Breaking News

ಸಚಿವ ಉದಯನಿಧಿ ಸ್ಟಾಲಿನ್ ವಿರುದ್ಧ ಪ್ರತಿಭಟನೆ

Spread the love

ಚಾಮರಾಜನಗರ: ಸನಾತನ ಧರ್ಮದ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವ ತಮಿಳುನಾಡಿನ‌ ಸಚಿವ ಉದಯನಿಧಿ ಅವರನ್ನು ಬಂಧಿಸಿ, ಮೊಕದ್ದಮೆ ದಾಖಲಿಸಬೇಕು ಎಂದು ಕನ್ನಡಪರ ಹೋರಾಟಗಾರ ಚಾ.ರಂ.ಶ್ರೀನಿವಾಸಗೌಡ ಆಗ್ರಹಿಸಿದರು.

ಚಾಮರಾಜನಗರದಲ್ಲಿ ಮಾಧ್ಯಮವರೊಟ್ಟಿಗೆ ಮಾತನಾಡಿ, ಸನಾತನ ಧರ್ಮ ಕೊರೊನಾ, ಡೆಂಘಿ ಇದ್ದಂತೆ ಎಂದು ಹೇಳಿಕೆ ಕೊಟ್ಟಿರುವುದು ಖಂಡನೀಯ, ಸನಾತನ ಧರ್ಮ ಎಂದರೆ ನಿನ್ನೆ- ಮೊನ್ನೆ ಹುಟ್ಟಿದ್ದಲ್ಲ, ಉದಯನಿಧಿ ಅಂತಹವರು ಕೋಟಿ ಮಂದಿ ಹುಟ್ಟಿದರೂ ಹಿಂದೂ ಧರ್ಮವನ್ನು ಕಿತ್ತುಹಾಕಲು ಸಾಧ್ಯವಿಲ್ಲ ಎಂದು ಕಿಡಿಕಾರಿದರು.

ಎಲ್ಲಾ ಧರ್ಮಗಳಿಗೂ ಅದರದೇ ಗೌರವವಿದೆ, ಎಲ್ಲ ಧರ್ಮವನ್ನು ಗೌರವಯುತವಾಗಿ ಕಾಣಬೇಕು, ಎಲ್ಲ ಧರ್ಮವನ್ನು ಪ್ರೀತಿಸಬೇಕು. ಅದನ್ನು ಬಿಟ್ಟುಆ ಧರ್ಮ ಸರಿಯಿಲ್ಲ- ಈ ಧರ್ಮ‌ ಸರಿಯಿಲ್ಲ ಎನ್ನುವುದು ಸರಿಯಲ್ಲ. ಕೂಡಲೇ ಉದಯನಿಧಿಯನ್ನು ಬಂಧಿಸಿ, ಮೊಕದ್ದಮೆ ದಾಖಲು ಮಾಡಬೇಕು ಎಂದು ಒತ್ತಾಯಿಸಿದರು.

ಕಾವೇರಿ ಕಿಚ್ಚು 6 ನೇ ದಿನ: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಖಂಡಿಸಿ ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ 6ನೇ ದಿನಕ್ಕೆ ಪ್ರತಿಭಟನೆ ಕಾಲಿಟ್ಟಿದ್ದು ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಕರ್ನಾಟಕಕ್ಕೆ ಕುಡಿಕೆ ನೀರು ಸಿಕ್ಕಿದೆ ಎಂದು ಆರೋಪಿಸಿ ಕುಡಿಕೆಯಲ್ಲಿ ನೀರನ್ನು ಹಿಡಿದು ಪ್ರತಿಭಟನೆ ನಡೆಸಿ ತಮಿಳುನಾಡಿಗೆ ನೀರು ಬಿಡುವುದನ್ನು ಕೂಡಲೇ ನಿಲ್ಲಿಸಬೇಕೆಂದು ಒತ್ತಾಯಿಸಿದರು. ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಭುವನೇಶ್ವರಿ ವೃತ್ತದಲ್ಲಿ ರಸ್ತೆ ತಡೆದು ಕುಡಿಕೆ‌ಯಲ್ಲಿ ನೀರು ಹಿಡಿದು ಸರ್ಕಾರಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಉದಯನಿಧಿ ಹೇಳಿಕೆಗೆ ಬಿಜೆಪಿ ಖಂಡನೆ: ಉದಯನಿಧಿ ಸ್ಟಾಲಿನ್ ಹೇಳಿಕೆಯನ್ನು ಬಿಜೆಪಿ ಖಂಡಿಸಿದ್ದು, ರಾಹುಲ್ ಗಾಂಧಿ ಮೊಹಬ್ಬತ್ ಕಿ ದುಕಾನ್ ಬಗ್ಗೆ ಮಾತನಾಡುತ್ತಾರೆ. ಆದರೆ, ಅದರ ಮಿತ್ರ ಪಕ್ಷವಾದ ಡಿಎಂಕೆ ನಾಯಕ ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಕರೆ ನೀಡಿದ್ದಾರೆ. ಕಾಂಗ್ರೆಸ್‌ ಈ ಬಗ್ಗೆ ಮೌನ ವಹಿಸಿದ್ದು, ನರಮೇಧದ ಕರೆಗೆ ಬೆಂಬಲ ನೀಡಿದಂತಿದೆ ಎಂದು ಟೀಕಿಸಿದೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ