Breaking News

ಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್.. ಇಂದಿನಿಂದ ರಾತ್ರಿ ಸೇವೆಗೆ ಹೆಚ್ಚುವರಿ ದರ ಸ್ಥಗಿತ, ಹಗಲಿನ ದರವೇ ನಿಗದಿ

Spread the love

ಬೆಂಗಳೂರು : ರಜತ ಮಹೋತ್ಸವದ ಸಂಭ್ರಮದಲ್ಲಿರುವ ಬಿಎಂಟಿಸಿ ತನ್ನ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದೆ.

ಇಂದಿನಿಂದಲೇ ಜಾರಿಗೆ ಬರುವಂತೆ ರಾತ್ರಿ ಪಾಳೆ ಸೇವೆಗೆ ಪಡೆಯುತ್ತಿದ್ದ ಒಂದೂವರೆ ಪಟ್ಟು ಹೆಚ್ಚು ಟಿಕೆಟ್ ದರವನ್ನು ರದ್ದುಪಡಿಸಿ ಹಗಲಿನಲ್ಲಿ ಪಡೆಯುವ ದರವನ್ನೇ ನಿಗದಿಪಡಿಸಿ ಆದೇಶ ಹೊರಡಿಸಿದೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಪ್ರಯಾಣಿಕರಿಗೆ ಉತ್ತಮ ಗುಣಮಟ್ಟದ ಸಮರ್ಪಕ ಸುರಕ್ಷಿತ ಸಾರಿಗೆ ಸೇವೆಯನ್ನು ಮಿತವ್ಯಯ ದರದಲ್ಲಿ ಒದಗಿಸುತ್ತಿದೆ. ಬೆಂಗಳೂರು ನಗರದಲ್ಲಿ ತಡರಾತ್ರಿ ಹಾಗೂ ಮುಂಜಾನೆ ಪ್ರಯಾಣಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ಸಂಸ್ಥೆಯು ರಾತ್ರಿ ಸೇವೆಗಳನ್ನು ಕಾರ್ಯಾಚರಣೆ ಮಾಡುತ್ತಿದೆ.

ಸಾಮಾನ್ಯ ಸಾರಿಗೆಗಳಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಏಕರೂಪದ ಪ್ರಯಾಣ ದರವನ್ನು ವಿಧಿಸುವ ನಿಟ್ಟಿನಲ್ಲಿ ಮುಂದಾಗಿದೆ. ಸಂಸ್ಥೆಯಿಂದ ಕಾರ್ಯಾಚರಣೆ ಮಾಡುವ ರಾತ್ರಿ ಸೇವೆ (Night Service) ಸಾರಿಗೆಗಳಿಗೆ ಸಾಮಾನ್ಯ ಸೇವೆಗಳ ಪ್ರಯಾಣ ದರವನ್ನು ಇಂದಿನಿಂದ ಜಾರಿಗೆ ಬರುವಂತೆ ನಿಗದಿಪಡಿಸಲಾಗಿದೆ. ಹಾಗಾಗಿ, ಹಗಲು ಪ್ರಯಾಣದ ದರವೇ ರಾತ್ರಿಯೂ ಪಡೆಯಲಾಗುತ್ತದೆ ಎಂದು ಬಿಎಂಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಬಸ್​ ಪಾಸ್​ ಮಾನ್ಯತಾ ಅವಧಿ ವಿಸ್ತರಿಸಿದ ಬಿಎಂಟಿಸಿ : 2022 23ನೇ ಸಾಲಿನ ಅಂತಿಮ ಸೆಮಿಸ್ಟರ್​ ಪದವಿ, ವೃತ್ತಿಪರ, ಸ್ನಾತಕೋತ್ತರ, ತಾಂತ್ರಿಕ ಹಾಗೂ ವೈದ್ಯಕೀಯ ವಿದ್ಯಾರ್ಥಿಗಳ ವಿದ್ಯಾರ್ಥಿ ಬಸ್‌ ಪಾಸ್ ಮಾನ್ಯತಾ ಅವಧಿಯನ್ನು ಸೆಪ್ಟೆಂಬರ್ 30 ರ ವರೆಗೆ ವಿಸ್ತರಿಸಿ ಬಿಎಂಟಿಸಿ ಕಳೆದ ಆಗಸ್ಟ್​ 14 ರಂದು ಆದೇಶ ಹೊರಡಿಸಿದೆ.


Spread the love

About Laxminews 24x7

Check Also

ದುಡಿಯುವ ಕಾರ್ಯಕರ್ತರ ಪಡೆ ರಚಿಸುವುದೇ ಕಾಂಗ್ರೆಸ್ ಪ್ರಚಾರ ಸಮಿತಿಯ ಉದ್ದೇಶ:ವಿನಯಕುಮಾರ ಸೊರಕೆ

Spread the love ಚಿಕ್ಕೋಡಿ-“ಸೇನಾಧಿಪತಿಗಳನ್ನು ಹುಟ್ಟುಹಾಕುದಷ್ಟೇ ಅಲ್ಲ, ಸೈನಿಕರ ಅವಶ್ಯಕತೆಯೂ ಕಾಂಗ್ರೆಸ್ ಪಕ್ಷಕ್ಕಿದೆ. ಹೀಗಾಗಿ ಪದಾಧಿಕಾರಿಗಳ ನೇಮಕದೊಂದಿಗೆ ಪಕ್ಷಕ್ಕೆ ದುಡಿಯುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ