Breaking News
Home / ರಾಜಕೀಯ / ಏಕಕಾಲಕ್ಕೆ ಚುನಾವಣೆ ನಡೆದರೆ ಇವಿಎಂ-ವಿವಿಪ್ಯಾಟ್ ಖರೀದಿಗೆ ₹9,300 ಕೋಟಿ ವೆಚ್ಚ: ಚುನಾವಣಾ ಆಯೋಗ

ಏಕಕಾಲಕ್ಕೆ ಚುನಾವಣೆ ನಡೆದರೆ ಇವಿಎಂ-ವಿವಿಪ್ಯಾಟ್ ಖರೀದಿಗೆ ₹9,300 ಕೋಟಿ ವೆಚ್ಚ: ಚುನಾವಣಾ ಆಯೋಗ

Spread the love

ನವದೆಹಲಿ: ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲು ಹೆಚ್ಚುವರಿ ಎಲೆಕ್ಟ್ರಾನಿಕ್ ಮತ ಯಂತ್ರಗಳು (ಇವಿಎಂ) ಮತ್ತು ಪೇಪರ್-ಟ್ರಯಲ್ ಯಂತ್ರಗಳನ್ನು ಖರೀದಿಸಲು ಸುಮಾರು 9,300 ಕೋಟಿ ವೆಚ್ಚವಾಗುತ್ತದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

ಒಂದೇ ಸಮಯಕ್ಕೆ ಚುನಾವಣೆಗಳನ್ನು ನಡೆಸಲು ಅಗತ್ಯ ಕಾರ್ಯಸೂಚಿಯನ್ನು ಪರಿಶೀಲಿಸಲು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಇತ್ತೀಚೆಗೆ ಉನ್ನತ ಮಟ್ಟದ ಸಮಿತಿ ರಚಿಸಿತ್ತು.

‘ಒಂದು ರಾಷ್ಟ್ರ ಒಂದು ಚುನಾವಣೆ’ಯಡಿ ಏಕಕಾಲಕ್ಕೆ ಚುನಾವಣೆ ನಡೆಸುವಾಗ ಎದುರಾಗಬಹುದಾದ ಹಲವಾರು ಸಮಸ್ಯೆಗಳನ್ನು ಚುನಾವಣಾ ಆಯೋಗ ವಿವರಿಸಿದೆ. ಏಕಕಾಲದಲ್ಲಿ ಚುನಾವಣೆ ನಡೆಸಲು ಎಲೆಕ್ಟ್ರಾನಿಕ್ ಮತಯಂತ್ರಗಳು ಮತ್ತು ವೋಟರ್ ವೆರಿಫೈಯಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿಪಿಎಟಿ) ಯಂತ್ರಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಖರೀದಿಸಬೇಕಾಗುತ್ತದೆ ಎಂಬುದು ಇಲ್ಲಿ ಪ್ರಮುಖ ವಿಷಯ. ಏಕಕಾಲಕ್ಕೆ ಚುನಾವಣೆ ನಡೆಸಲು, ಇವಿಎಂ ಮತ್ತು ವಿವಿಪ್ಯಾಟ್‌ಗಳ ಖರೀದಿಗೆ ಒಟ್ಟು 9284.15 ಕೋಟಿ ರೂಪಾಯಿ ಬೇಕಾಗುತ್ತದೆ ಎಂದು ಆಯೋಗ ಅಂದಾಜು ಮಾಡಿದೆ.

‘ಇವಿಎಂನ ಬಳಕೆಯ ಅವಧಿ 15 ವರ್ಷಗಳು. ಆ ಅವಧಿಯೊಳಗೆ ಯಂತ್ರಗಳನ್ನು ಬದಲಾಯಿಸಬೇಕು. ಇದರಿಂದ ವೆಚ್ಚ ಅಧಿಕವಾಗುತ್ತದೆ. ಅದಲ್ಲದೆ, ಈ ಯಂತ್ರಗಳನ್ನು ಸಂಗ್ರಹಿಸುವುದರಿಂದ ಗೋದಾಮಿನ ವೆಚ್ಚ ಕೂಡ ಹೆಚ್ಚಾಗುತ್ತದೆ’ ಎಂಬುದು ಚುನಾವಣಾ ಆಯೋಗದ ಲೆಕ್ಕಾಚಾರ.

ಎರಡು ಸಾರ್ವಜನಿಕ ವಲಯದ ಉದ್ಯಮಗಳಾದ (PSU) ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಮತ್ತು ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್, ರಿಮೋಟ್ ವೋಟಿಂಗ್ ಮಷೀನ್ (RVM) ಮತ್ತು ವೋಟರ್ ವೆರಿಫೈಯಬಲ್ ಪೇಪರ್ ಆಡಿಟ್ ಟ್ರಯಲ್‌ಗಳನ್ನು (VVPAT) ತಯಾರಿಸುತ್ತವೆ. ಚುನಾವಣಾ ಆಯೋಗವು ಸಂಸತ್ತಿನ ಮತ್ತು ವಿಧಾನಸಭೆ ಚುನಾವಣೆಗಳನ್ನು ನಡೆಸಲು ಆದೇಶಿಸಿದರೆ, ರಾಜ್ಯ ಚುನಾವಣಾ ಆಯೋಗವು ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಡೆಸುತ್ತದೆ. ಚುನಾವಣಾ ಆಯೋಗ (EC) ಮತ್ತು ರಾಜ್ಯ ಚುನಾವಣಾ ಆಯೋಗಗಳು (SEC) ಸಂವಿಧಾನದ ಅಡಿಯಲ್ಲಿ ಒಂದು ನಿರ್ದಿಷ್ಟ ಆದೇಶದೊಂದಿಗೆ ಪ್ರತ್ಯೇಕ ಸಂಸ್ಥೆಗಳಾಗಿವೆ.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ