Breaking News

ಉತ್ತರಕನ್ನಡ: 1 ಸಾವಿರ ಲಂಚ ಪಡೆದ ಅಧಿಕಾರಿಗೆ 1 ವರ್ಷ ಜೈಲು ಶಿಕ್ಷೆ

Spread the love

ಕಾರವಾರ(ಉತ್ತರಕನ್ನಡ): ತಂದೆಯ ಹೆಸರಿನಲ್ಲಿದ್ದ ಜಮೀನನ್ನು ವಾರಸಾ ಮಾಡಲು ಒಂದು ಸಾವಿರ ಲಂಚ ಪಡೆದಿದ್ದ ಶಿರಸ್ತೇದಾರನ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ವಿಶೇಷ ಮತ್ತು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲಯ 1 ವರ್ಷ ಜೈಲು ಹಾಗೂ 10 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ‌.

 

ಯಲ್ಲಾಪುರ ತಹಶೀಲ್ದಾರ ಕಚೇರಿಯ ಶಿರಸ್ತೆದಾರ ವಿನಾಯಕ ಪಾಯ್ಕಾರಾಮ ಗಾಂವಕಾರ ಶಿಕ್ಷೆಗೊಳಗಾದವರು. ಈತ ಯಲ್ಲಾಪುರ ತಾಲೂಕಿನ ಹಿತ್ಲಳ್ಳಿ ನಾಗೇಂದ್ರ ಶಿವರಾಮ ಹೆಗಡೆ ಎಂಬುವವರ ತಂದೆಯವರ ಹೆಸರಿನಲ್ಲಿದ್ದ ಜಮೀನಿನ ವಾರಸಾ ಬದಲಾಯಿಸಲು ಹಣಕ್ಕೆ ಬೇಡಿಕೆ ಇಟ್ಟಿದ್ದರು. ಬಳಿಕ ಆಪಾದಿತ ಅಧಿಕಾರಿ ಟ್ರ್ಯಾಪ್ ಕಾರ್ಯಾಚರಣೆ ವೇಳೆ ಪಿರ್ಯಾದಿಯಿಂದ ರೂ.1 ಸಾವಿರ ಲಂಚದ ಹಣವನ್ನು ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಆಪಾದಿತನ ವಿರುದ್ಧ ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ-1988 , ಕಲಂ 07 ರ ಅಡಿಯಲ್ಲಿ 1 ವರ್ಷ ಸಾದಾ ಕಾರಾವಾಸ ಹಾಗೂ ರೂ. 5000 ದಂಡ ಹಾಗೂ ಕಲಂ: 13 (1) (ಡಿ) ಸಹಿತ 13(2)ರ ಅಡಿಯಲ್ಲಿ 1 ವರ್ಷ ಸಾದಾ ಕಾರಾಗೃಹ ವಾಸ ಹಾಗೂ ರೂ. 5000 ದಂಡ ವಿಧಿಸಿದೆ. ಸದರಿ ಆದೇಶಗಳನ್ನು ಸಮರ್ತಿತವಾಗಿ ಜಾರಿ ಮಾಡಿದ್ದು, ದಂಡ ಪಾವತಿಸದೇ ಇದ್ದಲ್ಲಿ ಹೆಚ್ಚುವರಿ 6 ತಿಂಗಳ ಸಾದಾ ಕಾರವಾಸ ಶಿಕ್ಷಗೆ ಗುರಿಪಡಿಸಿ ಆದೇಶಿಸಿದೆ. ಕರ್ನಾಟಕ ಲೋಕಾಯುಕ್ತ ಸಂಸ್ಥೆಯ ಪರವಾಗಿ ಲಕ್ಷ್ಮೀಕಾಂತ ಎಮ್. ಪ್ರಭು, ವಿಶೇಷ ಸರ್ಕಾರಿ ಅಭಿಯೋಜಕರು, ಕರ್ನಾಟಕ ಲೋಕಾಯುಕ್ತ ಕಾರವಾರ ಇವರು ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು.

 ಕಳ್ಳತನವಾಗಿದ್ದ ಬೈಕ್​ನೊಂದಿಗೆ ಪೊಲೀಸರುಪ್ರತ್ಯೇಕ ಪ್ರಕರಣ – ಬೈಕ್​ ಕಳ್ಳರು ಪೊಲೀಸರ ಬಲೆಗೆ: ಜಿಲ್ಲೆಯ ವಿವಿಧೆಡೆಗಳಲ್ಲಿ ಬೈಕ್​ ಕಳ್ಳತನ ನಡೆಸಿದ್ದ ನಾಲ್ವರು ಆರೋಪಿಗಳನ್ನು ಹೊನ್ನಾವರ ತಾಲೂಕಿನ ಮಂಕಿ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರು ಕಳ್ಳತನ ಮಾಡಿದ್ದ ಬರೋಬ್ಬರಿ 15 ಬೈಕ್​ಗಳನ್ನು ಇದೇ ವೇಳೆ ವಶಕ್ಕೆ ಪಡೆದಿದ್ದಾರೆ.


Spread the love

About Laxminews 24x7

Check Also

ವರದಕ್ಷಿಣೆ ಕಿರುಕುಳ ಆರೋಪ, ಐಎಸ್‌ಡಿ ಡಿವೈಎಸ್‌ಪಿ ವಿರುದ್ಧ ಎಫ್ಐಆರ್

Spread the love ಬೆಂಗಳೂರು : ಡಿವೈಎಸ್‌ಪಿಯೊಬ್ಬರ ವಿರುದ್ಧ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. 41 ವರ್ಷದ ಮಹಿಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ