Breaking News

ಬಗಲಗುಂಟೆ ವ್ಯಾಪ್ತಿಯಲ್ಲಿ ತಾಯಿ – ಮಗನ ಹತ್ಯೆ ಪ್ರಕರಣ: ಪ್ರಿಯಕರನ ಬಂಧನ

Spread the love

ಬೆಂಗಳೂರು : ಬಗಲಗುಂಟೆ ಠಾಣಾ ವ್ಯಾಪ್ತಿಯ ರವೀಂದ್ರನಾಥ ಗುಡ್ಡೆಯಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣದ ಆರೋಪಿ ಶೇಖರ್ ಎಂಬಾತನನ್ನು ಬಂಧಿಸಲಾಗಿದೆ.

ನವನೀತಾ (35) ಹಾಗೂ ಸಾಯಿ ಸೃಜನ್ (8) ನನ್ನು ಹತ್ಯೆ ಮಾಡಿದ್ದ ಆಕೆಯ ಪ್ರಿಯಕರ ಶೇಖರ್​ನನ್ನು ಬಗಲಗುಂಟೆ ಪೊಲೀಸರು ಬಂಧಿಸಿದ್ದಾರೆ.

ಕೊಲೆಯಾದ ನವನೀತಾ ತನ್ನ ಪತಿಯನ್ನು ತೊರೆದು ಮಗನೊಂದಿಗೆ 2 ವರ್ಷಗಳಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದಳು. ಈ ವೇಳೆ, ನವನೀತಾಳಿಗೆ ಆರೋಪಿ ಶೇಖರ್ ಪರಿಚಯವಾಗಿತ್ತು. ಬಳಿಕ ಇಬ್ಬರೂ ಪರಸ್ಪರ ಪ್ರೀತಿಸಲಾರಂಭಿಸಿದ್ದರು. ಆದರೆ, ಇತ್ತೀಚಿಗೆ ನವನೀತ ಶೇಖರ್​ನನ್ನು ಬಿಟ್ಟು ಲೋಕೇಶ್ ಎಂಬಾತನೊಂದಿಗೆ ಸಂಪರ್ಕ ಹೊಂದಿದ್ದಳು. ಇದರಿಂದ ಸಿಟ್ಟಿಗೆದ್ದಿದ್ದ ಶೇಖರ್, ಲೋಕೇಶ್​ನ ಸಹವಾಸ ನಿಲ್ಲಿಸುವಂತೆ ನವನೀತಾಳಿಗೆ ಎಚ್ಚರಿಕೆ ಸಹ ನೀಡಿದ್ದ. ಆದರೂ ನವನೀತ ಲೋಕೇಶ್ ಜೊತೆ ಸಂಪರ್ಕದಲ್ಲಿದ್ದಳು.

ಸೋಮವಾರ (4/09/2023) ಎಂದಿನಂತೆ ನವನೀತಾಳ ಮನೆಗೆ ಬಂದಿದ್ದ ಶೇಖರ್ ನವನೀತಾಳ ಮಗನನ್ನು ಮನೆಯಿಂದ ಆಚೆ ಕಳುಹಿಸಿ ಆಕೆಯೊಂದಿಗೆ ಗಲಾಟೆ ಆರಂಭಿಸಿದ್ದ. ಈ ವೇಳೆ ಚಾಕುವಿನಿಂದ ಅವರ ಕುತ್ತಿಗೆಗೆ ಇರಿದು ಕೊಲೆ ಮಾಡಿದ್ದ. ಬಳಿಕ ಮನೆಗೆ ಬಂದ ನವನೀತಾರ ಮಗನಿಗೆ ಮ್ಯಾಜಿಕ್ ಹೇಳಿಕೊಡುತ್ತೇನೆ ಎಂದು ನಂಬಿಸಿ ಆತನ ಎರಡೂ ಕೈಕಾಲುಗಳನ್ನು ಕಟ್ಟಿದ್ದ. ನಂತರ ತಲೆ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿ, ಮೃತ ದೇಹಗಳನ್ನು ರೂಮಿನಲ್ಲಿ ಮಂಚದ ಮೇಲೆ ಎಸೆದು ಪರಾರಿಯಾಗಿದ್ದ.

ಹತ್ಯೆಯ ಬಳಿಕ ಅಕ್ಕಪಕ್ಕದ ಏರಿಯಾ ಜನರ ಬಳಿ ನವನೀತಾ ನನಗೆ ಮೋಸ ಮಾಡಿದ್ದಾಳೆ, ಆದ್ದರಿಂದ ಆಕೆಯನ್ನು ಕೊಲೆ ಮಾಡಿದ್ದೇನೆ ಎಂದು ಹೇಳಿಕೊಂಡಿದ್ದ. ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದ ಬಗಲಗುಂಟೆ ಠಾಣಾ ಪೊಲೀಸರು ಸದ್ಯ ಆರೋಪಿಯನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ