿ ಅಥಣಿಯನ್ನು ಕೂಡ ಜಿಲ್ಲೆ ಮಾಡುವಂತೆ ಹೋರಾಟ ಮಾಡಲು ನಾವು ಸಿದ್ಧರಿದ್ದೇವೆ ಎಂದು ಸಮೀತಿ ಸದಸ್ಯರು ಹೇಳಿದ್ದರು.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ