Breaking News

ಇನ್ಮುಂದೆ ಮನೆಯಲ್ಲಿ ಕೂರಲ್ಲ, ಮತ್ತೆ ರಾಜ್ಯದ ಉದ್ದಗಲ ಪ್ರವಾಸ:B.S.Y.

Spread the love

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಪ್ರವಾಸ, ಹೋರಾಟ ಆರಂಭಿಸುತ್ತೇನೆ. ಲೋಕಸಭಾ ಚುನಾವಣೆಯಲ್ಲಿ 22 – 23 ಸ್ಥಾನ ಗೆಲ್ಲಲು ಬೇಕಾದ ಎಲ್ಲ ಪ್ರಯತ್ನ ನಡೆಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ ಪ್ರಕಟಿಸಿದ್ದಾರೆ.

 

ಡಾಲರ್ಸ್ ಕಾಲೋನಿಯಲ್ಲಿರುವ ಖಾಸಗಿ ನಿವಾಸ ಧವಳಗಿರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿನಿಂದ ಯಡಿಯೂರಪ್ಪ ಮನೆಯಲ್ಲಿ ಕೂರುವ ಪ್ರಶ್ನೆಯೇ ಇಲ್ಲ. ರಾಜ್ಯದ ಉದ್ದಗಲಕ್ಕೆ ಮತ್ತೆ ಓಡಾಟ ಮಾಡುತ್ತೇನೆ. ಹೋರಾಟ ಮಾಡುತ್ತೇನೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 22-23 ಸ್ಥಾನ ಗೆಲ್ಲಲೇಬೇಕು. ಆ ನಿಟ್ಟಿನಲ್ಲಿ ಏನೇನು ಪ್ರಯತ್ನ ಬೇಕೋ ಅದನ್ನು ಮಾಡುತ್ತೇನೆ. ನನ್ನ ಪ್ರವಾಸ ಮೂರ್ನಾಲ್ಕು ದಿನದಲ್ಲಿ ಆರಂಭವಾಗಲಿದೆ. ಮತ್ತೆ ರಾಜ್ಯ ರಾಜಕೀಯದಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಪಕ್ಷವನ್ನು ಸದೃಢಗೊಳಿಸುವ ನಿರ್ಧಾರವನ್ನು ಪ್ರಕಟಿಸಿದ್ದಾರೆ.

ಸರ್ಕಾರದ ಆಡಳಿತ ವೈಖರಿ ವಿಫಲವಾಗಿದ್ದು, ಕಾಂಗ್ರೆಸ್ ನಾಯಕರು ಜನ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಬರಗಾಲ ತಾಂಡವವಾಡುತ್ತಿದೆ. ವಿದ್ಯುತ್​ ಕಣ್ಣಾಮುಚ್ಚಾಲೆ ಆಡುತ್ತಿದೆ. ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ. ಖಂಡಿಸಿ, ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ನಾಳೆ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ. ಅಭಿವೃದ್ಧಿಯನ್ನು ಸಂಪೂರ್ಣವಾಗಿ ಮರೆತಿದ್ದಾರೆ. ಬರಗಾಲದಿಂದಾಗಿ ದನ ಕರುಗಳಿಗೆ ಕುಡಿಯಲು ನೀರಿಲ್ಲ, ಮೇವಿಲ್ಲ. ಜನ ಕಂಗಾಲಾಗಿದ್ದಾರೆ. ಆದರೆ, ರಾಜ್ಯ ಸರ್ಕಾರ ಬರಗಾಲ ಘೋಷಣೆಗೆ ಹಿಂದೆ ಮುಂದೆ ನೋಡುತ್ತಿದೆ. ನಮ್ಮ ಜಲಾಶಯದಲ್ಲಿ ನೀರಿಲ್ಲದಿದ್ದರೂ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುತ್ತಿದ್ದಾರೆ. ರೈತರು ಹೋರಾಟ ಮಾಡುತ್ತಿದ್ದರೂ ಸರ್ಕಾರ ನೀರು ಹರಿಸುವುದು ನಿಲ್ಲಿಸಿಲ್ಲ. ಸುಪ್ರೀಂ ಕೋರ್ಟ್​ನಲ್ಲಿ ವಾದ ಮಾಡುವಲ್ಲಿಯೂ ವಿಫಲವಾಗಿದೆ.

ವಿದ್ಯುತ್ ಬಿಲ್ ಹೆಚ್ಚಾಗಿದೆ. ಮೊದಲು ಸಾಮಾನ್ಯ ಜನ ಕೊಡುತ್ತಿದ್ದ ದರಕ್ಕಿಂತ ಎರಡು ಪಟ್ಟಾಗಿದೆ. ಹಾಲಿನ ದರ ಹೆಚ್ಚಾಗಿದೆ. ಸರ್ಕಾರ ವರ್ಗಾವಣೆ ದಂಧೆಯಲ್ಲಿ ಮುಳುಗಿದೆ. ಗುತ್ತಿಗೆದಾರರು ಹಿಂದಿನ ಸರ್ಕಾರದ ಕಾಮಗಾರಿ ಮುಗಿಸಿ ಬಿಲ್ ಗೆ ಕಾಯುತ್ತಿದ್ದರೂ ಅದಕ್ಕೆ ಕಮೀಷನ್ ಕೇಳಲಾಗುತ್ತಿದೆ. ಶಾಸಕರಿಗೆ ಅನುದಾನ ಕೊಡುತ್ತಿಲ್ಲ. ನಾವು ರೈತರಿಗೆ ನೀಡುತ್ತಿದ್ದ 4 ಸಾವಿರ ಹಣ ನಿಲ್ಲಿಸಿದ್ದಾರೆ. ಎನ್‌ಇಪಿ ರದ್ದು ಮಾಡಿದ್ದಾರೆ. ನಮ್ಮ ಕಾರ್ಯಕರ್ತರು, ಸಾಮಾಜಿಕ ಜಾಲತಾಣದಲ್ಲಿ ತೊಡಗಿರುವವರ ಮೇಲೆ ಕೇಸ್ ಹಾಕುತ್ತಿದ್ದಾರೆ. ಖಂಡಿಸಿ ನಾಳೆ 15-20 ಸಾವಿರ ಜನ ಸೇರಿಸಿ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ಮಾಡುತ್ತಿದ್ದೇವೆ.


Spread the love

About Laxminews 24x7

Check Also

ದಿ. ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯ ಹಿನ್ನೆಲೆಯಲ್ಲಿ, ಇಂದು ಯಮಕನಮರಡಿ ಗ್ರಾಮದಲ್ಲಿ ನಡೆದ ಪೂರ್ವಭಾವಿ ಸಭೆ

Spread the love ದಿ. ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯ ಹಿನ್ನೆಲೆಯಲ್ಲಿ, ಇಂದು ಯಮಕನಮರಡಿ ಗ್ರಾಮದಲ್ಲಿ ನಡೆದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ