ವಿಜಯಪುರ…. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮೂವರು ಮಕ್ಕಳಿಗೆ ವಿಷ ಹಾಕಿ ತಂದೆ ಆತ್ಮಹತ್ಯೆ ಯತ್ನಿಸಿದ ಪರಿಣಾಮ ಇಬ್ಬರು ಮಕ್ಕಳು ಸಾವನ್ನಪ್ಪಿದ ಅವಮಾನವೀಯ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇಬಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ನಡೆದಿದೆ.
ಆಸ್ಪತ್ರೆಯಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ ಶಾಂತಾ ಹಾಗೂ ರಾಯಣ್ಣ ಮೃತಪಟ್ಟಿರುವ ದುರ್ದೈವಿಗಳಾಗಿದ್ದಾರೆ. ಮಸಬಿನಾಳ ಗ್ರಾಮದ ನಿವಾಸಿ ಭೀರಣ್ಣ ಮಸಬಿನಾಳ ತನ್ನ ಹೆಂಡತಿ ಮನೆ ಬಿಟ್ಟು ಹೋಗಿದ್ದಾಳೆ ಎಂದು ತನ್ನ ಮೂವರು ಮಕ್ಕಳಿಗೆ ವಿಷ ಹಾಕಿದ್ದಾನೆ.
ಭೀರಣ್ಣ ಹಾಗೂ ಮಗ ಸಂಗಮೇಶ ಪ್ರಾಣಪಾಯದಿಂದ ಪಾರಾಗಿದ್ದಾರೆ ಮನಗೂಳಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.