Breaking News

ಧಾರವಾಡ: ಅಧಿಕಾರ ಸ್ವೀಕರಿಸಿದ ದಿನವೇ ಹೃದಯಾಘಾತದಿಂದ ಅಧಿಕಾರಿ ಸಾವು..

Spread the love

ಧಾರವಾಡ: ಅಧಿಕಾರ ಸ್ವೀಕರಿಸಿದ ದಿನವೇ ಅಧಿಕಾರಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟ ಹೃದಯವಿದ್ರಾವಕ ಘಟನೆ ನಗರದಲ್ಲಿ ನಿನ್ನೆ(ಸೋಮವಾರ) ನಡೆದಿದೆ.

ಬಡ್ತಿ ಪಡೆದುಕೊಂಡು ಅಧಿಕಾರ ಸ್ವೀಕಾರ ಮಾಡಿದ್ದ ಅಧಿಕಾರಿ ಜಯಪ್ರಕಾಶ ಕಲಕೋಟಿ ಮೃತಪಟ್ಟವರು. ಇವರು ಧಾರವಾಡ ಜಿಲ್ಲಾ ಖಜಾನೆ ಸಹಾಯಕ ನಿರ್ದೇಶಕ ಹುದ್ದೆ ಅಲಂಕರಿಸಿದ್ದರು.

ನಿನ್ನೆ ಬೆಳಗ್ಗೆ ಅಧಿಕಾರ ಸ್ವೀಕಾರ ಮಾಡಿದ್ದರು. ಸಂಜೆ‌ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಈ ಮೊದಲು ಉತ್ತರ ಕನ್ನಡ ಜಿಲ್ಲೆಯ ಜೋಯಿಡಾದ ತಾಲೂಕು ಖಜಾನೆ ಕಚೇರಿಯಲ್ಲಿ ಜಯಪ್ರಕಾಶ ಕೆಲಸ ಮಾಡುತ್ತಿದ್ದರು. 15 ದಿನಗಳ ಹಿಂದೆ ಬಡ್ತಿ ಲಭಿಸಿತ್ತು. ಧಾರವಾಡ ಕಚೇರಿಗೆ ಆಗಮಿಸಿ ಅಧಿಕಾರ ಸ್ವೀಕರಿಸಿದ್ದರು. ಸಂಜೆ ಹೃದಯಾಘಾತ ಸಂಭವಿಸಿದ ನಂತರ, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಹೃದಯಾಘಾತದಿಂದ ಹೆಡ್​ ಕಾನ್​ಸ್ಟೇಬಲ್ ಸಾವು: ವಿಜಯನಗರ ಜಿಲ್ಲೆಯ ತಾಲೂಕಿನ ಕಮಲಾಪುರದ ಪೊಲೀಸ್ ಠಾಣೆಯ ಹೆಡ್​ ಕಾನ್​ಸ್ಟೇಬಲ್​ ರಾಘವೇಂದ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮೃತ ರಾಘವೇಂದ್ರ ಅವರು ಪತ್ನಿ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಮನೆಯ ಆಧಾರಸ್ತಂಭವನ್ನು ಕಳೆದುಕೊಂಡ ಕುಟುಂಬ ದುಃಖದಲ್ಲಿ ಮುಳುಗಿದೆ.


Spread the love

About Laxminews 24x7

Check Also

ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ ಬಿಜೆಪಿ ಸೆಡ್ಡು!

Spread the love ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ