Breaking News

ಅನ್ಯಕೋಮಿನ 10 ರಿಂದ 12 ಜನ ಯುವಕರ ತಂಡ ಹಿಂದೂ ಯುವಕನ ಮೇಲೆ ದಾಳಿ

Spread the love

ಬೆಳಗಾವಿ, ಆ.27: ರಾಜ್ಯದಲ್ಲಿ ನೈತಿಕ ಪೊಲೀಸ್ ಗಿರಿ(Moral Policing) ಪ್ರಕರಣಗಳು ಹೆಚ್ಚುತ್ತಲೇ ಇವೆ. ಅನ್ಯಕೋವಿನ ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದಾನೆ ಎಂದು ಆರೋಪಿಸಿ ಅದೇ ಸಮುದಾಯದ ವಿದ್ಯಾರ್ಥಿಗಳು ಕಿಡ್ನಾಪ್ ಮಾಡಿ ಹಲ್ಲೆ ನಡೆಸಿದ್ದ ಘಟನೆ ಮಂಗಳೂರಿನಲ್ಲಿ ನಡೆದಿತ್ತು(Group Attack). ಈಗ ಬೆಳಗಾವಿ ನಗರದ ಖಂಜರ್ ಗಲ್ಲಿ ದರ್ಗಾ ಬಳಿ ನೈತಿಕ ಪೊಲೀಸ್​ಗಿರಿ ಪ್ರಕರಣ ಕಂಡು ಬಂದಿದೆ. ಅನ್ಯಕೋವಿನ ಯುವತಿ ಜೊತೆ ಬಂದಿದ್ದ ಹಿಂದೂ ಯುವಕನ ಮೇಲೆ 10ರಿಂದ 12 ಯುವಕರ ಗುಂಪು ಹಲ್ಲೆ ನಡೆಸಿದೆ. ಸದ್ಯ ಘಟನೆ ಸಂಬಂಧ ಬೆಳಗಾವಿಯ ಮಾರ್ಕೆಟ್ ಠಾಣೆಯಲ್ಲಿ 8 ಜನರ ವಿರುದ್ಧ ಕೇಸ್ ದಾಖಲಾಗಿದೆ.

ಮಧ್ಯಾಹ್ನ 2.30ಕ್ಕೆ ಅನ್ಯಕೋಮಿನ ಯುವತಿಯೊಂದಿಗೆ ಜ್ಞಾನೇಶ್ವರ ಡವರಿ ಎಂಬ ಹಿಂದೂ ಯುವಕ ಮಾರ್ಕೆಟ್​ಗೆ ಬಂದಿದ್ದ. ಈ ವೇಳೆ ಖಡೇಬಜಾರ್ ಮಾರ್ಕೆಟ್​ನ​ ಖಂಜರ್ ಗಲ್ಲಿ ದರ್ಗಾ ಬಳಿ ಅನ್ಯಕೋಮಿನ 10 ರಿಂದ 12 ಜನ ಯುವಕರ ತಂಡ ಹಿಂದೂ ಯುವಕನ ಮೇಲೆ ದಾಳಿ ನಡೆಸಿ ಹಲ್ಲೆ ಮಾಡಿದೆ. ಸಾಮಾಜಿಕ ಜಾಲತಾಣದಲ್ಲಿ ಹಲ್ಲೆ ಮಾಡಿದ ವಿಡಿಯೋ ವೈರಲ್ ಆಗಿದೆ.

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಘಟಪ್ರಭಾ ಮೂಲದ ಜ್ಞಾನೇಶ್ವರ ಡವರಿ ಮತ್ತು ಅನ್ಯಕೋಮಿನ ಯುವತಿ ಒಟ್ಟಾಗಿ ಮಾರ್ಕೆಟ್​ಗೆ ಬಂದಿದ್ದರು. ಜ್ಞಾನೇಶ್ವರ ಊರು ಊರು ತಿರುಗಿ ಚಪ್ಪಲಿ ಮಾರಾಟ ಮಾಡುವ ವ್ಯಾಪಾರಿ. ಯುವತಿ ಘಟಪ್ರಭಾದಲ್ಲಿ ಬ್ಯೂಟಿ ಫಾರ್ಲರ್ ನಡೆಸುತ್ತಿದ್ದಾಳೆ. ಬೆಳಗಾವಿ ನಗರದ ಕೇಂದ್ರ ಬಸ್ ನಿಲ್ದಾಣದ ಬಳಿ ಯುವಕ-ಯುವತಿ ಇಬ್ಬರೂ ಭೇಟಿಯಾಗಿದ್ದಾರೆ. ಆಗ ಬ್ಯೂಟಿ ಪಾರ್ಲರ್ ಸಾಮಾಗ್ರಿ ತೆಗೆದುಕೊಂಡು ಬರೋಣಾ ಬಾ ಎಂದು ಯುವತಿ ಯುವಕನನ್ನು ಮಾರುಕಟ್ಟೆಗೆ ತನ್ನ ಜೊತೆ ಬರಲು ಕರೆದಿದ್ದಾಳೆ. ಒಂದೇ ಊರಿನವಳು ಪರಿಚಯಸ್ಥಳು ಆಗಿದ್ದರಿಂದ ಅವಳೊಂದಿಗೆ ಜ್ಞಾನೇಶ್ವರ‌ ಆಟೋ ಹತ್ತಿದ್ದ. ಆಟೋದಲ್ಲಿ ಖಂಜರ್ ಗಲ್ಲಿ ದರ್ಗಾ ಬಳಿ ಬಂದಾಗ ಯುವಕರ ಗುಂಪು ಹಲ್ಲೆ ಮಾಡಿದೆ. ಚಲಿಸುತ್ತಿದ್ದ ಆಟೋವನ್ನ ಅಡ್ಡಗಟ್ಟಿ ತಡೆದು ಹಲ್ಲೆ ಮಾಡಲಾಗಿದೆ. ಹಲ್ಲೆಗೊಳಗಾದ ಜ್ಞಾನೇಶ್ವರ ಡವರಿ ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ನಾಲ್ವರು ಅಪ್ರಾಪ್ತರು ಸೇರಿ 8 ಜನ ಅಪರಿಚಿತರ ವಿರುದ್ಧ ಕೇಸ್ ದಾಖಲಾಗಿದೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ