ಬೆಂಗಳೂರು : ಕಾಂಗ್ರೆಸ್ ಸರ್ಕಾರದ ನೂರು ದಿನದ ಸಾಧನೆ ಅಂದರೆ ಅದು ವರ್ಗಾವಣೆ ಮಾತ್ರ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ವಿಧಾನಸೌಧದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿ ಕೆಲಸ ಎಲ್ಲಾ ಸ್ಥಗಿತ ಆಗಿದೆ. ನಮ್ಮ ಅಧಿಕಾರಾವಧಿಯಲ್ಲಿನ ಕೆಲಸಗಳನ್ನೆಲ್ಲಾ ಸ್ಥಗಿತ ಮಾಡಿದ್ದಾರೆ. ಎಲ್ಲರಿಗೂ ಉಚಿತ ಖಚಿತ ಅಂದ್ರು. ಆದರೆ ಈಗ ನೂರಾರು ಷರತ್ತುಗಳನ್ನು ಹಾಕಿದ್ದಾರೆ. ಯಾವುದೇ ಯೋಜನೆ ಪೂರ್ಣ ಪ್ರಮಾಣದಲ್ಲಿ ಜನರಿಗೆ ಸಿಗುವುದಿಲ್ಲ ಎಂದರು.
ಪ್ರತಿಪಕ್ಷದ ನಾಯಕನ ಆಯ್ಕೆಗೂ ಚಾರ್ಜ್ ಶೀಟ್ಗೂ ಸಂಬಂಧ ಇಲ್ಲ. ನೂರು ದಿನದ ವೈಫಲ್ಯಗಳೇನು ಎಂದು ಚಾರ್ಜ್ ಶೀಟ್ ಬಿಡುಗಡೆ ಮಾಡಲಾಗಿದೆ. ಅದಕ್ಕೆ ಅವರು ಮೊದಲು ಉತ್ತರ ಕೊಡಬೇಕು. ವಿರೋಧ ಪಕ್ಷದ ನಾಯಕನ ಆಯ್ಕೆ ಆಗುತ್ತದೆ. ಅಧಿಕೃತ ವಿರೋಧ ಪಕ್ಷವಾಗಿ ನಾವು ಕೇಳಿದ್ದಕ್ಕೆ ಮೊದಲು ಉತ್ತರ ಕೊಡಲಿ. ಯಾವುದೋ ನೆಪ ಹೇಳಿ ಜಾರಿಕೊಳ್ಳಬಾರದು ಎಂದರು.
Laxmi News 24×7