Breaking News
Home / ಜಿಲ್ಲೆ / ಮೈಸೂರ್ / ಕಾಲಾವಕಾಶ ತೆಗೆದುಕೊಂಡು ಶಾಲೆ ತೆರೆಯುವುದು ಸೂಕ್ತ: ಪ್ರತಾಪ್ ಸಿಂಹ

ಕಾಲಾವಕಾಶ ತೆಗೆದುಕೊಂಡು ಶಾಲೆ ತೆರೆಯುವುದು ಸೂಕ್ತ: ಪ್ರತಾಪ್ ಸಿಂಹ

Spread the love

ಮಡಿಕೇರಿ: ಕಾಲಾವಕಾಶ ತೆಗೆದುಕೊಂಡು ಪೋಷಕರು ಹಾಗೂ ಶಿಕ್ಷಕ ಸಮುದಾಯವನ್ನು ಕೊರೊನಾ ಟೆಸ್ಟ್ ತಪಾಸಣೆ ಬಳಿಕ ಶಾಲೆ ತೆರೆಯುವ ತೀರ್ಮಾನ ತೆಗೆದುಕೊಳ್ಳುವುದು ಸೂಕ್ತ ಎಂದು ಸಂಸದ ಪ್ರತಾಪ್ ಸಿಂಹ ಅಭಿಪ್ರಾಯಪಟ್ಟರು.ಮಡಿಕೇರಿಯಲ್ಲಿ ಮಾತಾನಾಡಿದ ಅವರು, ಶಾಲೆಗಳನ್ನು ಆದಷ್ಟು ಬೇಗ ತೆರೆಯಬೇಕು. ಹಾಗೆಯೇ ಬೇಡ ಎನ್ನುವ ಭಾವನೆ ಇದೆ.

ಈಗಾಗಲೇ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಅವರು ಎಲ್ಲರೊಂದಿಗೆ ಶಾಲೆ ತೆರೆಯುವ ಬಗ್ಗೆ ಸಮಾಲೋಚನೆ ಮಾಡಿದ್ದಾರೆ. ದೆಹಲಿಯ ಎನ್‍ಸಿಆರ್ ಭಾಗದಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಶಾಲೆಗಳನ್ನು ತೆರೆದಿರುವ ಉದಾಹರಣೆಗಳಿವೆ. ಅದಕ್ಕೂ ಮೊದಲು ಪೂರ್ವ ಸಿದ್ಧತೆಗಳನ್ನು ತೆಗೆದುಕೊಳ್ಳುವುದು ಒಳಿತು ಎಂದರು.

ಉಪ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಆರ್‍ಆರ್ ನಗರದಲ್ಲಿ ಕನಿಷ್ಠ 40 ಸಾವಿರ ಮತ್ತು ಶಿರಾ ಕ್ಷೇತ್ರದಲ್ಲಿ 25 ಸಾವಿರ ಮತಗಳ ಅಂತರದಿಂದ ಪಕ್ಷದ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಿಪಬ್ಲಿಕ್ ಟಿವಿಯ ಮುಖ್ಯಸ್ಥರಾದ ಅರ್ನಬ್ ಗೋಸ್ವಾಮಿ ಅವರನ್ನು ಪೊಲೀಸರು ಬಲವಂತವಾಗಿ ಬಂಧಿಸಿರುವ ಬಗ್ಗೆ ಮಾತನಾಡಿ, ಬಾಳಾಠಾಕ್ರೆ ಅವರನ್ನು ಮಹಾರಾಷ್ಟ್ರದ ಹುಲಿ ಎನ್ನುತ್ತಿದ್ದರು. ಇದನ್ನು ನೋಡಿದರೆ ಹುಲಿ ಎದುರಿಸಲು ಇಲಿ ಹುಟ್ಟಿಕೊಂಡಿದೆ ಅನ್ನಿಸುತ್ತಿದೆ. ಉದ್ಧವ್ ಠಾಕ್ರೆ ಒಂದು ರಾಜ್ಯದ ಸಿಎಂ ಆಗಿ ಪೊಲೀಸರನ್ನು ಕಳುಹಿಸಿ ಬಂಧಿಸುವುದು ಒಳ್ಳೆಯ ಬೆಳವಣಿಗೆ ಅಲ್ಲ. ಮಾಧ್ಯಮಗಳು ಅವುಗಳ ಕರ್ತವ್ಯವನ್ನು ನಿರ್ವಹಿಸುತ್ತಿವೆ. ಮಾಧ್ಯಮಗಳ ಟೀಕೆಗಳನ್ನು ಸಕಾರಾತ್ಮಕವಾಗಿ ತೆಗೆದುಕೊಳ್ಳಬೇಕು ಎಂದು ತಿಳಿಸಿದರು.


Spread the love

About Laxminews 24x7

Check Also

ಆರೋಪಿ ಫಯಾಜ್‌ ನ್ಯಾಯಾಂಗ ಬಂಧನಕ್ಕೆ!

Spread the loveಹುಬ್ಬಳ್ಳಿ : ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯ ಹತ್ಯೆ(student murder) ಆರೋಪಿ ಫಯಾಜ್‌(Fayaz) ಎಂಬುವವನನ್ನ ಕೋರ್ಟ್‌ ಇಂದು ನ್ಯಾಯಾಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ