Breaking News

ಧಾರವಾಡ ಜಿಲ್ಲೆಯ ಇಬ್ಬರು ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಬರುತ್ತಾರೆ

Spread the love

ಧಾರವಾಡ : ಜಿಲ್ಲೆಯಲ್ಲಿ ಇಬ್ಬರು ಬಿಜೆಪಿ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಬರುತ್ತಾರೆ ಎಂಬ ಮಾಹಿತಿಯಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.

 

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೇರೆ ಬೇರೆ ಜಿಲ್ಲೆಯಲ್ಲಿ ಬಿಜೆಪಿಗರು ಕಾಂಗ್ರೆಸ್​ಗೆ ಬರುತ್ತಿದ್ದಾರೆ. ಹಾಗೇ ಧಾರವಾಡ ಜಿಲ್ಲೆಯಲ್ಲಿ ಇಬ್ಬರು ಬಿಜೆಪಿಗರು ಕಾಂಗ್ರೆಸ್ ಪಕ್ಷಕ್ಕೆ ಬರ್ತಾರೆ. ಬಿಜೆಪಿ ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಕುಂದಗೋಳ ಮಾಜಿ ಶಾಸಕ ಚಿಕ್ಕನಗೌಡ ಕಾಂಗ್ರೆಸ್ ಪಕ್ಷಕ್ಕೆ‌ ಬರ್ತಾರೆ ಎಂದು ಮಾಹಿತಿಯಿದೆ ಎಂದು ಲಾಡ್ ತಿಳಿಸಿದರು.

ಕಾಂಗ್ರೆಸ್ ಸರ್ಕಾರ ಬಿಜೆಪಿ ಅವಧಿಯ ಹಗರಣಗಳ ತನಿಖೆ ವಿಚಾರಕ್ಕೆ ಸಂಬಂಧಿಸಿದಂತೆ ಯಾವ ಯಾವ ಇಲಾಖೆಯಲ್ಲಿ ಹಗರಣ ಆಗಿದೆ ಎಲ್ಲವನ್ನು ತನಿಖೆ ಮಾಡಲಾಗುತ್ತಿದೆ. ವಿಪಕ್ಷದಲ್ಲಿದ್ದಾಗ ನಾವು ತನಿಖೆ ಮಾಡಲು ಒತ್ತಾಯ ಮಾಡಿದ್ದೇವೆ. ಆದರೆ ಈಗ ನಮ್ಮದೇ ಆಡಳಿತವಿದೆ ಅದಕ್ಕೆ ತನಿಖೆ ಮಾಡಲಾಗುತ್ತದೆ. ಅದರಲ್ಲೂ ಆರೋಗ್ಯ ಇಲಾಖೆಯಲ್ಲಿ ದೊಡ್ಡ ಮಟ್ಟದ ಅವ್ಯವಹಾರ ಆಗಿದೆ ಎಂದು ಸಚಿವರು ಆರೋಪಿಸಿದರು.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ