Breaking News

ವಕೀಲರೊಂದಿಗೆ ಚರ್ಚಿಸಿ ಮುಂದಿನ ಕಾನೂನು ಹೋರಾಟದ ಬಗ್ಗೆ ತೀರ್ಮಾನ’: ಪ್ರಜ್ವಲ್ ರೇವಣ್ಣ

Spread the love

ಹಾಸನ: 2019ರ ಲೋಕಸಭೆ ಚುನಾವಣೆಯ ವೇಳೆ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಸುವಾಗ ಪೂರ್ಣ ಪ್ರಮಾಣದಲ್ಲಿ ಆಸ್ತಿ ವಿವರ ಘೋಷಿಸಿಲ್ಲ ಎಂದು ಅರ್ಜಿದಾರರಾದ ಅಂದಿನ ಬಿಜೆಪಿಯ ಪರಾಜಿತ ಅಭ್ಯರ್ಥಿ ಎ.

ಮಂಜು ಹಾಗೂ ಇತರರು ಹೈಕೋರ್ಟ್‌​ ಮೆಟ್ಟಿಲೇರಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಜ್ವಲ್​ ರೇವಣ್ಣ ಅವರು ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿ ನೀಡಿದ ಆರೋಪ ಸಾಬೀತಾದ ಹಿನ್ನೆಲೆ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಆದೇಶಿಸಿದೆ.

ಈ ಬಗ್ಗೆ ಹಾಸನದಲ್ಲಿ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಪ್ರಜ್ವಲ್ ರೇವಣ್ಣ, ಬಳಿಕ ತಮ್ಮ ಸ್ವಗ್ರಾಮ ಹೊಳೆನರಸೀಪುರ ನಿವಾಸದಲ್ಲಿ ಮಾಧ್ಯಮಗಳಿಗೆ ಮೊದಲ ಹೇಳಿಕೆ ನೀಡಿದ್ದಾರೆ. ‘ನಾನು ವಕೀಲರೊಂದಿಗೆ ಚರ್ಚಿಸಿ ಮುಂದಿನ ಕಾನೂನು ಹೋರಾಟದ ಬಗ್ಗೆ ತೀರ್ಮಾನ ಮಾಡುತ್ತೇನೆ. ಇದು ದೇವರ ಪರೀಕ್ಷೆ ಅಷ್ಟೇ. ಕೋರ್ಟ್ ತೀರ್ಪಿನ ಬಗ್ಗೆ ಮಧ್ಯಾಹ್ನ ಗೊತ್ತಾಯ್ತು. ಅದರ ತೀರ್ಪಿಗೆ ಎಲ್ಲರೂ ತಲೆ ಬಾಗಲೇಬೇಕು. ಹಾಗಾಗಿ ಮುಂದೇನು ಮಾಡಬೇಕು? ಎಂದು ನನ್ನ ತಂದೆ ಹಾಗೂ ದೇವೇಗೌಡರ ಜೊತೆ ಮಾತುಕತೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ’ ಎಂದು ತಿಳಿಸಿದರು.

ಹಲವು ವಿಚಾರಗಳ ಅಡಿಯಲ್ಲಿ ದೂರು ದಾಖಲಾಗಿದೆ. ಕಳೆದ ಒಂದೂವರೆ ವರ್ಷಗಳಿಂದ ನಾನು ಕೋರ್ಟ್​ಗೆ ಹಾಜರಾಗುತ್ತಿದ್ದೇನೆ. ಯಾವ ವಿಚಾರದಲ್ಲಿ ತೀರ್ಪು ಬಂದಿದೆ ಎಂದು ನೋಡಬೇಕಾಗುತ್ತದೆ. ಹಾಗೆಯೇ ಕಾನೂನಾತ್ಮಕವಾಗಿ ಏನು ಮಾಡಬೇಕೋ ಮಾಡೇ ಮಾಡುತ್ತೇವೆ ಎಂದರು


Spread the love

About Laxminews 24x7

Check Also

ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಮೃತಪಟ್ಟ ಕುಟುಂಬಗಳಿಗೆ ₹5 ಲಕ್ಷ ಪರಿಹಾರ

Spread the love ಬೆಂಗಳೂರು: ಮೈಕ್ರೋ ಫೈನಾನ್ಸಿಯರ್​ಗಳ ಕಿರುಕುಳಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಂಡ ಜನರ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ ನೀಡಲಾಗುವುದು ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ