Breaking News

ತಲೆ ಮೇಲೆ ಕಲ್ಲು ಹೊತ್ತುಕೊಂಡು ಮಂಡ್ಯದಲ್ಲಿ ರೈತರ ಪ್ರತಿಭನೆ.. ಕಾವೇರಿ ಕಿಚ್ಚಿಗೆ ದಳಪತಿಗಳು ಎಂಟ್ರಿ, ಸರ್ಕಾರಕ್ಕೆ ಎಚ್ಚರಿಕೆ

Spread the love

ಮಂಡ್ಯ: ಕೆ ಆರ್ ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ವಿಚಾರ ಮಂಡ್ಯದಲ್ಲಿ ಅನ್ನದಾತರ ಆಕ್ರೋಶಕ್ಕೆ ಕಾರಣವಾಗಿದೆ.

ಕಳೆದ ಹಲವು ದಿನಗಳಿಂದ ರೈತರು ರಸ್ತೆಗೆ ಇಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಮಧ್ಯೆ ಇವತ್ತು ರೈತರಿಗೆ ಬೆಂಬಲ ವ್ಯಕ್ತಪಡಿಸಿ ಜೆಡಿಎಸ್​ ನಾಯಕರು ಕಾವೇರಿ ಕಿಚ್ಚಿನಲ್ಲಿ ಪಾಲ್ಗೊಂಡಿದ್ದರು. ಮಂಡ್ಯದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶಕ್ಕೆ ಮಣಿದಿರೋ ರಾಜ್ಯ ಸರ್ಕಾರ, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್ ಜಲಾಶಯದಿಂದ ತಮಿಳುನಾಡಿಗೆ ಕಾವೇರಿ ನದಿಯ ಮೂಲಕ ಪ್ರತಿನಿತ್ಯ ನೀರನ್ನು ಹರಿಸುತ್ತಿದೆ. ಇದು ಜಿಲ್ಲೆಯ ಅನ್ನದಾತರ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಕಳೆದ ಹಲವು ದಿನಗಳಿಂದ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಮಧ್ಯೆ ಅನ್ನದಾತರಿಗೆ ಬೆಂಬಲ ಸೂಚಿಸಿ ಪ್ರತಿಭಟನೆಗೆ ದಳಪತಿಗಳು ಎಂಟ್ರಿಕೊಟ್ಟಿದ್ದಾರೆ.

ಇವತ್ತು ಮಂಡ್ಯದಲ್ಲಿ ಜೆಡಿಎಸ್​ನ ಮುಖಂಡರು ಬೃಹತ್ ಪ್ರತಿಭಟನೆ ನಡೆಸಿದರು. ಮಂಡ್ಯದ ಸಿಲ್ವರ್ ಜ್ಯುಬಲಿ ಪಾರ್ಕ್​ನಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಬೃಹತ್ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇನ್ನು, ಪ್ರತಿಭಟನೆಯಲ್ಲಿ ಜೆಡಿಎಸ್ ಶಾಸಕರಾದ ಜಿ ಟಿ ದೇವೇಗೌಡ, ಹೆಚ್.ಟಿ ಮಂಜು, ಮಾಜಿ ಶಾಸಕರಾದ ಸಿ ಎಸ್ ಪುಟ್ಟರಾಜು, ರವೀಂದ್ರ ಶ್ರೀಕಂಠಯ್ಯ, ಸುರೇಶ್ ಗೌಡ, ಡಾ. ಅನ್ನದಾನಿ ಪಾಲ್ಗೊಂಡಿದ್ದರು. ಇದೇ ವೇಳೆ ಮಾತನಾಡಿದ ಶಾಸಕ ಜಿ ಟಿ ದೇವೇಗೌಡ, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

“ಕಾಂಗ್ರೆಸ್​ನವರು ರೈತರನ್ನು ಸಂಪೂರ್ಣವಾಗಿ ಸಮಾಧಿ ಮಾಡ್ತಾರೆ. ಕಾವೇರಿ ನಮ್ಮೆಲ್ಲರ ತಾಯಿ. ಬದುಕಲು ಕಾವೇರಿ ನೀರು ಬೇಕು. ರಾಜ್ಯ ಸರ್ಕಾರ ತಕ್ಷಣವೇ ತಮಿಳುನಾಡಿಗೆ ನೀರು ನಿಲ್ಲಿಸಬೇಕು. ರಾಜ್ಯ ಸರ್ಕಾರ ಬರೀ ಗ್ಯಾರಂಟಿ ಗುಂಗಿನಲ್ಲಿಯೇ ಇದೆ. ಒಂದು ಹನಿ ನೀರನ್ನು ತಮಿಳುನಾಡಿಗೆ ಬಿಡಬಾರದು” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಕಾಂಗ್ರೆಸ್ ಸರ್ಕಾರ ರೈತರ ಜೀವದ ಜೊತೆ ಚೆಲ್ಲಾಟವಾಡ್ತಿದೆ. ನ್ಯಾಯ ದೇವತೆ ಒಪ್ಪುತ್ತಾಳಾ? ಕೂಡಲೇ ಪ್ರಾಧಿಕಾರದ ಮುಂದೆ ಹೋಗಿ, ಸಂಕಷ್ಟ ಸೂತ್ರ ಅನುಸರಿಸಿದ್ದೀರಾ? ಬರಗಾಲ ಘೋಷಣೆ ಮಾಡಿಲ್ಲ. ರೈತರನ್ನ ಸಂಪೂರ್ಣವಾಗಿ ಸಮಾಧಿ ಮಾಡ್ತಾರೆ ಇವರು. ಗ್ಯಾರಂಟಿ ಗ್ಯಾರಂಟಿ ಯೋಚನೆಯಲ್ಲಿದ್ದಾರೆ. ನಿಮ್ಮ ಗೌರವ ಉಳಿದುಕೊಳ್ಳಬೇಕಾದ್ರೆ ನೀರು ನಿಲ್ಲಿಸಿ. ತಮಿಳುನಾಡಿನಲ್ಲಿ ಒಗ್ಗಟ್ಟು ಇದೆ. ಆದರೆ ನಮ್ಮಲ್ಲಿ ಯಾಕೆ ಒಗ್ಗಟ್ಟು ಇಲ್ಲ” ಎಂದು ಪ್ರಶ್ನಿಸಿದರು.


Spread the love

About Laxminews 24x7

Check Also

ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಮೃತಪಟ್ಟ ಕುಟುಂಬಗಳಿಗೆ ₹5 ಲಕ್ಷ ಪರಿಹಾರ

Spread the love ಬೆಂಗಳೂರು: ಮೈಕ್ರೋ ಫೈನಾನ್ಸಿಯರ್​ಗಳ ಕಿರುಕುಳಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಂಡ ಜನರ ಕುಟುಂಬಕ್ಕೆ 5 ಲಕ್ಷ ರೂ.ಪರಿಹಾರ ನೀಡಲಾಗುವುದು ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ