Breaking News
Home / ಜಿಲ್ಲೆ / ಬೆಳಗಾವಿ / ಚಿಕ್ಕೋಡಿ / ಗಡಿಭಾಗದಲ್ಲಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಮೂರು ಸರ್ಕಾರಿ ಶಾಲೆಗಳು ಬಂದ್ ಆಗಿವೆ.

ಗಡಿಭಾಗದಲ್ಲಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಮೂರು ಸರ್ಕಾರಿ ಶಾಲೆಗಳು ಬಂದ್ ಆಗಿವೆ.

Spread the love

ಮಕ್ಕಳ ಶೂನ್ಯ ಹಾಜರಾತಿಯಿಂದ ಶಾಲೆಗಳು ಬಂದ್ ಆಗಿವೆ ಅಂತಾ ಅಧಿಕಾರಿಗಳು ಹೇಳ್ತಾರೆ. ಆದ್ರೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಶೂನ್ಯ ಹಾಜರಾತಿ ಆಗುತ್ತಿರೋದೇಕೆ? ಸರ್ಕಾರಿ ಶಾಲೆಗಳಿಂದ ಮಕ್ಕಳು ದೂರವಾಗುತ್ತಿದ್ದಾರೆ. ಇದನ್ನ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕಿದೆ.

ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ವ್ಯಾಪ್ತಿಗೆ ಒಟ್ಟು ಎಂಟು ತಾಲೂಕುಗಳು ಬರುತ್ತೆ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ವ್ಯಾಪ್ತಿಯಲ್ಲಿ 3500ಕ್ಕೂ ಹೆಚ್ಚು ಪ್ರಾಥಮಿಕ ಶಿಕ್ಷಕರ ಹುದ್ದೆಗಳು ಖಾಲಿ ಇದ್ದು 99 ಪ್ರಾಥಮಿಕ ಶಾಲೆಗಳಲ್ಲಿ ಸರ್ಕಾರಿ ಶಿಕ್ಷಕರೇ ಇಲ್ಲ. ಅದರಲ್ಲೂ ಬೆಳಗಾವಿಯ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗೆ ಅತಿಥಿ ಶಿಕ್ಷಕರೇ ಆಗಡಿಭಾಗದಲ್ಲಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಮೂರು ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಸರೆಯಾಗಿದ್ದಾರೆ. ಚಿಕ್ಕೋಡಿ ತಾಲೂಕಿನ 8, ರಾಯಬಾಗ – 22, ಮೂಡಲಗಿ 13, ಗೋಕಾಕ್ – 1, ಅಥಣಿ – 30, ನಿಪ್ಪಾಣಿ – 15, ಹುಕ್ಕೇರಿ, ಕಾಗವಾಡ ತಾಲೂಕಿನ ತಲಾ ಐದು ಶಾಲೆಗಳಲ್ಲಿ ಸರ್ಕಾರಿ ಶಿಕ್ಷಕರೇ ಇಲ್ಲ. ಇಲ್ಲೆಲ್ಲ ಒಬ್ಬೊಬ್ಬರೇ ಅತಿಥಿ ಶಿಕ್ಷಕರು ಇಡೀ ಶಾಲೆಯ ಮಕ್ಕಳಿಗೆ ಪಾಠ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಅದರಲ್ಲೂ ಈ ಎಲ್ಲಾ ಶಾಲೆಗಳಿರೋದು ಹಳ್ಳಿಗಳಲ್ಲಿ. ಶಿಕ್ಷಕರ ಕೊರತೆ ಹಿನ್ನೆಲೆ ಸರ್ಕಾರಿ ಶಾಲೆಯಿಂದ ಮಕ್ಕಳು ದೂರವಾಗುತ್ತಿದ್ದಾರೆ. ಕೆಂಪಟ್ಟಿಯ ನಾಯಿಕ ತೋಟದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಕಳೆದ ಎಂಟು ವರ್ಷಗಳಿಂದ ಅತಿಥಿ ಶಿಕ್ಷಕರೇ ಆಸರೆಯಾಗಿದ್ದಾರೆ. ಸರ್ಕಾರಿ ಶಿಕ್ಷಕರೇ ನೇಮಕಗೊಂಡಿಲ್ಲ. ಈ ಹಿಂದೆ 100 ಮಕ್ಕಳ ಹಾಜರಾತಿ ಇದ್ದ ಈ ಶಾಲೆಯಲ್ಲಿ ಇಂದು 27ಕ್ಕೆ ಕುಸಿತ ಕಂಡಿದೆ. 1 ರಿಂದ 5ನೇ ತರಗತಿಯವರೆಗಿನ 27 ಮಕ್ಕಳಿಗೆ ಒಬ್ಬರೇ ಅತಿಥಿ ಶಿಕ್ಷಕಿ ಪಾಠ ಮಾಡುತ್ತಿದ್ದಾರೆ. ಹೀಗಾಗಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗುತ್ತಿಲ್ಲ ಎಂದು ಹಲವು ಪೋಷಕರು ಖಾಸಗಿ ಶಾಲೆಗಳ ಮೊರೆ ಹೋಗಿದ್ದಾರೆ. ಉಳ್ಳವರು ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಕಲಿಸುತ್ತಾರೆ ನಾವೇನೂ ಮಾಡೋದು ಅಂತಾ ಬಡರೈತರು ಪ್ರಶ್ನೆ ಮಾಡುತ್ತಿದ್ದಾರೆ.ಬೈಟ್.

ಇನ್ನು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಶಿಕ್ಷಕರ ಕೊರತೆ ಹಿನ್ನೆಲೆ ಮಕ್ಕಳನ್ನು ಸರ್ಕಾರಿ ಶಾಲೆಗೆ ಕಳುಹಿಸಲು ಪೋಷಕರು ಹಿಂದೇಟು ಹಾಕುತ್ತಿದ್ದಾರೆ. ಮಕ್ಕಳ ಹಾಜರಾತಿ ಶೂನ್ಯ ಕಾರಣವೊಡ್ಡಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಮೂರು ಸರ್ಕಾರಿ ಶಾಲೆಗಳು ಈಗಾಗಲೇ ಬಂದ್ ಆಗಿವೆ. ನಿಪ್ಪಾಣಿ ಹೊರವಲಯದ ಬಿ.ಶಂಕರಾನಂದ ನಗರದ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆ ಸೇರಿ ಒಟ್ಟು ಮೂರು ಶಾಲೆಗಳು ಬಂದ್ ಆಗಿವೆ. ಈ ಕುರಿತು ಪ್ರತಿಕ್ರಿಯಿಸಿರುವ ಚಿಕ್ಕೋಡಿ ಡಿಡಿಪಿಐ ಮೋಹನ್ ಹಂಚ್ಯಾಟೆ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಒಟ್ಟು ಮೂರು ಶಾಲೆಗಳಲ್ಲಿ ಮಕ್ಕಳ ಶೂನ್ಯ ಹಾಜರಾತಿ ಇದೆ. ನಾವೇನು ಶಾಲೆಗಳನ್ನು ಮುಚ್ಚಿಲ್ಲ ಮಕ್ಕಳು ಬಂದ್ರೆ ಶಿಕ್ಷಕರ ನೇಮಿಸಿ ಆರಂಭಿಸುತ್ತೇವೆ ಎಂದಿದ್ದಾರೆ. ಇನ್ನು ಗಡಿ ಭಾಗದ ಶಾಲೆಗಳ ಅಭಿವೃದ್ಧಿಗೆ ವಿಶೇಷ ಕ್ರಿಯಾ ಯೋಜನೆ ತಯಾರಿಸಿ ಕಳೆದ ಮಾರ್ಚ್​ನಲ್ಲಿ ರಾಜ್ಯ ಸರ್ಕಾರಕ್ಕೆ ಕಳುಹಿಸಿದ್ದೇವೆ. ಸರ್ಕಾರ ಹಂತದಲ್ಲಿ ಮಂಜೂರಾಗಿ ಬಂದ್ರೆ ಉತ್ತಮ ಸೌಲಭ್ಯ ಸಿಗುತ್ತೆ ಎಂದಿದ್ದಾರೆ. ಇನ್ನು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಶಿಕ್ಷಕರ ಕೊರತೆ ಕುರಿತು ಪ್ರತಿಕ್ರಿಯಿಸಿ, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಪ್ರಾಥಮಿಕ ಶಾಲೆಗಳಲ್ಲಿ 3243 ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆ ಖಾಲಿ ಇದ್ದು 2561 ಅತಿಥಿ ಶಿಕ್ಷಕರ ನೇಮಕ ಮಾಡಿಕೊಂಡಿದ್ದೇವೆ. ಬಹಳಷ್ಟು ಶಿಕ್ಷಕರು ವರ್ಗಾವಣೆ ಆಗಿದ್ದು ಅತಿಥಿ ಶಿಕ್ಷಕರ ನೇಮಕ ಮಾಡಿಕೊಂಡಿದ್ದೇವೆ. ಪ್ರೌಢಶಾಲೆಗಳಲ್ಲಿ 536 ಶಿಕ್ಷಕರು ಖಾಲಿ ಇದ್ದು 474 ಅತಿಥಿ ಶಿಕ್ಷಕರ ನೇಮಕ ಮಾಡಿಕೊಂಡಿದ್ದೇವೆ. ಶಿಕ್ಷಕರ ನೇಮಕಾತಿ ಕೆಲ ದಿನಗಳಲ್ಲಿ ಆಗುತ್ತೆ ಬಳಿಕ ಈ ಕೊರತೆ ನೀಗುತ್ತೆ ಎಂದು ತಿಳಿಸಿದ್ದಾರೆ. ಬೈಟ್.

ಒಟ್ಟಿನಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಿ ಅನುಕೂಲ ಮಾಡಿಕೊಡಬೇಕಿದೆ. ಇನ್ನು ಅತಿಥಿ ಶಿಕ್ಷಕರ ನೇಮಕ ಮಾಡಿದ್ದು ಎರಡು ತಿಂಗಳಿಂದ ಅವರಿಗೂ ಸಂಬಳವಾಗಿಲ್ಲ. ಬಡ ರೈತರ ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಸರ್ಕಾರ ಕ್ರಮ ಕೈಗೊಳ್ಳಲಿ ಎಂಬುದು ಸಾರ್ವಜನಿಕರ ಹಕ್ಕೊತ್ತಾಯ.

 


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ