Breaking News

ಶರದ್ ಪವಾರ ದಿಗಂಬರ ಕಾಮತ್ ಅವರ ಭೇಟಿ ಭಾರೀ ಚರ್ಚೆಗೆ ಕಾರಣ

Spread the love

ಪಣಜಿ : ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ ಮಂಗಳವಾರ ಗೋವಾ ಕಾಂಗ್ರೆಸ್ ಅಧ್ಯಕ್ಷ ಗಿರೀಶ್ ಚೋಡಂಕರ್ ಮತ್ತು ವಿರೋಧ ಪಕ್ಷದ ನಾಯಕ ದಿಗಂಬರ ಕಾಮತ್ ಅವರನ್ನು ಭೇಟಿ ಮಾಡಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ.

ರಾಜ್ಯ ಭೇಟಿ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರನ್ನು ಭೇಟಿಯಾಗಿ ಚರ್ಚಿಸಿದ್ದು, ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಎನ್ ಸಿಪಿ ಜತೆಗೆ ಮೈತ್ರಿ ಮಾಡುವ ಹಿನ್ನೆಲೆಯಲ್ಲಿ ಭೇಟಿಯಾಗಿದ್ದಾರೆ ಎನ್ನಲಾಗುತ್ತಿದೆ.

ಸಭೆಯ ಬಳಿಕ ಮಾತನಾಡಿದ ಚೋಡಂಕರ್ ಅವರು, 2022 ಗೋವಾ ವಿಧಾನಸಭೆ ಚುನಾವಣೆಯಲ್ಲಿ ಎನ್‌ಸಿಪಿ ಜೊತೆಗೆ ಮೈತ್ರಿ ಆಗಬಹುದು ಎಂಬ ಸಾಧ್ಯತೆಗಳನ್ನು ತಳ್ಳಿಹಾಕಿದರು.

ಇದೊಂದು, ಸೌಹಾರ್ದಯುತ ಭೇಟಿಯಾಗಿತ್ತು. ಭೇಟಿ ಸಂದರ್ಭದಲ್ಲಿ ರಾಜಕಾರಣ ಚರ್ಚೆಯಾಗಲಿಲ್ಲ ಎಂದು ಅವರು ತಿಳಿಸಿದರು. ಶರದ್ ಪವಾರ್ ಅವರ ಜೊತೆಗೆ, ಅವರ ಪುತ್ರಿ ಸಂಸದೆ ಸುಪ್ರಿಯಾ ಸುಳೆ ಅವರು ಇದ್ದರು.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ