Breaking News

ಬ್ರಿಜ್ ಭೂಷಣ್ ಸಿಂಗ್ ವಿರುದ್ಧದ ಪೋಕ್ಸೋ ಕೇಸ್​: ಅಕ್ಟೋಬರ್​ 6ಕ್ಕೆ ತೀರ್ಪು

Spread the love

ನವದೆಹಲಿ: ಭಾರತೀಯ ಕುಸ್ತಿ ಸಂಸ್ಥೆಯ ನಿರ್ಗಮಿತ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಅಪ್ರಾಪ್ತ ಮಹಿಳಾ ಕುಸ್ತಿಪಟು ದಾಖಲಿಸಿದ್ದ ಪೋಕ್ಸೊ ಪ್ರಕರಣವನ್ನು ವಜಾ ಮಾಡಬೇಕೇ ಬೇಡವೇ ಎಂಬುದರ ತೀರ್ಪನ್ನು ಪಟಿಯಾಲ ಹೌಸ್ ಕೋರ್ಟ್ ಅಕ್ಟೋಬರ್ 6ಕ್ಕೆ ಮುಂದೂಡಿದೆ.

ದೂರು ನೀಡಿದ್ದ ಮಹಿಳಾ ಕುಸ್ತಿಪಟು ಕೇಸ್​ ವಾಪಸ್​ ಪಡೆದಿದ್ದು, ಪ್ರಕರಣವನ್ನು ಅಂತ್ಯಗೊಳಿಸಲು ದೆಹಲಿ ಪೊಲೀಸರು ಜೂನ್ 15 ರಂದು ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ. ಪ್ರಕರಣವನ್ನು ಮುಕ್ತಾಯಗೊಳಿಸುವ ಬಗ್ಗೆ ನ್ಯಾಯಾಲಯ ಇನ್ನಷ್ಟೇ ತೀರ್ಪು ನೀಡಬೇಕಾಗಿದೆ.

ನ್ಯಾಯಾಲಯದಲ್ಲಿ ಈ ಹಿಂದಿನ ವಿಚಾರಣೆಯ ವೇಳೆ, ಅಪ್ರಾಪ್ತ ಮಹಿಳಾ ಕುಸ್ತಿಪಟು ಮತ್ತು ಆಕೆಯ ತಂದೆಯ ಹೇಳಿಕೆ ಪಡೆದು, ಪ್ರಕರಣವನ್ನು ರದ್ದು ಮಾಡಲು ದೆಹಲಿ ಪೊಲೀಸರು ಕೋರ್ಟ್​ಗೆ ವರದಿ ನೀಡಿದ್ದಾರೆ. ಅಪ್ರಾಪ್ತೆ ಕುಸ್ತಿಪಟು ಸ್ವಯಂಪ್ರೇರಿತವಾಗಿ ಪ್ರಕರಣವನ್ನು ಹಿಂಪಡೆದಿದ್ದಾರೆ. ಹೀಗಾಗಿ ಕೇಸ್​ ರದ್ದು ಮಾಡಿ ಎಂದು ದೆಹಲಿ ಪೊಲೀಸರ ಪರವಾಗಿ ವಕೀಲ ಅತುಲ್ ಶ್ರೀವಾಸ್ತವ ವಾದ ಮಂಡಿಸಿದರು.

ಜೂನ್​ 15 ರಂದು ದೆಹಲಿ ಪೊಲೀಸರು ಪೋಕ್ಸೋ ಪ್ರಕರಣ ರದ್ದು ಮಾಡಲು ನೀಡಿರುವ ವರದಿಯನ್ನು ಕೋರ್ಟ್​ ಗಮನಿಸಿದ್ದು, ದೂರುದಾರರಾದ ಅಪ್ರಾಪ್ತ ಮಹಿಳಾ ಕುಸ್ತಿಪಟು ಮತ್ತು ಆಕೆಯ ತಂದೆಯಿಂದ ಹೇಳಿಕೆ ದಾಖಲಿಸಿದ್ದಾರೆ. ಕುಸ್ತಿಪಟು ತಂದೆ ಕೋಪದಲ್ಲಿ ಭರದಲ್ಲಿ ಬ್ರಿಜ್​ ಭೂಷಣ್​ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಸ್​ ನೀಡಿದ್ದೆ ಎಂದು ಹೇಳಿದ್ದಾರೆ. ತನಿಖೆ ನಡೆಸಿದ್ದ ದೆಹಲಿ ಪೊಲೀಸರು ಕೇಸ್​ನಲ್ಲಿ ಆರೋಪಕ್ಕೆ ಯಾವುದೇ ಪುರಾವೆಗಳು ಇಲ್ಲ ಎಂದು ವರದಿ ನೀಡಿದ್ದಾರೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ