Breaking News

ಬಿಬಿಎಂಪಿ ಅಗ್ನಿ ಅನಾಹುತದಲ್ಲಿ ಗಾಯಗೊಂಡ ಮುಖ್ಯ ಅಭಿಯಂತರ ಶಿವಕುಮಾರ್ ಸಾವು

Spread the love

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೇಂದ್ರ ಕಚೇರಿ ಆವರಣದ ಗುಣ ನಿಯಂತ್ರಣ ಪ್ರಯೋಗಾಲಯದ ಕಚೇರಿಯಲ್ಲಿ ಇತ್ತೀಚೆಗೆ ಸಂಭವಿಸಿದ್ದ ಭಾರಿ ಬೆಂಕಿ ಅವಘಡದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮುಖ್ಯ ಅಭಿಯಂತರ ಶಿವಕುಮಾರ್ ಇಂದು (ಬುಧವಾರ) ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ವಿಕ್ಟೋರಿಯಾ ಆಸ್ಪತ್ರೆಗೆ ಮೃತದೇಹ ರವಾನಿಸಿದ್ದು, ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಗುರುವಾರ ಕುಟುಂಬಸ್ಥರಿಗೆ ಹಸ್ತಾಂತರಿಸುವ ಸಾಧ್ಯತೆ ಇದೆ.

ಶೇಷಾದ್ರಿಪುರ ಅಪೋಲೊ ಆಸ್ಪತ್ರೆ ಮುಖ್ಯಸ್ಥ ಡಾ.ಉದಯ್ ಮಾತನಾಡಿ, “ಬಿಬಿಎಂಪಿ ಎಂಜಿನಿಯರ್ ಶಿವಕುಮಾರ್ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟರು. ವಾರದ ಹಿಂದೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಂಜೆ 7 ಗಂಟೆಗೆ ಕೊನೆಯುಸಿರೆಳೆದಿದ್ದಾರೆ. ದೇಹದ ಉಸಿರಾಟ ನಡೆಸುವ ಭಾಗಗಳಿಗೆ ಸಾಕಷ್ಟು ಹಾನಿಯಾಗಿತ್ತು. ಅವರನ್ನು ಉಳಿಸಿಕೊಳ್ಳಲು ಸಾಕಷ್ಟು ಪ್ರಯತ್ನ ನಡೆಯಿತು. ಆದರೆ, ಪ್ರಯತ್ನ ಫಲ ನೀಡಲಿಲ್ಲ” ಎಂದರು.

“ಶಿವಕುಮಾರ್ ಅವರ ಮೃತ ದೇಹವನ್ನು ಅಪೋಲೋ ಆಸ್ಪತ್ರೆಯಿಂದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಈಗಾಗಲೇ ಕೊಂಡೊಯ್ಯಲಾಗಿದೆ. ರಾಜರಾಜೇಶ್ವರಿ ನಗರದಲ್ಲಿರುವ ನಿವಾಸದಲ್ಲಿ ಮೃತ ದೇಹದ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದೆ. ಅವರ ಹುಟ್ಟೂರಾದ ನಂಜನಗೂಡಿನ ಚಂದ್ರವಾಡಿ ಗ್ರಾಮದಲ್ಲಿ ಗುರುವಾರ ಅಂತ್ಯಕ್ರಿಯೆಯ ವಿಧಿ ವಿಧಾನಗಳು ನಡೆಯಲಿವೆ” ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ.


Spread the love

About Laxminews 24x7

Check Also

ಪರಿಶಿಷ್ಟ ಸಮುದಾಯದ ಸಮಸ್ಯೆಗಳಿಗೆ ಕಾಲಮಿತಿಯಲ್ಲಿ ಸ್ಪಂದಿಸಲು ಅಧಿಕಾರಿಗಳಿಗೆ ಸೂಚನೆ.

Spread the loveಯರಗಟ್ಟಿ: ತಾಲೂಕು ಆಡಳಿತ,ತಾಲೂಕ ಪಂಚಾಯತ್ ಸವದತ್ತಿ, ಸಮಾಜ ಕಲ್ಯಾಣ ಇಲಾಖೆ ಇವರ ಆಶ್ರಯದಲ್ಲಿ ತಾಲೂಕಿನ ಪರಿಶಿಷ್ಟ ಜಾತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ