Breaking News

ರೈಲ್ವೆ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ಲಕ್ಷಾಂತರ ರೂಪಾಯಿ ವಂಚನೆ.. ಹುಬ್ಬಳ್ಳಿಯಲ್ಲಿ ಆರೋಪಿ ಬಂಧನ

Spread the love

ಹುಬ್ಬಳ್ಳಿ: ರೈಲ್ವೆ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ಲಕ್ಷಾಂತರ ರೂಪಾಯಿ ವಂಚಿಸಿದ ವ್ಯಕ್ತಿಯನ್ನು ಕಸಬಾಪೇಟ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ವಿಜಯಪುರ ಮೂಲದ ಪ್ರಶಾಂತ್ ದೇಶಪಾಂಡೆ ಎಂಬಾತ ಬಂಧಿತ ಆರೋಪಿಯಾಗಿದ್ದಾನೆ.

 

ಈತ ಹಳೇಹುಬ್ಬಳ್ಳಿ ನೇಕಾರ ನಗರದ ವ್ಯಕ್ತಿಗೆ ರೈಲ್ವೆ ಇಲಾಖೆಯಲ್ಲಿ ಉನ್ನತ ಮಟ್ಟದ ಅಧಿಕಾರಿಗಳು ಪರಿಚಯವಿದ್ದಾರೆ. ಈಗಾಗಲೇ ಅನೇಕ ಜನರಿಗೆ ನೌಕರಿ ಕೊಡಿಸಿರುವುದಾಗಿ ಸುಳ್ಳು ನೇಮಕಾತಿ ಪತ್ರ ಮತ್ತು ಜಾಯ್ನಿಂಗ್ ಲೆಟರ್ ತೋರಿಸಿ ನಂಬಿಕೆ ಬರುವಂತೆ ಮಾಡಿದ್ದನು. ರೈಲ್ವೆ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ನಂಬಿಸಿ 31.14 ಲಕ್ಷ ರೂಪಾಯಿ ಹಣ ಪಡೆದು ವಂಚನೆ ಮಾಡಿದ್ದ. ಈ‌ ಸಂಬಂದ ವಂಚನೆಗೊಳಗಾದ ವ್ಯಕ್ತಿ ಕಸಬಾಪೇಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.‌

ಪೊಲೀಸ್ ಇನ್‌ಸ್ಪೆಕ್ಟರ್ ರಾಘವೇಂದ್ರ ಹಳ್ಳೂರ ನೇತೃತ್ವದ ವಿಶೇಷ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದೆ. ಈ ಆರೋಪಿಯ ಮೇಲೆ ಶಿವಮೊಗ್ಗ ರಿಪ್ಪನ್ ಪೇಟೆ ಪೊಲೀಸ್ ಠಾಣೆ, ಬಾಗಲಕೋಟೆ ನವನಗರ ಠಾಣೆ ಸೇರಿ ರಾಜ್ಯದ ಅನೇಕ ಕಡೆ ವಂಚನೆ ಪ್ರಕರಣಗಳು ದಾಖಲಾಗಿವೆ ಎಂದು ಹುಬ್ಬಳ್ಳಿ -ಧಾರಾವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ