Breaking News

ನಿಮ್ಮಗೆ ಮುಂದಿನ ಕಾರ್ಯ ಮಾಡೋಕೆ ಆದರೆ ಮಾಡಿ ಇಲ್ಲ ಹೆಣ ಬಿಸಾಕಿ ಎಂದು ಮಕ್ಕಳು

Spread the love

ಸುಮಾರು ಒಂದೂವರೆ ತಿಂಗಳ ಹಿಂದೆ #ಚಿಕ್ಕೋಡಿ ತಾಲ್ಲೂಕಿನ #ನಾಗರಮುನ್ನೊಳಿ ಗ್ರಾಮದ ಶಿವನೇರಿ ಲಾಡ್ಜ್ ನಲ್ಲಿ ಯಾರೋ ಚಿಕಿತ್ಸೆಗೆಂದು ಸುಮಾರು 72 ವರ್ಷದ ವೃದ್ಧನನ್ನು ತಂದು ಇಲ್ಲೆ ಬಿಟ್ಟು ಪರಾರಿಯಾಗಿರುತ್ತಾರೆ ಎಂಬ ಮಾಹಿತಿ ತಿಳಿದು ಬಂದ ಮೇಲೆ ಚಿಕ್ಕೋಡಿ ಪೋಲಿಸರಾದ ನಾವು ಸ್ಥಳಕ್ಕೆ ಭೇಟಿ ನೀಡಿದಾಗ ಅಲ್ಲಿ ಮೂಲಚಂದ್ರ ಶರ್ಮಾ ಎನ್ನುವ ಪುನಾ ಮೂಲದ ವ್ಯಕ್ತಿ ಇಂಗ್ಲಿಷ್, ಹಿಂದಿ , ಮರಾಠಿ ಹೀಗೆ ಹಲವು ಭಾಷೆಗಳಲ್ಲಿ ಕರಾರುವಕ್ಕಾಗಿ ಕಡಕ್ಕಾಗಿ ಮಾತನಾಡುತ್ತಾ ಪಾರ್ಶ್ವವಾಯು ರೋಗದಿಂದ ಬಳಲುತ್ತಿದ್ದ ಅವನನ್ನು ನಾವು ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲು ಪ್ರಯತ್ನಿಸಿದಾಗ ಅವರು ಯಾಕೆ ಸರ್ ನಾನು ಅಂತಿಂಥ ವ್ಯಕ್ತಿಯಲ್ಲ ನನ್ನ ಮಗಳು ಕೆನಡಾದಲ್ಲಿ ಹಾಗೂ ಮಗ ದಕ್ಷಿಣ ಆಫ್ರಿಕಾದಲ್ಲಿ ಒಳ್ಳೆಯ ಹುದ್ದೆಯಲ್ಲಿದ್ದಾರೆ ಮತ್ತು ನಾನು ನಿವೃತ್ತ ಬ್ಯಾಂಕ್ ಮ್ಯಾನೇಜರ್ ಇದ್ದೀನಿ ನೀವು ಅಲ್ಲಿಗೆಕೆ ನನ್ನ ಕರೆದುಕೊಂಡು ಹೋಗುತ್ತಿರಿ ಎಂದು ಕೇಳಿದರು ನಾವು ಲಾಡ್ಜ್ ಮಾಲೀಕನಿಂದ ವಿಷಯ ತಿಳಿದಾಗ .. ಸರ್ ಯಾರೋ ಒಬ್ಬ ವ್ಯಕ್ತಿ ಕಾರ್ ತೆಗೆದುಕೊಂಡು ಇವರನ್ನು ನಾಗರಮುನ್ನೊಳಿ ಕುಂಬಾರ ಆಸ್ಪತ್ರೆಗೆ ಪಾರ್ಶ್ವವಾಯು ಚಿಕಿತ್ಸೆಗೆ ಕರೆದುಕೊಂಡು ಬಂದು ಇಲ್ಲಿ ತಂದಿರುತ್ತಾರೆ ಆ ವ್ಯಕ್ತಿ ಆ ವ್ಯಕ್ತಿ ಅವರ ಸಂಬಂಧಿಕ ಎಂದು ನಾವು ತಿಳಿದೆವು ಆದರೆ ಅವನು ಗುತ್ತಿಗೆ ಆಧಾರದ ಮೇಲೆ ಅವನನ್ನು ಆರೈಕೆ ಮಾಡುವ ಕೆಲಸಗಾರ ನಿನ್ನೆ ರಾತ್ರಿ ಅವನ ಗುತ್ತಿಗೆ ಮುಗಿದು ಹೋಗಿದು ಅವರನ್ನು ಇಲ್ಲೇ ಬಿಟ್ಟು… ಹೋಗಿರುತ್ತಾನೆ
ನಾವು ಎಲ್ಲ ದೂರವಾಣಿ ಸಂಖ್ಯೆಗೆ ಕರೆ ಮಾಡಿದಾಗ ಯಾವುದು ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದರು ನಾವು ಕೂಡ ಪ್ರಯತ್ನ ಮಾಡಿದ್ದೆವು ಆದರೆ ಯಾವುದೇ ಪ್ರಯೋಜನ ಆಗಲಿಲ್ಲ ನಂತರ ಆ ವೃದ್ಧನನ್ನು ಸಮಾಧಾನ ಪಡಿಸಿ ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಗೆ ಕರೆತಂದಾಗ ಅಲ್ಲಿ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಕಳುಹಿಸಿದರು.
 ಹೀಗಿರುವಾಗ ಟಪಾಲ್ ಕರ್ತವ್ಯಕ್ಕೆ ಬೆಳಗಾವಿಗೆ ಹೋಗುವ ಸಿಬ್ಬಂದಿಗಳು 2-3 ದಿನಗಳಿಗೊಮ್ಮೆ ಆಸ್ಪತ್ರೆಗೆ ಹೋಗಿ ಅವರ ಆರೋಗ್ಯ ವಿಚಾರಿಸಿಕೊಂಡು ಬರುತ್ತಿದ್ದರು…. ಆದರೂ ದಿನೇ ದಿನೇ ಅವರ ಆರೋಗ್ಯ ಕ್ಷೀಣಿಸುತ್ತಿತ್ತು .ಹೀಗಿರುವಾಗ ನಿನ್ನೆ ದಿನ ಠಾಣೆಗೆ ಆ ವ್ಯಕ್ತಿ ಮೃತನಾಗಿದ್ದಾನೆ ಎಂದು ಮರಣ ಸೂಚನೆ ಪತ್ರ ಬಂದಿತ್ತು… ನಾವು ಮತ್ತೆ ಅವರ ಮಗ ಮತ್ತು ಮಗಳಿಗೆ ಹಲವು ಬಾರಿ ಸಂಪರ್ಕಿಸಲು ಪ್ರಯತ್ನಿಸಿ ಕೊನೆಗೆ ಅವರ ಮಗಳನ್ನು ಸಂಪರ್ಕಿಸಿದಾಗ ವಾಟ್ಸಪ್ ಕರೆ ಸ್ವೀಕರಿಸಿ.. ಅವರು ನಮ್ಮ ತಂದೆ ಆಗ ಇದ್ದರು ಇವಾಗ ಇಲ್ಲ ಅವರಿಗೆ ನನ್ನಗೆ ಯಾವುದೇ ಸಂಬಂಧವಿಲ್ಲ ನಮ್ಮ ಕುಟುಂಬದ ವಿಷಯ ನಿಮಗೆ ಅರ್ಥ ಆಗಲ್ಲ ನಿಮ್ಮಗೆ ನಾವು ಚಿಕಿತ್ಸೆ ಕೊಡಿಸಿ ಎಂದು ಹೇಳಿಲ್ಲ ನಾವು ನೆಮ್ಮದಿಯಿಂದ ಇದ್ದೀವಿ ಸುಮ್ಮನೆ ನಮ್ಮಗೆ ತೊಂದರೆ ಕೋಡಬೇಡಿ..
ನಿಮ್ಮಗೆ ಮುಂದಿನ ಕಾರ್ಯ ಮಾಡೋಕೆ ಆದರೆ ಮಾಡಿ ಇಲ್ಲ ಹೆಣ ಬಿಸಾಕಿ ಎಂದಳು … ಆಗ ನಾವು ಅವರ ಮನುಷ್ಯತ್ವವೇ ಇಷ್ಟೇ ಎಂದು ತಿಳಿದುಕೊಂಡು ನಮ್ಮ ಠಾಣೆಯ ಒಬ್ಬ ಎಎಸ್ಐ ಹಾಗೂ ಸಿಬ್ಬಂದಿ ಜನರನ್ನು ಜಿಲ್ಲಾ ಆಸ್ಪತ್ರೆಗೆ ಕಳುಹಿಸಿ ಆ ವೃದ್ಧನ ಮರಣೋತ್ತರ
ಪರೀಕ್ಷೆ ನಡೆಸಿ ಮೃತದೇಹವನ್ನು ನಾಗರಮುನ್ನೊಳಿ ಗ್ರಾಮಕ್ಕೆ ತಂದು ನಾಗರಮುನ್ನೊಳಿ ಗ್ರಾಮ ಪಂಚಾಯಿತಿ ಪಿಡಿಒ ಹಾಗೂ ಅಧ್ಯಕ್ಷರು ಹಾಗೂ ಸದಸ್ಯರುಗಳು ಸಹಾಯದಿಂದ ಅಂತಿಮ ಸಂಸ್ಕಾರ ನೆರವೇರಿಸಿದ್ದೆವು… ಆಗ ಅಲ್ಲಿ ಇದ್ದ ನಮ್ಮ ಠಾಣೆಯ ಎಎಸ್ಐ ರವರು ತಮ್ಮ ಒದ್ದೆಯಾದ ಕಣ್ಣುಗಳನ್ನು ಒರೆಸಿಕೊಳ್ಳುತ್ತಾ ನೋಡಿ ಸರ್ ಇವರು ಬದುಕಿದ್ದಾಗ ಕೋಟ್ಯಾಧೀಶರು ಮಕ್ಕಳನ್ನು ಒಳ್ಳೆಯ ಶಿಕ್ಷಣ ಕೊಡಿಸಿ ಹೊರದೇಶಕ್ಕೆ ಕಳುಹಿಸಿದ್ದಾರೆ ಆದರೆ ಮಕ್ಕಳಿಗೆ
ಸಂಸ್ಕಾರ ಹಾಗೂ ನೈತಿಕ ಮೌಲ್ಯಗಳನ್ನು ನೀಡಿಲ್ಲ….. ಆ ನೊಂದ ಜೀವ ಕೊನೆಯ ದಿನಗಳಲ್ಲಿ ತನ್ನ ಮಕ್ಕಳನ್ನು ನೋಡುವುದಕ್ಕಾಗಿ ಎಷ್ಟು ಕಾದಿರಬೇಕು ಎಷ್ಟು ನೊಂದಿರಬೇಕು ಎಂದಾಗ ನನ್ನ ಕಣ್ಣುಗಳಿಂದ ನನ್ನಗೆ ತಿಳಿಯದಂತೆ ಕಣ್ಣೀರು ಹನಿಗಳು ಜಾರ ತೊಡಗಿದ್ದವು …. ನಾವು ಎಲ್ಲ ಪಾಲಕರಿಗೆ ಮಾಡುವ ಒಂದು ಮನವಿ ಏನೆಂದರೆ:: ನಾವು ನಮ್ಮ ಮಕ್ಕಳು ಒಳ್ಳೆಯ ವಿದ್ಯಾವಂತರಾಗಲಿ ಅಂತಾ CBSE, ICSE ಹುಡುಕಿ ಶಾಲೆಗೆ ಹಾಕುತ್ತೇವೆ. ಅವರನ್ನು ಒಂದು ಒಳ್ಳೆಯ ಸ್ಥಾನಮಾನಕ್ಕೆ ತರಬೇಕು ಎಂದು ಅವರಿಗೆ ನೈತಿಕ ಹಾಗೂ ಮೌಲ್ಯಾಧಾರಿತ ಶಿಕ್ಷಣ ನೀಡುವುದನ್ನು ಮರೆತು ಕೊನೆಗೆ ಅವರ ತಂದೆ ತಾಯಿ ಆರೈಕೆ ಪೋಷಣೆ ಬಿಡಿ ಅವರ ಅಂತ್ಯಸಂಸ್ಕಾರಕ್ಕೂ ಬರಲಾರದಷ್ಟು ಅವರನ್ನು ಅನಾಗರಿಕರನ್ನಾಗಿ ಮಾಡುತ್ತಿದ್ದೇವೆ ಆದ್ದರಿಂದ ಅವರಿಗೆ ಶಿಕ್ಷಣ ನೀಡುವುದರ ಜೊತೆಗೆ ಮಾನವೀಯ ಮೌಲ್ಯಗಳನ್ನು ಕಲಿಸೋಣ ಧನ್ಯವಾದಗಳು.
ಬಸಗೌಡ ನೇರ್ಲಿ[ PSI ಚಿಕ್ಕೋಡಿ]
👆 ಇವತ್ತು *ವಿಜಯ ಕರ್ನಾಟಕ* ದಿನಪತ್ರಿಕೆಯಲ್ಲಿ ಬಂದ ವರದಿಯನ್ನು ನೋಡಿ ತುಂಬಾ ಬೇಸರ ಅನಿಸಿತು. ಚಿಕ್ಕೋಡಿ ಪೋಲಿಸ್ ಇಲಾಖೆಯವರು ಹಾಗೂ ನಾಗರಮುನ್ನೊಳಿ ಗ್ರಾಮಸ್ಥರು, ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು, ಪಿಡಿಓ ಹಾಗೂ ಸಿಬ್ಬಂದಿಯವರು ಮಾಡಿದ ಕಾರ್ಯಕ್ಕೆ ಅಭಿನಂದನೆಗಳು.

Spread the love

About Laxminews 24x7

Check Also

ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಿ: ಸಹಜಾನಂದ ಅವಧೂತರು

Spread the love ಚಿಕ್ಕೋಡಿ: ‘ಭಾರತ ದೇಶವನ್ನು ಧಾರ್ಮಿಕ, ಸಂಸ್ಕೃತಿಯ ನೆಲೆಗಟ್ಟಿನ ಮೇಲೆ ಕಟ್ಟಲಾಗಿದೆ. ಯುವಕರು ಸಂಸ್ಕಾರವಂತರಾಗಿ ದೇಶದ ಪರಂಪರೆ ಮುಂದುವರಿಸಬೇಕು’ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ