Breaking News

ಅಕ್ರಮ ಜಾಹೀರಾತುದಾರರ ವಿರುದ್ಧ 264 ಎಫ್​ಐಆರ್​​

Spread the love

ಬೆಂಗಳೂರು : ರಾಜಧಾನಿ ಬೆಂಗಳೂರು ನಗರದಲ್ಲಿ ಹೋರ್ಡಿಂಗ್ಸ್, ಫ್ಲೆಕ್ಸ್, ಬ್ಯಾನರ್ ಸೇರಿ ಅಕ್ರಮ ಜಾಹೀರಾತುಗಳ ಹಾವಳಿ ತಪ್ಪಿಸಲು ಪ್ರತಿ ಅಕ್ರಮ ಜಾಹೀರಾತು ಅಳವಡಿಕೆಗೆ 50 ಸಾವಿರ ರೂ ದಂಡ ವಿಧಿಸುವ ಸಂಬಂಧ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಬಿಬಿಎಂಪಿ ಹೈಕೋರ್ಟ್‌ಗೆ ತಿಳಿಸಿದೆ.

 

ಅಲ್ಲದೆ, ಈ ಸಂಬಂಧ 50 ಸಾವಿರ ರೂ.ಗಳವರೆಗೂ ದಂಡ ವಿಧಿಸಲಾಗುತ್ತಿದೆ. ಅಕ್ರಮ ಜಾಹೀರಾತು ಅಳವಡಿಸಿದ್ದ ವ್ಯಕ್ತಿಗಳ ವಿರುದ್ಧ ಒಟ್ಟು 264 ಎಫ್‌ಐಆರ್​ಗಳನ್ನು ದಾಖಲಿಸಲಾಗಿದೆ ಎಂದು ನ್ಯಾಯಪೀಠಕ್ಕೆ ಬಿಬಿಎಂಪಿ ಪರ ವಕೀಲರು ಮಾಹಿತಿ ನೀಡಿದ್ದಾರೆ.

ಮಾಯಿಗೇಗೌಡ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ.ಜೆ.ಎಸ್.ಕಮಲ್ ಅವರಿದ್ದ ನ್ಯಾಯಪೀಠಕ್ಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸಲ್ಲಿಸಿದ್ದ ಅನುಷ್ಠಾನ ವರದಿಯನ್ನು ಬಿಬಿಎಂಪಿ ಪರ ವಕೀಲರು ವಿವರಿಸಿದರು.

2023ರ ಆಗಸ್ಟ್ 2 ರಿಂದ ಒಟ್ಟು 923 ಅನಧಿಕೃತ ಫ್ಲೆಕ್ಸ್, ಬ್ಯಾನರ್​ಗಳು ಮತ್ತು ಇತರ ಅಕ್ರಮ ಜಾಹೀರಾತುಗಳನ್ನು ಗುರುತಿಸಲಾಗಿದೆ. 923 ಅನಧಿಕೃತ ಜಾಹೀರಾತುಗಳನ್ನು ತೆಗೆದುಹಾಕಲಾಗಿದೆ. 369 ದೂರುಗಳನ್ನು ದಾಖಲಿಸಲಾಗಿದ್ದು, ಒಟ್ಟು 264 ಎಫ್‌ಐಆರ್ ದಾಖಲಾಗಿವೆ. ನಗರದಲ್ಲಿ ಅಕ್ರಮ ಜಾಹೀರಾತುಗಳ ಉಪಟಳ ನಿಯಂತ್ರಿಸಲು ಬಿಬಿಎಂಪಿ ಅಧಿಕಾರಿಗಳು ಹೊಸ ವಿಧಾನಗಳಡಿ ಮತ್ತು ಹೆಚ್ಚು ಕಟ್ಟುನಿಟ್ಟಾದ ಕ್ರಿಯಾ ಯೋಜನೆಯನ್ನು ರೂಪಿಸಿದ್ದಾರೆ. ಆ ಮೂಲಕ ಭವಿಷ್ಯದಲ್ಲಿ ಅನಧಿಕೃತ ಫ್ಲೆಕ್ಸ್​ಗಳು, ಬ್ಯಾನರ್​ಗಳನ್ನು ಅಕ್ರಮವಾಗಿ ಅಳವಡಿಸುವುದನ್ನು ಸಂಪೂರ್ಣವಾಗಿ ತಡೆಯಲು ಶ್ರಮಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ