Breaking News

ವನ್ಯಜೀವಿ ಮಾನವ ಸಂಘರ್ಷ ತಡೆಗೆ 500 ಕೋಟಿ ರೂ. ಅನುದಾನಕ್ಕೆ ಮನವಿ; ಸಚಿವ ಖಂಡ್ರೆ

Spread the love

ಬೆಂಗಳೂರು: ಕಳೆದ 15 ದಿನಗಳ ಅಂತರದಲ್ಲಿ ಮಾನವ ವನ್ಯಜೀವಿ ಸಂಘರ್ಷದಲ್ಲಿ 11 ಜನರು ಸಾವಿಗೀಡಾಗಿದ್ದು, ಅಮೂಲ್ಯ ಜೀವ ಹಾನಿ ತಪ್ಪಿಸಲು ಅಗತ್ಯ ಮತ್ತು ತುರ್ತು ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ.

ಆನೆಗಳು ನಾಡಿಗೆ ಬಾರದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕಾಗಿ ಮುಖ್ಯಮಂತ್ರಿಗಳಿಗೆ 500 ಕೋಟಿ ರೂ. ಅನುದಾನ ನೀಡುವಂತೆ ಮನವಿ ಮಾಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ವಿಕಾಸಸೌಧದಲ್ಲಿ ಇಂದು ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯ ಅರಣ್ಯ ಘಟಕದ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾನವ ಮತ್ತು ವನ್ಯ ಜೀವಿ ಸಂಘರ್ಷ ಇಂದು ನಿನ್ನೆಯದೇನಲ್ಲ. ಹಿಂದಿನಿಂದ ನಡೆಯುತ್ತಿದೆ. ಆದರೆ, ಅರಣ್ಯ ಪ್ರದೇಶ ಕಡಿಮೆ ಆಗುತ್ತಿದ್ದು, ಕಾಡು ಪ್ರಾಣಿಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸಂಘರ್ಷಗಳು ಹೆಚ್ಚಾಗುತ್ತಿವೆ ಎಂದು ತಿಳಿಸಿದರು.

ಈ ಬಾರಿ ವಾಡಿಕೆಗಿಂತ ಬಹಳ ಕಡಿಮೆ ಮಳೆ ಆಗಿದ್ದು, ಕಾಡಿನಲ್ಲಿ ಕುಡಿಯುವ ನೀರು ಮತ್ತು ಆಹಾರದ ಸಮಸ್ಯೆಯಿಂದಾಗಿ ಕಾಡು ಪ್ರಾಣಿಗಳು ನಾಡಿಗೆ ಬರುತ್ತಿವೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಅರಣ್ಯದೊಳಗೆ ವನ್ಯಜೀವಿಗಳಿಗೆ ಸೂಕ್ತ ಆಹಾರ ದೊರಕುವಂತೆ ಮಾಡುವ ಮಾರ್ಗೋಪಾಯಗಳ ಬಗ್ಗೆ ಚರ್ಚಿಸಲಾಗಿದೆ ಎಂದರು.


Spread the love

About Laxminews 24x7

Check Also

ಬೆಳಗಾವಿ ಜಲಾಶಯಗಳಲ್ಲಿ ಜೀವಕಳೆ

Spread the love ಬೆಳಗಾವಿ: ಜಿಲ್ಲೆಯಲ್ಲಿ ಈ ಬಾರಿ ಪೂರ್ವ ಮುಂಗಾರು ಉತ್ತಮವಾಗಿದೆ. ಜೂನ್‌ ಅಂತ್ಯದವರೆಗೆ ಮುಂಗಾರು 286.46 ಮಿ.ಮೀ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ