Breaking News

ಸರ್ಕಾರಿ ನೌಕರರ ವರ್ಗಾವಣಾ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆ

Spread the love

ಬೆಂಗಳೂರು : ಸಾರ್ವತ್ರಿಕ ವರ್ಗಾವಣೆ ಅವಧಿ ಮುಗಿದಿರುವುದರಿಂದ ಇನ್ನು ಮುಂದೆ ಯಾವುದೇ ಇಲಾಖೆಯಲ್ಲಿ ವರ್ಗಾವಣೆಗಳನ್ನು ಆಡಳಿತಾತ್ಮಕ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಮಾಡುವುದು ಅತ್ಯಗತ್ಯವಾಗಿದ್ದಲ್ಲಿ ಮುಖ್ಯಮಂತ್ರಿಯವರ ಪೂರ್ವಾನುಮೋದನೆಯನ್ನು ಪಡೆಯಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸುತ್ತೋಲೆ ಹೊರಡಿಸಿದೆ.

 

ಮುಖ್ಯಮಂತ್ರಿ ಅವರ ಅನುಮೋದನೆ ಪಡೆಯದೇ ನೌಕರರ ವರ್ಗಾವಣೆ ಮಾಡಿದರೆ ಆಯಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ ಹಾಗೂ ಇಲಾಖಾ ಮುಖ್ಯಸ್ಥರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

 ಸರ್ಕಾರಿ ನೌಕರರ ವರ್ಗಾವಣಾ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಅವಧಿ ಜುಲೈ 3ಕ್ಕೆ ಮುಗಿದಿದೆಯಾದರೂ, ಕೆಲ ಇಲಾಖೆಗಳು ನಿಗದಿತ ಶೇ. 6ಕ್ಕಿಂತ ಹೆಚ್ಚು ವರ್ಗಾವಣೆ ಮಾಡಿದ್ದು, ವರ್ಗಾವಣೋತ್ತರ ಅನುಮೋದನೆಗೆ ಕಡತ ಮಂಡಿಸಲಾಗಿದೆ. ಇದು ನಿಯಮ ಬಾಹಿರ. ಆಡಳಿತಾತ್ಮಕ ಕಾರಣಗಳಿಗಾಗಿ ವರ್ಗಾವಣೆ ಅನಿವಾರ್ಯವಾದರೆ, ಅಗತ್ಯ ಕಾರಣ ನೀಡಿ ಮುಖ್ಯಮಂತ್ರಿ ಅವರ ಅನುಮತಿ ಪಡೆಯಬೇಕು ಎಂದು ಸೂಚನೆ ನೀಡಲಾಗಿದೆ.

ಸರ್ಕಾರದ ಆದೇಶದಲ್ಲಿ ಸರ್ಕಾರಿ ನೌಕರರ ವರ್ಗಾವಣೆಗಳ ಬಗ್ಗೆ ಮಾರ್ಗಸೂಚಿಗಳನ್ನು ನಿರ್ದಿಷ್ಟಪಡಿಸಲಾಗಿದೆ. ಆದರೆ ಯಾವುದೇ ರೀತಿಯ ಅವಧಿಪೂರ್ವ ವರ್ಗಾವಣೆಗಳನ್ನು ಹಾಗೂ ಸಾಮಾನ್ಯ ವರ್ಗಾವಣಾ ಅವಧಿ ಮುಗಿದ ನಂತರ ಯಾವುದೇ ವರ್ಗಾವಣೆಗಳನ್ನು ಮತ್ತು ಮೇಲೆ ತಿಳಿಸಿರುವಂತೆ ಸರ್ಕಾರಿ ನೌಕರರು ಒಂದು ಸ್ಥಳದಲ್ಲಿರಬಹುದಾದ ಅವಧಿ ವಿಸ್ತರಿಸಿ, ಮಾಡುವ ವರ್ಗಾವಣೆಗಳನ್ನು ಮಾಡುವ ಮುನ್ನ ಸಚಿವಾಲಯದ ಆಡಳಿತ ಇಲಾಖೆಗಳು ಮುಖ್ಯಮಂತ್ರಿಯವರ ಅನುಮೋದನೆಯನ್ನು ತಪ್ಪದೇ ಪಡೆಯತಕ್ಕದ್ದು, ಸರ್ಕಾರದ ಪ್ರಧಾನ ಕಾರ್ಯದರ್ಶಿ/ಕಾರ್ಯದರ್ಶಿಯವರು ಯಾವುದೇ ಪ್ರಸಂಗದಲ್ಲಿ ಮೊದಲು ವರ್ಗಾವಣೆಗಳನ್ನು ಮಾಡಿ ನಂತರ ಮುಖ್ಯಮಂತ್ರಿಯವರ ಸ್ಥಿರೀಕರಣ/ಘಟನೋತ್ತರ ಅನುಮೋದನೆ ಪಡೆಯತಕ್ಕದ್ದಲ್ಲ.

 ಸರ್ಕಾರಿ ನೌಕರರ ವರ್ಗಾವಣಾ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಲು ಸೂಚನೆದಿನಾಂಕ:30.05.2023, 16.06.2023 ಮತ್ತು 30.06.2023ರ ಸರ್ಕಾರದ ಆದೇಶಗಳಲ್ಲಿ 2023-24ನೇ ಸಾಲಿಗೆ ಗ್ರೂಪ್-ಎ, ಬಿ, ಸಿ ಮತ್ತು ಡಿ ವರ್ಗದ ಅಧಿಕಾರಿ/ನೌಕರರಿಗೆ ಅನ್ವಯವಾಗುವಂತೆ ಒಂದು ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇಕಡಾ 6 ರಷ್ಟನ್ನು ಮೀರದಂತೆ ದಿನಾಂಕ:01.06.2023 ರಿಂದ 03.07.2023 ರವರೆಗೆ ಸಾರ್ವತ್ರಿಕ ವರ್ಗಾವಣೆಗಳನ್ನು ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರವನ್ನು ಪ್ರತ್ಯಾಯೋಜಿಸಿ ಆದೇಶಿಸಲಾಗಿದೆ.


Spread the love

About Laxminews 24x7

Check Also

ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ

Spread the loveಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ಒದಗಿಸಿ ; ಕೊಲ್ಲಾಪುರ ಜಿಲ್ಲಾ ರೇಣುಕಾ ಭಕ್ತ ಸಂಘಟನೆಯ ಆಗ್ರಹ ಇಂದು ಬೆಳಗಾವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ