Breaking News

ಬೀದರ್​ನಲ್ಲಿ ಪೊಲೀಸ್ ಕಾನ್​ಸ್ಟೇಬಲ್​ ಆತ್ಮಹತ್ಯೆ..

Spread the love

ಬೀದರ್​: ಪೊಲೀಸ್ ಕಾನ್​ಸ್ಟೇಬಲ್​ವೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಬಸವಕಲ್ಯಾಣ ಪಟ್ಟಣದ ಲಾಡ್ಜ್ ನಲ್ಲಿ ನಡೆದಿದೆ. ಉಮೇಶ್ ನಾಯ್ಕ (25) ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಪೇದೆ.

ಮೂಲತಃ ವಿಜಯನಗರ ಜಿಲ್ಲೆಯವರಾಗಿದ್ದ ಉಮೇಶ್ 2021ರಲ್ಲಿ ಪೊಲೀಸ್ ಕಾನ್​ಸ್ಟೇಬಲ್​ ಆಯ್ಕೆಯಾಗಿದ್ದರು. ಅವರು ಹಲವು ತಿಂಗಳಿನಿಂದ ಬಸವಕಲ್ಯಾಣ ನಗರ ಪೊಲೀಸ್​ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಉಮೇಶ್ ಆತ್ಮಹತ್ಯೆಗೆ ಪ್ರೇಮ ವೈಫಲ್ಯ ಕಾರಣವಿರಬಹುದು ಎಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ವಿಷಯ ತಿಳಿದ ಪೋಷಕರು ಬೀದರ್​ಗೆ ಆಗಮಿಸಿದ್ದಾರೆ. ಬಸವಕಲ್ಯಾಣ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.

 

ಮಕ್ಕಳಿಗೆ ವಿಷ ಹಾಕಿ ತಂದೆ ಆತ್ಮಹತ್ಯೆ ಯತ್ನ, ಇಬ್ಬರು ಮಕ್ಕಳು ಸಾವು: ಕೌಟುಂಬಿಕ ಕಲಹ ಹಿನ್ನೆಲೆ ಮೂವರು ಮಕ್ಕಳಿಗೆ ವಿಷ ಹಾಕಿ ತಂದೆ ಆತ್ಮಹತ್ಯೆ ಯತ್ನಿಸಿದ ಘಟನೆ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮಸಬಿನಾಳದಲ್ಲಿ ಶನಿವಾರ ನಡೆದಿದೆ. ಮೂವರು ಮಕ್ಕಳ ಪೈಕಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಒಂದು ಮಗು ಹಾಗೂ ತಂದೆ ಭೀರಣ್ಣ ಮಸಬಿನಾಳ ತೀವ್ರ ಅಸ್ವಸ್ಥರಾಗಿದ್ದು, ಅವರನ್ನು ಬಸವನಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.


Spread the love

About Laxminews 24x7

Check Also

ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

Spread the love ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ಕಲಬುರಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ