Home / ರಾಜಕೀಯ / ಅಭಿಮಾನಿಗಳ ಮೇಲೆ ಪ್ರೀತಿಯ ಧಾರೆಯೆರೆದ ಶಾರುಖ್​ ಖಾನ್​​…ಜವಾನ್​ ನಟನ ಫ್ಯಾನ್ಸ್ ಫುಲ್​ ಖುಷ್​

ಅಭಿಮಾನಿಗಳ ಮೇಲೆ ಪ್ರೀತಿಯ ಧಾರೆಯೆರೆದ ಶಾರುಖ್​ ಖಾನ್​​…ಜವಾನ್​ ನಟನ ಫ್ಯಾನ್ಸ್ ಫುಲ್​ ಖುಷ್​

Spread the love

ಸಕಾರಾತ್ಮಕ ಸ್ಪಂದನೆಗೆ ಶಾರುಖ್​ ಖಾನ್​ ಪ್ರತಿಕ್ರಿಯಿಸಿದ್ದಾರೆ.

ದಕ್ಷಿಣ ಚಿತ್ರರಂಗದ ಯಶಸ್ವಿ ನಿರ್ದೇಶಕ ಅಟ್ಲೀ ನಿರ್ದೇಶನದಲ್ಲಿ ಮೂಡಿ ಬಂದ ಜವಾನ್​ ಸಿನಿಮಾವನ್ನು ಅಭಿಮಾನಿಗಳು ತುಂಬು ಹೃದಯದಿಂದ ಸ್ವೀಕರಿಸಿದ್ದಾರೆ.

ಬಿಗ್​ ಸ್ಟಾರ್ ಕಾಸ್ಟ್, ಬಿಗ್​ ಬಜೆಟ್​ ಸಿನಿಮಾ ಮೇಲೆ ಅಭಿಮಾನಿಗಳು ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಪ್ರೇಕ್ಷಕರ ನಿರೀಕ್ಷೆ ತಲುಪುವಲ್ಲಿ ಸಿನಿಮಾ ಯಶ ಕಂಡಿದೆ. ಸೋಷಿಯಲ್​ ಮೀಡಿಯಾದಲ್ಲಿ ಜವಾನ್​ ಟ್ರೆಂಡಿಂಗ್​ನಲ್ಲಿದೆ. ಪ್ರೇಕ್ಷಕರು ಸಿನಿಮಾ ಕುರಿತು ತಮ್ಮ ಪಾಸಿಟಿವ್​ ವಿಮರ್ಶೆ ಕೊಡುತ್ತಿದ್ದಾರೆ. ಮತ್ತೊಂದೆಡೆ ಚಿತ್ರಮಂದಿರಗಳ ಬಳಿ ಅಭಿಮಾನಿಗಳು ಸಂಭ್ರಮಾಚರಣೆ ಮಾಡಿದ್ದಾರೆ. ಅಭಿಮಾನಿಗಳ ಉತ್ಸಾಹ ವರ್ಣಿಸಲು ಪದಗಳ ಕೊರತೆಯಾಗಿದೆ. ಜವಾನ್​ ಚಿತ್ರವನ್ನು ಅದ್ಧೂರಿಯಾಗಿ ಸ್ವಾಗತಿಸಿರುವ ಅಭಿಮಾನಿಗಳಿಗೆ ಸೂಪರ್​ ಸ್ಟಾರ್​ ಶಾರುಖ್​ ಖಾನ್​ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ. ಜೊತೆಗೆ ಅಭಿಮಾನಿಗಳ ಮೇಲೆ ಪ್ರೀತಿಯ ಧಾರೆಯೆರೆದಿದ್ದಾರೆ.

 

 

ಎಸ್​ಆರ್​ಕೆ ಪ್ರೀತಿಪೂರ್ವಕ ಸಂದೇಶ: ಬಹುನಿರೀಕ್ಷಿತ ಸಿನಿಮಾ ಇಂದು ಮುಂಜಾನೆ 6 ಗಂಟೆಗೆ ಬಿಡುಗಡೆ ಆಗಿದೆ. ತಮ್ಮ ಚಿತ್ರ ತೆರೆಕಂಡ ಕೆಲವೇ ಗಂಟೆಗಳ ಬಳಿಕ ಕೋಟ್ಯಂತರ ಅಭಿಮಾನಿಗಳ ಮೆಚ್ಚಿನ ನಟ ಶಾರುಖ್​ ಖಾನ್​ ಸೋಷಿಯಲ್​ ಮೀಡಿಯಾ ಪ್ಲಾಟ್​ಫಾರ್ಮ್​ X (ಹಿಂದಿನ ಟ್ವಿಟರ್​) ನಲ್ಲಿ ಹೃದಯಸ್ಪರ್ಶಿ ಬರಹ ಹಂಚಿಕೊಂಡಿದ್ದಾರೆ. ಚಿತ್ರಮಂದಿರಗಳ ಹೊರಗೆ ಮತ್ತು ಒಳಗೆ ತಮ್ಮ ಮೇಲೆ ಅಚಲ ಪ್ರೀತಿ, ಬೆಂಬಲ ತೋರಿದ ಅಭಿಮಾನಿಗಳನ್ನುದ್ದೇಶಿಸಿ ಎಸ್​ಆರ್​ಕೆ ಪ್ರೀತಿಪೂರ್ವಕ ಸಂದೇಶ ಹಂಚಿಕೊಂಡಿದ್ದಾರೆ.

 

 

ಶಾರುಖ್​ ಖಾನ್​ ಟ್ವೀಟ್: ಬಾಲಿವುಡ್​​ ಐಕಾನ್​​ ಈ ರೀತಿಯಾಗಿ ಬೆಂಬಲಿಗರಿಗೆ ತಮ್ಮ ಕೃತಘ್ಞತೆ ವ್ಯಕ್ತಪಡಿಸಿದ್ದಾರೆ. ”ವಾವ್​, ನಾನಿದಕ್ಕೆ ಸಮಯ ತೆಗೆದುಕೊಳ್ಳಬೇಕು. ಎಲ್ಲಾ ಫ್ಯಾನ್​ ಕ್ಲಬ್​​ ಮತ್ತು ನಿಮ್ಮೆಲ್ಲರಿಗೂ ಧನ್ಯವಾದ ಹೇಳಬೇಕು. ಸಂತೋಷದಿಂದ ಥಿಯೇಟರ್​ಗಳಿಗೆ ಹೋದ ಎಲ್ಲರಿಗೂ ಧನ್ಯವಾದಗಳು. ಜವಾನ್​ನನ್ನು ಪ್ರೀತಿಸಿದ್ದಕ್ಕಾಗಿ, ನಿಮ್ಮನ್ನು ಪ್ರೀತಿಸುತ್ತೇನೆ” ಎಂದು ಬರೆದುಕೊಂಡಿದ್ದಾರೆ


Spread the love

About Laxminews 24x7

Check Also

ಅಧಿಕಾರಿಗಳ ಭರವಸೆ: ಧರಣಿ ಅಂತ್ಯ.

Spread the love ರಾಮದುರ್ಗ: ಗ್ರಾಮ ಪಂಚಾಯ್ತಿಗಳಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಹಣವನ್ನು ಸಂಬಂಧಿಸಿದ ಅಧಿಕಾರಿಗಳಿಂದ ಸರ್ಕಾರಕ್ಕೆ ಭರಿಸುವ ಭರವಸೆಯನ್ನು ತಾಲ್ಲೂಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ