Breaking News

ನಿವೃತ್ತ ಯೋಧನನ್ನು ಹತ್ಯೆಗೈದ ಬಾಮೈದ

Spread the love

ಚಿಕ್ಕೋಡಿ (ಬೆಳಗಾವಿ): ಚಾಕುವಿನಿಂದ ಕತ್ತು ಸೀಳಿ ನಿವೃತ್ತ ಯೋಧನನ್ನು ಬಾಮೈದ ಹತ್ಯೆಗೈದಿರುವ ಘಟನೆ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಶನಿವಾರ ನಡೆದಿದೆ. ಮೃತರನ್ನು ಚಿಕ್ಕೋಡಿಯ ವಿದ್ಯಾನಗರ ನಿವಾಸಿ ನಿವೃತ್ತ ಯೋಧ ಈರಗೌಡ ಟೋಪಗೋಳ(45) ಎಂದು ಗುರುತಿಸಲಾಗಿದೆ.

ಮೃತ ಈರಗೌಡ ಪತ್ನಿಯ ಸಹೋದರ ಸಂಜಯ್ ಭಾಕರೆ ಕೊಲೆಗೈದ ಆರೋಪಿ ಎಂದು ತಿಳಿದುಬಂದಿದೆ.

ಮೂಲತಃ ಜೈನಾಪುರ ಗ್ರಾಮದವರಾಗಿದ್ದ ಈರಗೌಡ ಟೋಪಗೋಳ ಸೇನೆಯಿಂದ ನಿವೃತ್ತಿ ಹೊಂದಿದ ಬಳಿಕ ಸ್ಟೋನ್‌ ಕ್ರಷರ್ ಘಟಕ ನಡೆಸುತ್ತಿದ್ದರು. ಶನಿವಾರ ಸಂಜೆ ಈರಗೌಡರ ಭೇಟಿಗೆ ಆಗಮಿಸಿದ್ದ ಸಂಜಯ್ ಏಕಾಏಕಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಗಂಭೀರ ಗಾಯಗೊಂಡ ಈರಗೌಡ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಕೌಟುಂಬಿಕ ಕಲಹ ಹಿನ್ನೆಲೆ ಕೊಲೆ ನಡೆದಿರುವುದಾಗಿ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಚಿಕ್ಕೋಡಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ


Spread the love

About Laxminews 24x7

Check Also

ಗಣೇಶ, ಈದ್ ಮಿಲಾದ್ ಹಬ್ಬದ ಹಿನ್ನೆಲೆ ಹು-ಧಾ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರ ನೇತೃತ್ವದಲ್ಲಿ ಅವಳಿನಗರದಲ್ಲಿನ 400 ಡ್ರಗ್ ಪೆಡ್ಲರ್ಸ್ ಹಾಗೂ ಸೇವನೆ ಮಾಡುವವರ ಪರೇಡ್

Spread the love ಗಣೇಶ, ಈದ್ ಮಿಲಾದ್ ಹಬ್ಬದ ಹಿನ್ನೆಲೆ ಹು-ಧಾ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಅವರ ನೇತೃತ್ವದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ