Breaking News

ಬರ ಘೋಷಿತ ತಾಲೂಕುಗಳಲ್ಲಿ ಮನೆಯ ಪ್ರತಿ ಸದಸ್ಯರಿಗೆ 10 ಕೆಜಿ ಅಕ್ಕಿ: ಸಚಿವ ಕೆ ಹೆಚ್ ಮುನಿಯಪ್ಪ

Spread the love

ಬೆಂಗಳೂರು: ಬರ ಘೋಷಣೆ ಆಗುವ ತಾಲೂಕುಗಳಿಗೆ ಪಡಿತರ ಅಕ್ಕಿ ವಿತರಿಸಲು ತೀರ್ಮಾನಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದರು.

ಬೆಂಗಳೂರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬರ ಎಂದು ಘೋಷಿಸುವ ಎಲ್ಲ ತಾಲೂಕಿನಲ್ಲಿ 10 ಕೆಜಿ ಅಕ್ಕಿ ವಿತರಣೆ ಮಾಡಲಿದ್ದೇವೆ. ಮನೆಯ ಪ್ರತೀ ಸದಸ್ಯರಿಗೆ 10 ಕೆಜಿ ಅಕ್ಕಿ ವಿತರಿಸಲು ನಿರ್ಧರಿಸಲಾಗಿದೆ. ಸುಮಾರು 114 ತಾಲೂಕುಗಳನ್ನ ಬರಪೀಡಿತ ತಾಲೂಕು ಎಂದು ಘೋಷಿಸುವ ಸಾಧ್ಯತೆ ಇದೆ. ಹೀಗಾಗಿ 114 ತಾಲೂಕಿನ ಮನೆಯ ಪ್ರತೀ ಸದಸ್ಯರಿಗೆ 10 ಕೆಜಿ ಅಕ್ಕಿ ನೀಡಲು ತಯಾರಿ ನಡೆಸಿದ್ದೇವೆ ಎಂದರು.

ಬರ ಘೋಷಣೆ ಆಗ್ತಿದ್ದಂತೆ 10 ಕೆಜಿ ಅಕ್ಕಿ ವಿತರಿಸಲು ಬೇಕಾದ ವ್ಯವಸ್ಥೆ ಮಾಡಿಕೊಂಡಿರುವ ಆಹಾರ ಇಲಾಖೆ, ಸದ್ಯ ಐದು ಕೆಜಿ ಹಣದ ಬದಲು ಅಕ್ಕಿ ನೀಡಲಾಗುವುದು. ರಾಜ್ಯ ಸರ್ಕಾರದ ಅನ್ನಭಾಗ್ಯದಡಿ ಅಕ್ಕಿ ಕೊರತೆ ಹಿನ್ನೆಲೆ ಐದು ಕೆಜಿ ಅಕ್ಕಿ ಬದಲು ಬಿಪಿಎಲ್ ಪಡಿತರದಾರರಿಗೆ ಮಾಸಿಕ 170 ರೂ. ನಗದು ವರ್ಗಾವಣೆ ಮಾಡಲಾಗುತ್ತಿದೆ. ಆದರೆ, ಬರ ಎಂದು ಘೋಷಿಸಲ್ಪಡುವ ತಾಲೂಕುಗಳಲ್ಲಿ ಹಣದ ಬದಲು ಐದು ಅಕ್ಕಿ ನೀಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಉಚಿತ ಸ್ಕೀಂಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟೀಕೆ ವಿಚಾರವಾಗಿ ಮಾತನಾಡಿ, ದೇಶದಲ್ಲಿ 35 ರಿಂದ 37ರಷ್ಟು ಬಡತನ ರೇಖೆಗಿಂತ ಕೆಳಗಿನ ಜನರಿದ್ದಾರೆ. ಯುಪಿಎ ಇದ್ದಾಗ ಆಹಾರ ಭದ್ರತಾ ಕಾಯ್ದೆ ತಂದೆವು. ಯಾರೂ ಕೂಡ ಕೆಲಸ ಇಲ್ಲದೇ ಮಲಗಬಾರದು ಅಂತ ನರೇಗಾ ಯೋಜನೆ ತಂದೆವು. ಈ ಆಹಾರ ಭದ್ರತಾ ಕಾಯಿದೆಯಿಂದ ಜನರಿಗೆ ಅನುಕೂಲ ಆಗುತ್ತಿದೆ ಎಂದು ಹೇಳಿದರು.

62 ತಾಲೂಕು ಬರ ಘೋಷಣೆಗೆ ಅರ್ಹ – ಸಚಿವ ಕೃಷ್ಣ ಬೈರೇಗೌಡ: ಮತ್ತೊಂದೆಡೆ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಬೆಳೆ ಸಮೀಕ್ಷೆಯಂತೆ 62 ತಾಲೂಕುಗಳು ಬರ ಎಂದು ಘೋಷಿಸಲು ಅರ್ಹವಾಗಿದ್ದು, ಉಳಿದಂತೆ 134 ತಾಲೂಕುಗಳಲ್ಲಿ ಬೆಳೆ ಸಮೀಕ್ಷೆ ಮಾಡಲು ಸಚಿವ ಸಂಪುಟ ಉಪಸಮಿತಿಯಲ್ಲಿ ತೀರ್ಮಾನಿಸಲಾಗಿದೆ ಎಂದಿದ್ದಾರೆ. ವಿಧಾನಸೌಧದಲ್ಲಿ ಪ್ರಕೃತಿ ವಿಕೋಪದಿಂದ ಉದ್ಬವಿಸಬಹುದಾದ ಪರಿಸ್ಥಿತಿಯನ್ನು ಪರಾಮರ್ಶಿಸಲು ನಡೆದ ಸಚಿವ ಸಂಪುಟ ಉಪಸಮಿತಿ ಸಭೆಯ ಬಳಿಕ ಮಾತನಾಡಿದ ಅವರು, 19-08-2023ರಲ್ಲಿದ್ದಂತೆ 113 ತಾಲೂಕುಗಳ ಪೈಕಿ ಜಂಟಿ ಸಮೀಕ್ಷೆ ಮಾರ್ಗಸೂಚಿ ಅನ್ವಯ 62 ತಾಲೂಕುಗಳು ಬರ ಘೋಷಣೆಗೆ ಅರ್ಹವಾಗಿದೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ