Breaking News
Home / ರಾಜಕೀಯ / ಎಸ್‌ಬಿಐನಿಂದ 2,000 ಪಿಒ ಹುದ್ದೆಗಳಿಗೆ ಅರ್ಜಿ ಆಹ್ವಾನ

ಎಸ್‌ಬಿಐನಿಂದ 2,000 ಪಿಒ ಹುದ್ದೆಗಳಿಗೆ ಅರ್ಜಿ ಆಹ್ವಾನ

Spread the love

ಭಾರತೀಯ ಸ್ಟೇಟ್​ ಬ್ಯಾಂಕ್​ನಲ್ಲಿ ಖಾಲಿ ಇರುವ ಪಿಒ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪದವಿ ಹೊಂದಿರಬೇಕು.

ಭಾರತೀಯ ಸ್ಟೇಟ್​ ಬ್ಯಾಂಕ್​ನಿಂದ ಪ್ರೊಬೇಷನರಿ ಆಫೀಸರ್​ (ಪಿಒ) ಹುದ್ದೆ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ದೇಶಾದ್ಯಂತ ಒಟ್ಟು 2,000 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ದೇಶಾದ್ಯಂತ ನೇಮಕಾತಿ ನಡೆಯಲಿದೆ. ಪದವಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

 ಅಧಿಸೂಚನೆವಿದ್ಯಾರ್ಹತೆ: ಅಧಿಕೃತ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಮತ್ತು ಅಂತಿಮ ವರ್ಷದಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದು, ಫಲಿತಾಂಶದ ವೇಳೆ ಪದವಿ ಪ್ರಮಾಣ ಪತ್ರ ಹೊಂದುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ: ಅಭ್ಯರ್ಥಿಗಳು ಕನಿಷ್ಠ 21 ಮತ್ತು ಗರಿಷ್ಠ 30 ವರ್ಷದ ವಯೋಮಿತಿ ಹೊಂದಿರಬೇಕು. ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ 3 ವರ್ಷ ವಿನಾಯಿತಿ ಇದೆ.

ವೇತನ: ಮಾಸಿಕ 36,000 -63,840 ರೂವರೆಗೆ ವೇತನ. ಆಯ್ಕೆಯಾದ ಅಭ್ಯರ್ಥಿಗಳು ಪಿಎಫ್​, ಎಚ್‌ಆರ್​ಎ, ಡಿಎ, ಪಿಂಚಣಿ ಸೌಲಭ್ಯ ಹೊಂದಿರುತ್ತಾರೆ.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಸಾಮಾನ್ಯ, ಇಡಬ್ಲ್ಯೂಸಿ ಮತ್ತು ಒಬಿಸಿ ಅಭ್ಯರ್ಥಿಗಳು 750 ರೂ ಅರ್ಜಿ ಶುಲ್ಕ ಭರಿಸಬೇಕಿದ್ದು, ಇತರೆ ಮೀಸಲಾತಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.

ಆಯ್ಕೆ: ಪ್ರೈಮರಿ ಪರೀಕ್ಷೆ, ಮೇನ್ಸ್​, ಸೈಕೋಮೆಟ್ರಿಕ್​ ಪರೀಕ್ಷೆ, ಗ್ರೂಪ್​ ಎಕ್ಸ್ಸೈಸ್​, ಸಂದರ್ಶನ ಅಥವಾ ಗ್ರೂಪ್​ ಡಿಸ್ಕಶನ್​, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ನಡೆಸಲಾಗುವುದು.

ಅಭ್ಯರ್ಥಿಗಳು ಸೆಪ್ಟೆಂಬರ್​ 7ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 27. ನೇಮಕಾತಿ ಪ್ರೈಮರಿ ಪರೀಕ್ಷೆ ಅಕ್ಟೋಬರ್​ ಎರಡನೇ ವಾರದಲ್ಲಿ ನಡೆಸುವ ಸಾಧ್ಯತೆ ಇದೆ.

ಅಭ್ಯರ್ಥಿಗಳು bank.sbi/careers/current-opening ಜಾಲತಾಣದ ಮೂಲಕವೇ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಶುಲ್ಕವನ್ನು ಇದೇ ಲಿಂಕ್​ ಮೂಲಕ ಭರಿಸಬೇಕು. ಈ ಕುರಿತು ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಅಭ್ಯರ್ಥಿಗಳು sbi.co.in ಈ ಜಾಲತಾಣಕ್ಕೆ ಭೇಟಿ ನೀಡಬಹುದು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ