Breaking News
Home / ಹುಬ್ಬಳ್ಳಿ / ಕೋವಿಡ್ ಹಗರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ಮಾಡುತ್ತೇವೆ: ಸಚಿವ ಶರಣಪ್ರಕಾಶ ಪಾಟೀಲ್

ಕೋವಿಡ್ ಹಗರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ಮಾಡುತ್ತೇವೆ: ಸಚಿವ ಶರಣಪ್ರಕಾಶ ಪಾಟೀಲ್

Spread the love

ಹುಬ್ಬಳ್ಳಿ: ಕೋವಿಡ್ ಹಗರಣದ ತನಿಖೆ ಕಾಟಾಚಾರಕ್ಕೆ ಮಾಡುತ್ತಿಲ್ಲ.

ಕೋವಿಡ್ ಹಗರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ಮಾಡುತ್ತೇವೆ. ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆ ಮಾಡಿಸುತ್ತಿದ್ದೇವೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಲೆಂದೇ ನ್ಯಾಯಾಂಗ ತನಿಖೆ ಮಾಡಿಸುತ್ತಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಹೇಳಿದರು. ನಗರದ ಕಿಮ್ಸ್ ಆಸ್ಪತ್ರೆ ವೈದ್ಯರೊಂದಿಗೆ ಸಭೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ನಮ್ಮ ಇಲಾಖೆಯಿಂದಲೂ ಕೆಲವೊಂದು ಹಗರಣಗಳ ತನಿಖೆ ನಡಿಯುತ್ತಿದೆ. ನಮ್ಮ ಸರ್ಕಾರದಲ್ಲಿ ಪಾರದರ್ಶಕ ಆಡಳಿತ ಕೊಡುತ್ತೇವೆ ಅಂತ ವಾಗ್ದಾನ ಮಾಡಿದ್ದೇವೆ. ಅದರ ಪ್ರಕಾರ ನಾವು ನಡೆದುಕೊಳ್ಳುತ್ತೇವೆ. ಜನರಿಗೆ ನೀಡಿದ ಭರವಸೆಯಂತೆ ಮೂರು ಗ್ಯಾರಂಟಿ ಜಾರಿಯಾಗಿವೆ. ಗೃಹ ಲಕ್ಷ್ಮಿ ಇದೇ 30 ರಂದು ಅನುಷ್ಠಾನಕ್ಕೆ ತರುತ್ತಿದ್ದೇವೆ ಹಾಗೂ ಯುವನಿಧಿ ಡಿಸೆಂಬರ್​ನಲ್ಲಿ ಜಾರಿಯಾಗಲಿದೆ ಎಂದು ತಿಳಿಸಿದರು.

ಸರ್ಕಾರ ನಮ್ಮನ್ನು ಟಾರ್ಗೆಟ್​ ಮಾಡುತ್ತಿದೆ ಎಂಬ ಬಿಜೆಪಿ ನಾಯಕರ ಹೇಳಿಕೆ ಪ್ರತಿಕ್ರಿಯಿಸಿ, ಇನ್ನು ತನಿಖೆಯೇ ಪ್ರಾರಂಭವಾಗಿಲ್ಲ, ತನಿಖೆಯನ್ನು ನಿವೃತ್ತ ನ್ಯಾಯಮೂರ್ತಿಗಳು ಮಾಡುತ್ತಿದ್ದಾರೆ. ಬಿಜೆಪಿಯವರು ಈಗಲೇ ಯಾಕೆ ಭಯ ಬೀಳುತ್ತಿದ್ದಾರೆ. ನಮಗೆ ಟಾರ್ಗೆಟ್​ ಮಾಡುತ್ತಿದ್ದಾರೆ ಎಂದು ಅವರೇಕೆ ಅಂದುಕೊಳ್ಳುತ್ತಾರೆ. ತನಿಖೆ ನಡೆದರೆ ಸತ್ಯಾಸತ್ಯತೆ ಹೊರಗೆ ಬರುತ್ತದೆ. ಹಿಂದಿನ ಸರ್ಕಾರದಲ್ಲಿ ಭಾರಿ ಭ್ರಷ್ಟಾಚಾರ ನಡೆದಿದೆ ಎಂದೇ ಜನ ಕಾಂಗ್ರೆಸ್​ಗೆ ವೋಟು ಹಾಕಿದ್ದು ಎಂದರು.


Spread the love

About Laxminews 24x7

Check Also

ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ – ಧಾರವಾಡ ಅರ್ಧ ದಿನ ಬಂದ್!

Spread the loveಧಾರವಾಡ: ಇಡೀ ದೇಶದ ಗಮನ ಸೆಳೆದಿರುವ ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ಖಂಡಿಸಿ ಇಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ