Breaking News

ಮೂವರು ಮಕ್ಕಳಿಗೆ ವಿಷ ಹಾಕಿ ತಂದೆ ಆತ್ಮಹತ್ಯೆ

Spread the love

ವಿಜಯಪುರ: ಕೌಟುಂಬಿಕ ಕಲಹ ಹಿನ್ನೆಲೆ ಮೂವರು ಮಕ್ಕಳಿಗೆ ವಿಷ ಹಾಕಿ ತಂದೆ ಆತ್ಮಹತ್ಯೆ ಯತ್ನಿಸಿದ ಘಟನೆ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮಸಬಿನಾಳದಲ್ಲಿ ಶನಿವಾರ ನಡೆದಿದೆ.

ಮೂವರು ಮಕ್ಕಳ ಪೈಕಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಒಂದು ಮಗು ಹಾಗೂ ತಂದೆ ಭೀರಣ್ಣ ಮಸಬಿನಾಳ ತೀವ್ರ ಅಸ್ವಸ್ಥರಾಗಿದ್ದು, ಅವರನ್ನು ಬಸವನಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ವಿಜಯಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರತಿದಿನ ಮನೆಯಲ್ಲಿ ಪತಿ-ಪತ್ನಿಯ ನಡುವೆ ಜಗಳವಾಗುತ್ತಿತ್ತು. ಇದರಿಂದ ಬೇಸತ್ತಿದ್ದ ಪತಿ ಭೀರಣ್ಣ ಶನಿವಾರ ಪತ್ನಿ ಮನೆಯಲ್ಲಿ ಇರದ ಕಾರಣ ಮಕ್ಕಳಿಗೆ ಹಾಲಿನಲ್ಲಿ ವಿಷ ಬೆರೆಸಿ ಕೊಟ್ಟು ತಾನು ವಿಷ ಸೇವಿಸಿದ್ದಾನೆ. ಮಕ್ಕಳ ಕಿರುಚಾಟ ಕೇಳಿ ಅಕ್ಕಪಕ್ಕದ ಮನೆಯವರು ಆಗಮಿಸಿ ತಕ್ಷಣ ಮನಗೂಳಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಇಬ್ಬರು ಮಕ್ಕಳು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮನಗೂಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ