Breaking News

ಕರ್ನಾಟಕದ ಗ್ಯಾರಂಟಿ ಯೋಜನೆಗಳನ್ನು ಇಡೀ ದೇಶಕ್ಕೆ ವಿಸ್ತರಿಸುವ ಚಿಂತನೆ ಇದೆ: ರಾಹುಲ್ ಗಾಂಧಿ

Spread the love

ಮೈಸೂರು : “ಮಹಿಳೆಯರ ಆರ್ಥಿಕ ಹೊರೆ ಇಳಿಸಲು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ.

ಕರ್ನಾಟಕದಲ್ಲಿ ಜಾರಿಗೊಳಿಸಿರುವ ಈ ಯೋಜನೆಗಳನ್ನು ಇಡೀ ದೇಶಕ್ಕೆ ವಿಸ್ತರಿಸುವ ಚಿಂತನೆ ಇದೆ. ಇವು ಇಡೀ ದೇಶಕ್ಕೆ ದಿಕ್ಸೂಚಿ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.

ನಗರದ ಮಹಾರಾಜ ಕಾಲೇಜು ಮೈದಾನದಲ್ಲಿಂದು ಹಮ್ಮಿಕೊಂಡಿದ್ದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಭರವಸೆ ನೀಡಿತ್ತು. ಅಧಿಕಾರಕ್ಕೆ ಬಂದ ನಂತರ ನುಡಿದಂತೆ ನಡೆದಿದ್ದೇವೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಯಿಂದ ಹೆಚ್ಚು ಅನುಕೂಲವಾಗಿದೆ. ಅನ್ನಭಾಗ್ಯ, ಉಚಿತ 200 ಯುನಿಟ್ ವಿದ್ಯುತ್ ಹಾಗೂ ಮನೆಯ ಯಜಮಾನಿಗೆ 2 ಸಾವಿರ ರೂಪಾಯಿ ನೀಡುವ ಗೃಹ ಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಸದ್ಯ ಐದು ಗ್ಯಾರಂಟಿ ಯೋಜನೆಗಳಲ್ಲಿ ನಾಲ್ಕನ್ನು ಜಾರಿ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಯುವನಿಧಿ ಜಾರಿಗೊಳಿಸುತ್ತೇವೆ” ಎಂದರು.

“ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ಕಷ್ಟವಾಗಿದೆ. ಗ್ಯಾರಂಟಿ ಯೋಜನೆಯಿಂದ ಜನಸಾಮಾನ್ಯರಿಗೆ ಅನುಕೂಲವಾಗಲಿದೆ. ಗೃಹಲಕ್ಷ್ಮಿ ಯೋಜನೆ ದೇಶದಲ್ಲೇ ದೊಡ್ಡ ಯೋಜನೆಯಾಗಿದ್ದು, ವಿದೇಶದಲ್ಲೂ ಗಮನ ಸೆಳೆದಿದೆ” ಎಂದು ರಾಹುಲ್‌ ಗಾಂಧಿ ತಿಳಿಸಿದರು.

ಗೃಹಲಕ್ಷ್ಮಿ ಯೋಜನೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ಕರ್ನಾಟಕದಲ್ಲಿ 1 ಕೋಟಿ 24 ಲಕ್ಷ ಜನ ಗೃಹಲಕ್ಷ್ಮಿ ಯೋಜನೆಗೆ ಅರ್ಹರಿದ್ದು, ಇದರಲ್ಲಿ 1 ಕೋಟಿ 11 ಲಕ್ಷ ಜನರು ನೋಂದಣಿ ಮಾಡಿಕೊಂಡಿದ್ದಾರೆ. ಇವರ ಖಾತೆಗೆ ಇಂದು 2000 ಖಾತೆಗೆ ಜಮಾ ಆಗುತ್ತಿದೆ. ಶಕ್ತಿ ಯೋಜನೆಯಡಿ ಇಲ್ಲಿಯವರೆಗೆ 48.5 ಕೋಟಿ ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣ ಮಾಡಿದ್ದಾರೆ. ಅನ್ನಭಾಗ್ಯ ಯೋಜನೆಯಡಿ 10 ಕೆಜಿ ನೀಡುವುದಾಗಿ ಭರವಸೆ ನೀಡಿದ್ದು, ಅಕ್ಕಿ ಸಿಗುವವರೆಗೆ 5 ಕೆಜಿ ಅಕ್ಕಿ ಹಾಗೂ 5 ಕೆಜಿಗೆ ಹಣ ನೀಡಲಾಗುತ್ತಿದೆ. ಗೃಹ ಜ್ಯೋತಿ ಯೋಜನೆಯಡಿ 1 ಕೋಟಿ 56 ಲಕ್ಷ ಕುಟುಂಬಕ್ಕೆ ಉಚಿತ ವಿದ್ಯುತ್ ನೀಡಲಾಗುತ್ತಿದೆ” ಎಂದು ಮಾಹಿತಿ ನೀಡಿದರು.

56 ಸಾವಿರ ಕೋಟಿ ರೂ ವೆಚ್ಚ- ಸಿಎಂ ಸಿದ್ದರಾಮಯ್ಯ: 5ನೇ ಯೋಜನೆ ಯುವನಿಧಿಯನ್ನು ಡಿಸೆಂಬರ್ ಅಥವಾ ಜನವರಿ ತಿಂಗಳಲ್ಲಿ ಜಾರಿಗೆ ತರುತ್ತೇವೆ. ಐದು ಯೋಜನೆಗಳಿಗೆ ಒಟ್ಟು 56 ಸಾವಿರ ಕೋಟಿ ಹಣ ವೆಚ್ಚವಾಗುತ್ತದೆ ಎಂದು ಮಾಹಿತಿ ನೀಡಿದರು.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ