Breaking News
Home / Uncategorized / ಪೌರ ಕಾರ್ಮಿಕ ಮನೆಯಲ್ಲೇ ಆತ್ಮಹತ್ಯೆ ಗುತ್ತಿಗೆದಾರನ ಕಿರುಕುಳವೇ ಕಾರಣ ಎಂದು ಕುಟುಂಬಸ್ಥರ ಆರೋಪ

ಪೌರ ಕಾರ್ಮಿಕ ಮನೆಯಲ್ಲೇ ಆತ್ಮಹತ್ಯೆ ಗುತ್ತಿಗೆದಾರನ ಕಿರುಕುಳವೇ ಕಾರಣ ಎಂದು ಕುಟುಂಬಸ್ಥರ ಆರೋಪ

Spread the love

ಬೆಳಗಾವಿ : ಪೌರ ಕಾರ್ಮಿಕ ಮನೆಯಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ‌ಯ ಗಣೇಶಪುರದಲ್ಲಿ ಇಂದು ನಡೆದಿದೆ.

ಜ್ಯೋತಿ ನಗರದ ನಿವಾಸಿ ಶಶಿಕಾಂತ ಸುಭಾಷ ದವಾಳೆ (26) ಸಾವಿಗೀಡಾದವರು. ಪತ್ನಿ, ನಾಲ್ವರು ಮಕ್ಕಳ ಆಕ್ರಂದನ ಮುಗಿಲುಮುಟ್ಟಿದೆ.

“ಮಹಾನಗರ ಪಾಲಿಕೆಯಲ್ಲಿ ಗುತ್ತಿಗೆ ಆಧಾರದಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಶಶಿಕಾಂತ, ಗುತ್ತಿಗೆದಾರ ಎನ್.ಡಿ.ಪಾಟೀಲ್ ಅವರಿಂದ 80 ಸಾವಿರ ರೂ. ಸಾಲ ಪಡೆದಿದ್ದರು. ಐವತ್ತು ಸಾವಿರ ರೂ. ಸಾಲ ಮರುಪಾವತಿಸಿ 30 ಸಾವಿರ ರೂಪಾಯಿಯನ್ನು ಶೀಘ್ರದಲ್ಲೇ ಹಿಂತಿರುಗಿಸುವುದಾಗಿ ಮನವಿ ಮಾಡಿದ್ದರು. ಇದಕ್ಕೊಪ್ಪದ ಗುತ್ತಿಗೆದಾರ ಒಂದೂವರೆ ಲಕ್ಷ ರೂಪಾಯಿ ಬಡ್ಡಿ ನೀಡುವಂತೆ ಕಿರುಕುಳ ನೀಡುತ್ತಿದ್ದರು” ಎಂದು ದಲಿತ ಮುಖಂಡ ಮಲ್ಲೇಶ ಚೌಗುಲೆ ಆರೋಪಿಸಿದ್ದಾರೆ.

“ಮೂರು ತಿಂಗಳಿನಿಂದ ವೇತನವನ್ನೂ ನೀಡದೇ ಸತಾಯಿಸುತ್ತಿದ್ದರು. ಗುತ್ತಿಗೆದಾರ ಪಾಟೀಲ್ ಮತ್ತು ಸೂಪರ್​ವೈಸರ್​ ಶಂಕರ್ ಅಷ್ಟೇಕರ್ ಅವರು ನೀಡುತ್ತಿದ್ದ ಕಿರುಕುಳ ತಾಳಲಾರದೇ ನಿನ್ನೆ ರಾತ್ರಿ ನೇಣು ಬಿಗಿದುಕೊಂಡು ಶಶಿಕಾಂತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೆ ಗುತ್ತಿಗೆದಾರ ಎನ್‌.ಡಿ.ಪಾಟೀಲ್ ಮತ್ತು ಸೂಪರ್​ವೈಸರ್​ ಶಂಕರ್ ಅಷ್ಟೇರ್ ಕಾರಣ” ಎಂದು ಗಂಭೀರ ಆರೋಪ ಮಾಡಿದರು.

ಮೃತ ಪೌರಕಾರ್ಮಿಕನ ಪತ್ನಿ ಪ್ರಿಯಾಂಕಾ ಮಾತನಾಡಿ, “ಕಳೆದ ಮೂರು ತಿಂಗಳಿನಿಂದ ಗುತ್ತಿಗೆದಾರ ನಮ್ಮ ಯಜಮಾನರಿಗೆ ಪಗಾರ ಕೊಟ್ಟಿರಲಿಲ್ಲ. ಕೊಟ್ಟಿದ್ದ ಸಾಲಕ್ಕೆ ಬಡ್ಡಿ ಸೇರಿಸಿ ಸಾಲ ತೀರಿಸುವಂತೆ ಪ್ರತಿನಿತ್ಯ ಕಿರುಕುಳ ನೀಡುತ್ತಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನನ್ನ ಗಂಡನ ಸಾವಿಗೆ ನ್ಯಾಯ ಸಿಗಬೇಕು” ಎಂದು ಆಗ್ರಹಿಸಿದರು.

ಕ್ಯಾಂಪ್ ಪೊಲೀಸ್ ಠಾಣೆ ಬಳಿ ಆಗಮಿಸಿದ ಪೌರ ಕಾರ್ಮಿಕರು ಮತ್ತು ಮೃತನ ಕುಟುಂಬಸ್ಥರು ಧರಣಿ ನಡೆಸಿದರು. ಗುತ್ತಿಗೆದಾರ ಮತ್ತು ಸೂಪರ್​ವೈಸರ್​ನನ್ನು ಬಂಧಿಸಬೇಕು, ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು. ಕ್ಯಾಂಪ್​ ಪೊಲೀಸ್​ ಠಾಣೆಯಲ್ಲಿ ಈ ಬಗ್ಗೆ ದೂರು ನೀಡಲಾಗಿದೆ.


Spread the love

About Laxminews 24x7

Check Also

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: 625 ಅಂಕ ಪಡೆದ ಬಾಗಲಕೋಟೆಯ ಅಂಕಿತಾ ಬಸಪ್ಪ

Spread the loveಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: 625 ಅಂಕ ಪಡೆದ ಬಾಗಲಕೋಟೆಯ ಅಂಕಿತಾ ಬಸಪ್ಪ ಬೆಂಗಳೂರು ಮೇ 9: ಎಸ್‌ಎಸ್‌ಎಲ್‌ಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ