Breaking News

ಜೆಡಿಎಸ್ ಏಕಾಂಗಿಯಾಗಿ ಆದರೂ ಚುನಾವಣೆ ಸ್ಪರ್ಧಿಸಲಿ, ಬಿಜೆಪಿ ಜೊತೆ ಮೈತ್ರಿಯಾದರೂ ಮಾಡಿಕೊಳ್ಳಲಿ. ನಾವು ಆ ಬಗ್ಗೆ ಹಿಂದೆಯೂ ತಲೆ ಕೆಡಿಸಿಕೊಂಡಿಲ್ಲ,

Spread the love

ಬೆಂಗಳೂರು: ಜೆಡಿಎಸ್ ಏಕಾಂಗಿಯಾಗಿ ಆದರೂ ಚುನಾವಣೆ ಸ್ಪರ್ಧಿಸಲಿ, ಬಿಜೆಪಿ ಜೊತೆ ಮೈತ್ರಿಯಾದರೂ ಮಾಡಿಕೊಳ್ಳಲಿ. ನಾವು ಆ ಬಗ್ಗೆ ಹಿಂದೆಯೂ ತಲೆ ಕೆಡಿಸಿಕೊಂಡಿಲ್ಲ, ಮುಂದೆಯೂ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದರು.

ನಾವು ಆ ಬಗ್ಗೆ ಹಿಂದೆಯೂ ತಲೆ ಕೆಡಿಸಿಕೊಂಡಿಲ್ಲ, ಮುಂದೆಯೂ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದರು.

ಸದಾಶಿವನಗರದ ನಿವಾಸದ ಬಳಿ ಮಾತನಾಡುತ್ತಾ, ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಪ್ರಾರಂಭವಾಗಿದೆ. ಅವರು ನಮ್ಮ ಮೈತ್ರಿ ಬಗ್ಗೆ ತಲೆ ಕೆಡಿಸಿಕೊಳ್ಳೋದು ಬೇಡ ಎಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ನಾವು ಅವರ ಸುದ್ದಿಗೆ ಹೋಗಿಲ್ಲ. ಈ ಹಿಂದೆ ಹಿರಿಯರಾದ ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು ಏಕಾಂಗಿಯಾಗಿ ಹೋರಾಡುತ್ತೇವೆ ಎಂದಿದ್ದರು. ಹಾಗೆಂದಿದ್ದ ಅವರ ಮಾತು, ಅವರ ಸಿದ್ಧಾಂತ ಈಗ ಎಲ್ಲಿ ಹೋಯಿತು? ದೇವೇಗೌಡರು ಹಾಗೂ ಕುಮಾರಸ್ವಾಮಿ ಈ ಹಿಂದೆ ನೀಡಿದ್ದ ಹೇಳಿಕೆಗಳನ್ನು, ನಿಲುವುಗಳನ್ನು ಮಾಧ್ಯಮದವರು ಕೇಳಬೇಕು ಎಂದು ಟಾಂಗ್ ನೀಡಿದರು.

ಜೆಡಿಎಸ್ ಬಿಜೆಪಿ ಮೈತ್ರಿಗೆ ನಮ್ಮ ಯಾವುದೇ ಅಭ್ಯಂತರವಿಲ್ಲ. ಅವರ ರಾಜಕೀಯ ನಿಲುವುಗಳ ಬಗ್ಗೆ ಯಾವ ನಾಯಕರು ಪ್ರತಿಕ್ರಿಯೆ ನೀಡಬೇಕೋ ಅವರು ನೀಡುತ್ತಾರೆ. ಅವರ ರಾಜಕೀಯ ಅಸ್ತಿತ್ವಕ್ಕಾಗಿ ಅವರು ತೀರ್ಮಾನ ಮಾಡುತ್ತಾರೆ. ಅದರ ಬಗ್ಗೆ ನಾನು ಮಾತನಾಡುವುದಿಲ್ಲ ಎಂದು ತಿಳಿಸಿದರು. 2018 ರಲ್ಲಿ ಮೈತ್ರಿ ಮಾಡಿಕೊಳ್ಳುವಾಗ ರೊಟ್ಟಿ ಹಳಸಿರಲಿಲ್ಲವೇ?. ಈಗ ಕಾಂಗ್ರೆಸ್​​​​​ನವರು ಮಾತನಾಡುತ್ತಿದ್ದಾರೆ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆಗೆ, ಅವರ ಬಗ್ಗೆ ಮೊದಲ ದಿನದಿಂದಲೂ ನಮಗೆ ಗೊತ್ತು. ಒಂದೊಂದು ದಿನ ಒಂದೊಂದು ಮಾತನಾಡುತ್ತಿದ್ದಾರೆ?. ಅವರು ಮಾತನಾಡುತ್ತಲೇ ಇರಲಿ. ನಾನು ಕೇಳಿದ ಪ್ರಶ್ನೆಗಳಿಗೆ ಮೊದಲು ಅವರ ಬಳಿ ಉತ್ತರ ಕೇಳಿ ಎಂದರು.

ಮೈತ್ರಿ ವಿಚಾರ ಪ್ರಾರಂಭಿಕ ಹಂತದಲ್ಲಿದೆ: ಜೆಡಿಎಸ್​ ಬಿಜೆಪಿಮೈತ್ರಿವಿಚಾರವಾಗಿ ಮಾಜಿ ಸಿಎಂ ಹೆಚ್​ ಡಿ ಕುಮಾರಸ್ವಾಮಿ ಎಲ್ಲ ಪ್ರಾರಂಭಿಕ


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ