Breaking News

ಕುಂದಾನಗರಿ‌ ಜನರಿಗೆ ಕೇಂದ್ರ ರೈಲ್ವೆ ಇಲಾಖೆ ಸಿಹಿ ಸುದ್ದಿ

Spread the love

ಬೆಳಗಾವಿ : ಕುಂದಾನಗರಿ‌ ಜನರಿಗೆ ಕೇಂದ್ರ ರೈಲ್ವೆ ಇಲಾಖೆ ಸಿಹಿ ಸುದ್ದಿ ಕೊಟ್ಟಿದೆ. ಬೆಳಗಾವಿ ಜಿಲ್ಲೆಯ ರೈಲು ಪ್ರಯಾಣಿಕರ ಬಹುದಿನಗಳ ಬೇಡಿಕೆಯಾಗಿದ್ದ ಧಾರವಾಡ – ಮೈಸೂರು ಏಕ್ಸಪ್ರೆಸ್ ರೈಲನ್ನು ಬೆಳಗಾವಿಯವರೆಗೆ ವಿಸ್ತರಣೆ ಮಾಡಿ ರೈಲ್ವೆ ಸಚಿವಾಲಯ ಆದೇಶ ನೀಡಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ( Iranna Kadadi ) ಮಾಹಿತಿ‌ ನೀಡಿದ್ದಾರೆ.

ಈ‌ ಕುರಿತು ಮಾಹಿತಿ ನೀಡಿರುವ ಸಂಸದ ಈರಣ್ಣ ಕಡಾಡಿ. ರೈಲು ಸಂಖ್ಯೆ 17302 – ಬೆಳಗಾವಿಯಿಂದ ರಾತ್ರಿ 07.45 ಗಂಟೆಗೆ ಹೊರಟು ಮರುದಿನ ಮುಂಜಾನೆ 07.10 ಕ್ಕೆ ಮೈಸೂರಿಗೆ ತಲುಪಲಿದೆ. ರೈಲು ಸಂಖ್ಯೆ 17301 ಮೈಸೂರಿನಿಂದ ರಾತ್ರಿ 10.30 ಗಂಟೆಗೆ ಹೊರಟು ಮರುದಿನ ಮುಂಜಾನೆ 10.45 ಗಂಟೆಗೆ ಬೆಳಗಾವಿಗೆ ತಲುಪಲಿದೆ. ( Belagavi – Mysore Train )

 

 

ಈ ತಿಂಗಳ ಕೊನೆಯ ವಾರದಲ್ಲಿ ಬೆಳಗಾವಿ-ಮೈಸೂರು ಏಕ್ಸಪ್ರೆಸ್ ರೈಲು ತನ್ನ ಸಂಚಾರ ಆರಂಭಿಸಲಿದೆ. ಮನವಿಗೆ ಸ್ಪಂದಿಸಿ ಬೆಳಗಾವಿ-ಮೈಸೂರು ಏಕ್ಸಪ್ರೆಸ್ ರೈಲು ಪ್ರಾರಂಭಿಸಲು ಅನುಮತಿ ನೀಡಿದ ಕೇಂದ್ರ ರೈಲ್ವೆ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರಿಗೆ ಹಾಗೂ ರೈಲ್ವೆ ಇಲಾಖೆಯ ಅಧಿಕಾರಿಗಳಿಗೆ ಈ ಮೂಲಕ ಧನ್ಯವಾದಗಳನ್ನು ತಿಳಿಸಿದ್ದಾರೆ


Spread the love

About Laxminews 24x7

Check Also

ಕೆಎಸ್ಆರ್​ಟಿಸಿಯಲ್ಲಿ ಲಂಚಾವತಾರಗೂಗಲ್ ಪೇ, ಫೋನ್ ಪೇ ಮೂಲಕ ಲಂಚ ಪಡೆದ ಅಧಿಕಾರಿಗಳು!

Spread the loveಬೆಂಗಳೂರು, ಆಗಸ್ಟ್ 25: ಈ ಹಿಂದೆ ಬಿಎಂಟಿಸಿಯಲ್ಲಿ ಕರ್ತವ್ಯ ವಹಿಸಲು ಅಧಿಕಾರಿಗಳು ಚಾಲಕ, ನಿರ್ವಾಹಕರಿಂದ ಲಕ್ಷಾಂತರ ರೂಪಾಯಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ