Breaking News

ದೆಹಲಿಯ ಸರ್​ ಗಂಗಾರಾಮ್​ ಆಸ್ಪತ್ರೆಗೆ ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ ದಾಖಲ!

Spread the love

ನವದೆಹಲಿ: ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ ಇಂದು ರಾಷ್ಟ್ರ ರಾಜಧಾನಿ ದೆಹಲಿಯ ಸರ್​ ಗಂಗಾರಾಮ್​ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೌಮ್ಯ ಜ್ವರದಿಂದ (Mild Fever) ಅವರು ಬಳಲುತ್ತಿದ್ದು, ಆರೋಗ್ಯ ಸ್ಥಿರವಾಗಿದೆ.

ತಜ್ಞ ವೈದ್ಯರು ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

”ಸೋನಿಯಾ ಗಾಂಧಿ ಶನಿವಾರ ಸಂಜೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಚೆನ್ನಾಗಿಯೇ ಇದ್ದಾರೆ. ವೈದ್ಯರ ತಂಡ ಆರೋಗ್ಯದ ಮೇಲ್ವಿಚಾರಣೆ ನಡೆಸುತ್ತಿದೆ” ಎಂದು ಆಸ್ಪತ್ರೆಯ ಹಿರಿಯ ವೈದ್ಯರು ತಿಳಿಸಿದ್ದಾರೆ ಎಂದು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.

 

 

ಈ ಹಿಂದೆ ಸೋನಿಯಾ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ನಂತರದ ಸಮಸ್ಯೆಗಳನ್ನು ಅವರು ಎದುರಿಸುತ್ತಿದ್ದರು. ಎರಡು ಬಾರಿ ಅವರಿಗೆ ಸೋಂಕು ದೃಢಪಟ್ಟಿತ್ತು. ಇತ್ತೀಚೆಗೆ ಮುಂಬೈನಲ್ಲಿ ನಡೆದ ಪ್ರತಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟದ ಸಭೆಯಲ್ಲಿ ಪಾಲ್ಗೊಂಡಿದ್ದರು. ಇದಕ್ಕೂ ಮುನ್ನ ಜಮ್ಮು ಮತ್ತು ಕಾಶ್ಮೀರದ ಪ್ರವಾಸವನ್ನೂ ಅವರು ಕೈಗೊಂಡಿದ್ದರು.


Spread the love

About Laxminews 24x7

Check Also

ಉಪಚುನಾವಣೆಯಲ್ಲಿ ಮೇಟಿ ಕುಟುಂಬದವರಿಗೆ ಟಿಕೆಟ್

Spread the loveಬೆಳಗಾವಿ: ‘ಕಾಂಗ್ರೆಸ್ ಶಾಸಕ ಎಚ್‌.ವೈ. ಮೇಟಿ ನಿಧನದಿಂದ ತೆರವಾಗಿರುವ ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ನಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ