Breaking News

ಬೆಳಗಾವಿ ಬರಪೀಡಿತ ಜಿಲ್ಲೆ ಎಂದು ಘೋಷಿಸಿ ; ಕವಟಗಿಮಠ

Spread the love

ಚಿಕ್ಕೋಡಿ: ರೈತರಿಗೆ ಏಳು ಗಂಟೆ ಅನಿಯಮಿತ ವಿದ್ಯುತ್ ನೀಡಬೇಕು ಮತ್ತುಬೆಳಗಾವಿಯನ್ನು (Belagavi) ಬರಪೀಡಿತ ಜಿಲ್ಲೆಯಂತ ಘೋಷಿಸಬೇಕೆಂದು ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ (Mahantesh Kavatagimath) ನೇತೃತ್ವದಲ್ಲಿ ಬಿಜೆಪಿ (BJP) ಮುಖಂಡರು ಚಿಕ್ಕೋಡಿ ಉಪವಿಭಾಗಧಿಕಾರಿ ಮಾಧವ್ ಗಿತ್ತೆ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಬಳಿಕ ಚಿಕ್ಕೋಡಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ರಾಜ್ಯದ ಜನರಿಗೆ ಹಲವು ಗ್ಯಾರಂಟಿ ಕೊಟ್ಟು ಅಧಿಕಾರಕ್ಕೆ ಬಂದಿದ್ದಾರೆ. ನಿನಗೂ ಫ್ರೀ, ನನಗೂ ಫ್ರೀ ಅಂತ ಹೇಳಿದರು. ನಾವು ಫ್ರೀಯಿಂದ ಜನರಿಗೆ ಒಳ್ಳೆಯದಾಗುವ ನಿರೀಕ್ಷೆಯಲ್ಲಿದ್ವಿ, ಆದರೆ ಇಷ್ಟು ಬೇಗ ಜನರ ನಿರೀಕ್ಷೆ ಸುಳ್ಳಾಗುತ್ತೆ ಅಂದುಕೊಂಡಿರಲಿಲ್ಲ ಎಂದು ಹೇಳಿದರು.

ಉತ್ತರ ಕರ್ನಾಟಕದಲ್ಲಿ ನಮ್ಮ ತಾಯಂದಿರು ವರ್ಷಕ್ಕೊಮ್ಮೆ ಜಾತ್ರೆಗೆ ತವರುಮನೆಗೆ ಹೋಗುತ್ತಾರೆ. ಇಡೀ ವರ್ಷ ಹೆಣ್ಣುಮಕ್ಕಳು ಬಸ್‌ನಲ್ಲಿ ಪ್ರಯಾಣಿಸುವ ಪ್ರವೃತ್ತಿ ನಮ್ಮ ಭಾಗದಲ್ಲಿ ಇಲ್ಲ. ಜನರಿಗೆ ಸುಳ್ಳು ಹೇಳುವ, ತಪ್ಪು ವಿಷಯ ಪ್ರಚಾರ ಮಾಡಲು ಸರ್ಕಾರ ಮುಂದಾಗಿದೆ. ಅಧಿಕಾರಕ್ಕೆ ಬಂದ ಕೂಡಲೇ ವಿದ್ಯುತ್ ದರ ಹೆಚ್ಚು ಮಾಡಿದರು. ಒಂದು ಕಡೆ ವಿದ್ಯುತ್ ಭಾಗ್ಯ ಕೋಡುತ್ತೇವೆ ಅಂತ ಹೇಳುತ್ತಾರೆ, ಮೊತ್ತೊಂದು ಕಡೆ ಬಿಲ್ ಹೆಚ್ಚಳ ಮಾಡಿದರು ಎಂದರು.

ರೈತರಿಗೆ ಏಳು ಗಂಟೆ ವಿದ್ಯುತ್ ನೀಡುತ್ತೇವೆ ಅಂತ ಹೇಳಿ, ಎರಡ್ಮೂರು ಗಂಟೆ ನೀಡುತ್ತಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ವಿಶೇಷವಾಗಿ ಕಬ್ಬು ಬೆಳೆಯುತ್ತಾರೆ. ರೈತರು ಬಾವಿ, ಬೋರ್‌ವೆಲ್, ನದಿಯಿಂದ ಪಂಪಸೆಟ್​​ ಮೂಲಕ ಬೆಳೆಗಳಿಗೆ ನೀರು ಹರಿಸುತ್ತಿದ್ದಾರೆ. ಆದರೆ ಇದೀಗ ಕಳೆದ ಒಂದು ತಿಂಗಳಿಂದ ಅಯಮಿತ ಲೋಡ್ ಶೆಡ್ಡಿಂಗ್ ಆಗುತ್ತಿದೆ. ಇದರಿಂದ ನೀರು ಹರಿಸಲು ಸಾಧ್ಯವಾಗುತ್ತಿಲ್ಲ. ಕಬ್ಬು ಬೆಳೆಗಾರರು ತೊಂದರೆಯಲ್ಲಿದ್ದಾರೆ. ಈ ಮಧ್ಯೆ ಸಾಲ ಮರು ಪಾವತಿಗೆ ಬ್ಯಾಂಕ್ ಸಿಬ್ಬಂದಿ ಮನೆಗೆ ಬರುತ್ತಿದ್ದಾರೆ. ಈ ಬಗ್ಗೆ ಬೇಸಿಕ್ ಮಾಹಿತಿ ಕೂಡ ಸರ್ಕಾರಕ್ಕಿಲ್ಲ ಎಂದು ವಾಗ್ದಾಳಿ ಮಾಡಿದರು.


Spread the love

About Laxminews 24x7

Check Also

ತವಂದಿ ಘಾಟನಲ್ಲಿ ಕಂದಕಕ್ಕೆ ಬಿದ್ದ ಕಂಟೇನರ್ ವಾಹನ

Spread the love ನಿಪ್ಪಾಣಿಯ ತವಂದಿ ಘಾಟನಲ್ಲಿ ಕಂದಕಕ್ಕೆ ಬಿದ್ದ ಕಂಟೇನರ್ ವಾಹನ ಚಿಕ್ಕೋಡಿ:ನಿಪ್ಪಾಣಿ ತಾಲೂಕಿನ ತವಂದಿ ಘಾಟ್‌ನಲ್ಲಿ ಕಂಟೇನರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ