Breaking News

ಎನ್​​ಎಸ್​ಇಯಲ್ಲಿ ಕನ್ನಡ ಮಾಧ್ಯಮ ಸೇರಿಸುವಂತೆ ಕೋರಿ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.

Spread the love

ಬೆಂಗಳೂರು : ಭಾರತೀಯ ಭೌತಶಾಸ್ತ್ರ ಉಪನ್ಯಾಸಕರ ಒಕ್ಕೂಟ ನಡೆಸುತ್ತಿರುವ ರಾಷ್ಟ್ರೀಯ ಪ್ರಮಾಣಿತ ಪರೀಕ್ಷೆ (NSE)ಯಲ್ಲಿ ಕನ್ನಡ ಮಾಧ್ಯಮ ಸೇರಿಸುವಂತೆ ಕೋರಿ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.

 

ಭಾರತೀಯ ಭೌತಶಾಸ್ತ್ರ ಉಪನ್ಯಾಸಕರ ಒಕ್ಕೂಟ ನಡೆಸುವ ದೇಶದ ಪ್ರತಿಷ್ಠಿತ ಪರೀಕ್ಷೆಗಳಲ್ಲಿ ಒಂದಾದ ರಾಷ್ಟ್ರೀಯ ಪ್ರಮಾಣಿತ ಪರೀಕ್ಷೆ (NSE)ಯನ್ನು ಕನ್ನಡ ಮಾಧ್ಯಮದಲ್ಲಿ ಬರೆಯುವ ಆಯ್ಕೆ ನೀಡದಿರುವುದರಿಂದ ನಮಗೆ ನೋವಾಗಿದೆ. NSE ಭೌತಶಾಸ್ತ್ರ, ಕೆಮಿಸ್ಟ್ರಿ, ಜೀವಶಾಸ್ತ್ರ ಮತ್ತು ಖಗೋಳಶಾಸ್ತ್ರ ಪರೀಕ್ಷೆಗಳನ್ನು ಕನ್ನಡ ಮಾಧ್ಯಮದಲ್ಲಿ ಬರೆಯಲು ಅವಕಾಶ ನೀಡಬೇಕು. ಕನ್ನಡ ಭಾರತ ಸಂವಿಧಾನದ 8ನೇ ಅನುಚ್ಛೇದದಡಿ ಪಟ್ಟಿ ಮಾಡಲಾದ ಆರು ಶಾಸ್ತ್ರೀಯ ಭಾಷೆಗಳಲ್ಲಿ ಒಂದಾಗಿದೆ ಎಂದು ಮನವಿ ಮಾಡಿದ್ದಾರೆ.

ರಾಜ್ಯದ ಕನ್ನಡ ವಿದ್ಯಾರ್ಥಿಗಳಿಗಾಗಿ ಅನುಕೂಲವಾಗುವಂತೆ ಪರೀಕ್ಷೆ ಬರೆಯಲು ಕನ್ನಡ‌ ಮಾಧ್ಯಮವನ್ನು ಸೇರಿಸುವ ನಿಟ್ಟಿನಲ್ಲಿ ಕ್ರಮ ವಹಿಸಲು ನಿಮ್ಮನ್ನು ಕೋರುತ್ತೇನೆ. ಆ ಮೂಲಕ ಹೆಚ್ಚಿನ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅನುಕೂಲವಾಗಲಿದೆ. ಅದರಿಂದ ಅವರ ವೈಜ್ಞಾನಿಕ ಕಲಿಕೆಗಳನ್ನು ಕಲಿಯಲು ಹೆಚ್ಚಿನ ಅವಕಾಶ ಸಿಗಲಿದೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ನೀವು ಪರಿಶೀಲನೆ ನಡೆಸುವ ನಿರೀಕ್ಷೆ ಇದ್ದು, ಮುಂಬರುವ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಸೂಕ್ತ ಬದಲಾವಣೆ ಮಾಡುತ್ತೀರಿ ಎಂಬ ವಿಶ್ವಾಸ ಇದೆ. ಈ ಸಂಬಂಧ ಕ್ರಮ ತೆಗೆದುಕೊಳ್ಳುವ ಆಶಾಭಾವನೆ ಇದೆ ಎಂದು ಪತ್ರದಲ್ಲಿ ಬರೆದಿದ್ದಾರೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ