Breaking News

ನಿಪ್ಪಾಣಿ ತಾಲೂಕಿನ ನಂತರ ಅಥಣಿ, ಕಾಗವಾಡ, ರಾಯಬಾಗ, ಚಿಕ್ಕೋಡಿ ಕ್ಷೇತ್ರಗಳಲ್ಲೂ ಸಂಚರಿಸಿ ಮೀಸಲಾತಿಯ ಹೋರಾಟದ ಜಾಗೃತಿ

Spread the love

ಚಿಕ್ಕೋಡಿ: ‘ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲಿ ಇಷ್ಟಲಿಂಗಪೂಜೆ ಮಾಡುವ ಮೂಲಕ ಸರ್ಕಾರದ ಗಮನ ಸಲ್ಲಿಸಿ ಮೀಸಲಾತಿಗಾಗಿ ಒತ್ತಡ ಹೇರಲಾಗುವುದು. ನಗರದಲ್ಲಿ ಸೆ.೧೦ರಂದು ಬೆಳಗಾವಿ ಜಿಲ್ಲಾ ಮಟ್ಟದ ಹೋರಾಟ ನಡೆಸಿ ಲಿಂಗಾಯತ ಸಮುದಾಯಕ್ಕೆ ೨ಎ ಮೀಸಲಾತಿ ಸಿಗಬೇಕು ಹಾಗೂ ಕೇಂದ್ರ ಸರ್ಕಾರವು ಓಬಿಸಿ ಪಟ್ಟಿಯಲ್ಲಿ ಸೇರ್ಪಡಿಸಿಕೊಳ್ಳಬೇಕೆಂದು ಒತ್ತಾಯಿಸಲಾಗುವುದು’ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಪೀಠಾಧಿಪತಿ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಚಿಕ್ಕೋಡಿ ಪ್ರವಾಸಿ ಮಂದಿರದಲ್ಲಿ ಪ್ರಸಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು ಸೆ ೧೦ರಂದು ಛತ್ರಪತಿ ಶಿವಾಜಿ ಮಹಾರಾಜ ಸಾಂಸ್ಕತಿಕ ಭವನದಲ್ಲಿ ಬೆಳಿಗ್ಗೆ ೧೦ ಗಂಟೆಗೆ ಎಲ್ಲರೂ ಸೇರಿ ಬಹಿರಂಗ ಸಭೆ ನಡೆಸಿ ಅಲ್ಲಿಂದ ಪಾದಯಾತ್ರೆಯ ಮೂಲಕ ರಾಷ್ಟ್ರೀಯ ಹೆದ್ದಾರಿಗೆ ಹೋಗಿ ೧೫ ನಿಮಿಷ ಇಷ್ಟಲಿಂಗದ ಪೂಜೆ ಮಾಡುವ ಮೂಲಕ ಸರ್ಕಾರದ ಗಮನ ಸೆಳೆಯಲಾಗುವುದು. ಎಲ್ಲ ವೀರಶೈವ ಸಮಾಜಬಾಂಧವರು ಈ ಹೋರಾಟದಲ್ಲಿ ಪಾಲ್ಗೊಳ್ಳಬೇಕು’ ಎಂದು ಮನವಿ ಮಾಡಿಕೊಂಡರು.

ನಿಪ್ಪಾಣಿ ತಾಲೂಕಿನ ನಂತರ ಅಥಣಿ, ಕಾಗವಾಡ, ರಾಯಬಾಗ, ಚಿಕ್ಕೋಡಿ ಕ್ಷೇತ್ರಗಳಲ್ಲೂ ಸಂಚರಿಸಿ ಮೀಸಲಾತಿಯ ಹೋರಾಟದ ಜಾಗೃತಿ ಮೂಡಿಸಲಾಗುವುದು’ ಎಂದರು.

ಬಸವ ಜಯ ಮೃತ್ಯುಂಜಯ ಸ್ವಾಮೀಜಿ,ಕೂಡಲಸಂಗಮ ಪಂಚಮಸಾಲಿ ಪೀಠದ ಪೀಠಾಧಿಪತಿ

ಈ ಸಂಧರ್ಭದಲ್ಲಿ ಸಾಹಿತಿ ಸಿದಗೌಡ ಪಾಟೀಲ, ಎಸ್.ವೈ ಹಂಜಿ,ಆಶೋಕ ಹರಗಾಪೂರೆ,ರಮೇಶ ಪಾಟೀಲ,ಸಿದಗೌಡ ಪಾಟೀಲ,ಕುಮಾರ ಪೊಲೀಸ್ ಪಾಟೀಲ,ಕಿರಣ ಪಾಂಗೇರೆ,ಹೊನ್ನಗೌಂಡ ಪಾಟೀಲ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು..


Spread the love

About Laxminews 24x7

Check Also

ಗೋಕಾಕ ಜಾತ್ರೆ:ದೇವಿಯರ ದರ್ಶನ ಪಡೆದ ಸಚಿವ ಸತೀಶ ಜಾರಕಿಹೊಳಿ ಹಾಗೂ ಪುತ್ರ ರಾಹುಲ್

Spread the loveಗೋಕಾಕ ಜಾತ್ರೆ:ದೇವಿಯರ ದರ್ಶನ ಪಡೆದ ಸಚಿವ ಸತೀಶ ಜಾರಕಿಹೊಳಿ ಹಾಗೂ ಪುತ್ರ ರಾಹುಲ್ ಜುಲೈ ಒಂದರಿಂದ ಆರಂಭಗೊಂಡಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ