Breaking News

ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೂಡಲೇ ಮಧ್ಯೆ ಪ್ರವೇಶಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ

Spread the love

ಬಳ್ಳಾರಿ: ಕರ್ನಾಟಕ ಮತ್ತು ತಮಿಳುನಾಡು ನಡುವೆ ಕಾವೇರಿ ನೀರು ಹಂಚಿಕೆ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೂಡಲೇ ಮಧ್ಯೆ ಪ್ರವೇಶಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಲು ಹೋಗುವ ದಾರಿಯಲ್ಲಿ ಜಿಲ್ಲೆಯ ತೋರಣಗಲ್‌ನ ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಆರ್‌ಎಸ್‌ನಲ್ಲಿ 113 ಅಡಿ ನೀರು ಬಂದಿದೆ. ಹಾರಂಗಿ ಕಬಿನಿಯಲ್ಲಿ ನೀರು ಬರಬೇಕಿತ್ತು. ಆದರೆ ಮಳೆ ಕೊರತೆಯಿಂದ ನೀರಿನ ಕೊರತೆ ಕಾಡಿದೆ. ಮೇಕೆದಾಟು ವಿಚಾರವಾಗಿ ಅನಗತ್ಯ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ಹೇಳಿದರು.

105 ತಾಲೂಕುಗಳಲ್ಲಿ ಶೀಘ್ರ ಬರ ಘೋಷಣೆ ಮಾಡಲಾಗುವುದು. ಈ ಸಂಬಂಧ ಸೆಪ್ಟೆಂಬರ್ 4ರಂದು ಸಚಿವ ಸಂಪುಟದ ಉಪ ಸಮಿತಿ ಸಭೆ ನಡೆಯಲಿದೆ. ಒಟ್ಟು 114 ತಾಲೂಕುಗಳಲ್ಲಿ ಜಂಟಿ ಸಮೀಕ್ಷೆ ಆಗಿದೆ. 105 ತಾಲೂಕುಗಳಲ್ಲಿ ಬರ ಘೋಷಣೆ ಮಾಡಲಾಗುವುದು. ನಂತರ 73 ತಾಲೂಕುಗಳ ಘೋಷಣೆಗೆ ಸೇರ್ಪಡೆ ಮಾಡಲಾಗುವುದು ಎಂದು ತಿಳಿಸಿದರು.

ಒಂದು ದೇಶ ಒಂದು ಚುನಾವಣೆ ಜಾರಿ ಎಲ್ಲ ರಾಜ್ಯಗಳಿಗೆ ಕಷ್ಟ ಆಗಲಿದೆ ಎನ್ನುವುದು ನನ್ನ ವೈಯಕ್ತಿಕ ವಿಚಾರ. ವಿಧಾನಸಭೆ ಸೇರಿದಂತೆ ಸ್ಥಳೀಯ ಚುನಾವಣೆಗಳನ್ನು ನಡೆಸುವುದು ಸುಲಭವಲ್ಲ. ಮಾಜಿ ರಾಷ್ಟ್ರಪತಿ ಕೋವಿಂದ್ ಅವರ ನೇತೃತ್ವದ ಸಮಿತಿ ವರದಿ ನೀಡಲಿ ಎಂದು ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ

Spread the love ಸರ್ಕಾರಿ ಶಾಲೆಗಳನ್ನು ಉಳಿಸಿ-ಬೆಳೆಸಿ : ಜಿಲ್ಲಾಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಕೊಳವಿ ಗ್ರಾಮದ ನಮ್ಮೂರ ಸರಕಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ