Breaking News

ಉಸಿರೇ ಉಸಿರೇ’ ಚಿತ್ರದಲ್ಲಿನ ತಮ್ಮ ಪಾತ್ರಕ್ಕೆ ಡಬ್ಬಿಂಗ್ ಮುಗಿಸಿದ ಅಭಿನಯ ಚಕ್ರವರ್ತಿ

Spread the love

ಸಿರೇ ಉಸಿರೇ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ನಟ ಸುದೀಪ್ ತಮ್ಮ ಹುಟ್ಟು ಹಬ್ಬದ ಹಿಂದಿನ ದಿನ ಈ ಚಿತ್ರದ ಡಬ್ಬಿಂಗ್ ಮುಗಿಸಿಕೊಟ್ಟಿದ್ದಾರೆ.

ಸಿಸಿಎಲ್ ಕ್ರಿಕೆಟ್ ಮೂಲಕ ಕನ್ನಡ ಚಿತ್ರರಂಗದಲ್ಲಿ ತನ್ನದೇ ಐಡೆಂಟಿಟಿ ಹೊಂದಿರುವ ನಟ ರಾಜೀವ್. ಸದ್ಯ ಉಸಿರೇ ಉಸಿರೇ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ.

ರಾಜೀವ್ ಅವರ ಈ ಸಿನಿಮಾದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಈ ಚಿತ್ರದ ಶೂಟಿಂಗ್ ಮುಗಿಸಿರುವ ಕಿಚ್ಚ ತಮ್ಮ ಹುಟ್ಟುಹಬ್ಬದ ಹಿಂದಿನ ದಿನ ಈ ಚಿತ್ರದ ಡಬ್ಬಿಂಗ್ ಮುಗಿಸಿದ್ದಾರೆ. ಸುದೀಪ್​ ಡಬ್ಬಿಂಗ್ ಮಾಡುವ ವಿಡಿಯೋವನ್ನ ಚಿತ್ರತಂಡ ರಿವೀಲ್ ಮಾಡಿದೆ.

“ಇದೊಂದು ನವೀರಾದ ಪ್ರೇಮ ಕಥೆ. ಇದು ನನ್ನ ಮೊದಲ ನಿರ್ಮಾಣದ ಚಿತ್ರ.‌ ಚಿತ್ರ ನಿರ್ಮಾಣ ಮಾಡಲು ಕಿಚ್ಚ ಸುದೀಪ್ ಅವರೇ ಸ್ಫೂರ್ತಿ. ಅವರು ನನ್ನ ಬೆನ್ನೆಲುಬಾಗಿ ನಿಂತರು. ಜತೆಗೆ ಪ್ರಮುಖ ಪಾತ್ರದಲ್ಲಿ ಅಭಿನಯ ಕೂಡ ಮಾಡಿದ್ದಾರೆ. ಸುದೀಪ್ ಅವರಿಗೆ ಹಾಗೂ ನನ್ನ ಇಡೀ ತಂಡಕ್ಕೆ ಧನ್ಯವಾದ” ಎನ್ನುತ್ತಾರೆ ನಿರ್ಮಾಪಕ ಪ್ರದೀಪ್ ಯಾದವ್.


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ