Breaking News

ಸಚಿವ ಜಮೀರ್ ಅಹಮದ್ ಖಾನ್ ಮದರಸಾಗಳಲ್ಲಿ ಮುಖ್ಯವಾಗಿ ಕನ್ನಡ ಕಲಿಸಬೇಕೆಂದು ನಿರ್ದೇಶನ ನೀಡಿದ್ದಾರೆ.

Spread the love

ಬೆಂಗಳೂರು: ಮದರಸಾಗಳಲ್ಲಿ ಕಡ್ಡಾಯವಾಗಿ ಕನ್ನಡ ಕಲಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದ್ದಾರೆ.

ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯ ಸಭಾಂಗಣದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಪಾಲ್ಗೊಂಡು ಸಚಿವರು ಮಾತನಾಡಿದರು. ಮದರಸಾಗಳಲ್ಲಿ ಪ್ರಮುಖವಾಗಿ ಕನ್ನಡ ಕಡ್ಡಾಯವಾಗಿ ಕಲಿಸಲೇಬೇಕು. ಉಳಿದಂತೆ ಇಂಗ್ಲಿಷ್ ಸೇರಿ ಇತರ ಭಾಷೆ ಕಲಿಸಲು ಕ್ರಮ ಕೈಗೊಳ್ಳಿ ಎಂದು ನಿರ್ದೇಶನ ನೀಡಿದರು.

ರಾಜ್ಯದಲ್ಲಿ 1265 ವಕ್ಫ್ ಮಂಡಳಿಯಲ್ಲಿ ನೋಂದಣಿಯಾದ ಮದರಸಾಗಳಿದ್ದು, ಆ ಪೈಕಿ 100 ಮದರಸಾಗಳ ಐದು ಸಾವಿರ ಮಕ್ಕಳಿಗೆ ಈ ವರ್ಷದಿಂದಲೇ ಪ್ರಾಯೋಗಿಕವಾಗಿ ಕಲಿಕೆ ಆರಂಭಿಸಿ. ಮುಂದಿನ ವರ್ಷದಿಂದ ಎಲ್ಲ ಮದರಸಾಗಳಲ್ಲಿ ಆರಂಭಿಸಲು ಪ್ರಸ್ತಾವನೆ ಸಿದ್ದಪಡಿಸಿ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಮದರಸಾಗಳಲ್ಲಿ ಕನ್ನಡ, ಇಂಗ್ಲಿಷ್ ಸೇರಿ ಇತರ ವಿಷಯ ಕಲಿಕೆಯಿಂದ ಅಲ್ಲಿನ ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಉತ್ತಮ ಅವಕಾಶ ಸಿಗಲಿದೆ ಎಂದು ಹೇಳಿದರು. ಅಲ್ಪ ಸಂಖ್ಯಾತರ ನಿರ್ದೇಶನಾಲಯ ವ್ಯಾಪ್ತಿಯಡಿ ವಿದೇಶದಲ್ಲಿ ವ್ಯಾಸಂಗ ಮಾಡಲು ನೀಡುವ ಪ್ರೋತ್ಸಾಹ ಧನ ಮೊತ್ತ 20 ಲಕ್ಷ ರೂ. ನಿಂದ 30 ಲಕ್ಷ ರೂ.ಗಳಿಗೆ ಹೆಚ್ಚಿಸಲು ಹಾಗೂ ಐಐಟಿ, ಎನ್​ಐಟಿ ಸೇರಿದಂತೆ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಪ್ರವೇಶ ಪಡೆಯುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಹಾಲಿ ನೀಡುತ್ತಿರುವ ಎರಡು ಲಕ್ಷ ರೂ. ಪ್ರೋತ್ಸಾಹ ಧನ ಮೊತ್ತ ನಾಲ್ಕು ಲಕ್ಷ ರೂ.ಗಳಿಗೆ ಹೆಚ್ಚಿಸಲು ಇದೇ ಸಂದರ್ಭದಲ್ಲಿ ಸಚಿವರು ಸೂಚಿಸಿದರು.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ